Download Our App

Follow us

Home » ರಾಜಕೀಯ » ಹೊಸ ವರ್ಷದಂದು ಅಮಿತ್ ಶಾ ಭೇಟಿಯಾದ ಬಿ.ವೈ ವಿಜಯೇಂದ್ರ..!

ಹೊಸ ವರ್ಷದಂದು ಅಮಿತ್ ಶಾ ಭೇಟಿಯಾದ ಬಿ.ವೈ ವಿಜಯೇಂದ್ರ..!

ಬೆಂಗಳೂರು : ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಅವರು ಹೊಸ ವರ್ಷದಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ, ಶುಭಾಶಯ ಕೋರಿ ಆಶೀರ್ವಾದ ಪಡೆದುಕೊಂಡರು.

ಈ ವೇಳೆ ಬಿ.ವೈ ವಿಜಯೇಂದ್ರ ಅವರು, ಕರ್ನಾಟಕದಲ್ಲಿ ಪಕ್ಷ ಸಂಘಟಿಸುವ ನಿಟ್ಟಿನಲ್ಲಿ ಕಳೆದ ವರ್ಷದಿಂದೀಚೆಗೆ ಹಮ್ಮಿಕೊಂಡಿರುವ ಕಾರ್ಯಕ್ರಮಗಳು, ಹೋರಾಟಗಳು ಹಾಗೂ ಕಾಂಗ್ರೆಸ್ ಆಡಳಿತದ ಪರಿಣಾಮವಾಗಿ ಪ್ರಸ್ತುತ ರಾಜ್ಯದಲ್ಲಿ ಉದ್ಭವಿಸಿರುವ ಅನೇಕ ಸಮಸ್ಯೆಗಳು, ಕಾಂಗ್ರೆಸ್ ಸರ್ಕಾರದ ಸಚಿವರುಗಳ ವಿರುದ್ಧದ ಆರೋಪಗಳ ಕುರಿತು ಹಾಗೂ ಮುಂಬರುವ ದಿನಗಳಲ್ಲಿ ಸಂಘಟನೆಯನ್ನು ಮತ್ತಷ್ಟು ಬಲ ವೃದ್ಧಿಗೊಳಿಸಲು ಯೋಜಿಸಿರುವ ಕಾರ್ಯಕ್ರಮಗಳ ಕುರಿತು ವಿವರಿಸಿದ್ದಾರೆ. ಅದಕ್ಕೆ ಸೂಕ್ತ ಮಾರ್ಗದರ್ಶನವನ್ನು ನೀಡುವಂತೆ ಅಮಿತ್ ಶಾ ಬಳಿ ಕೋರಿದ್ದಾರೆ.

ಅಮಿತ್ ಶಾ ಅವರನ್ನು ಭೇಟಿ ಮಾಡಿದ ಖುಷಿಯನ್ನು ಬಿ.ವೈ ವಿಜಯೇಂದ್ರ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ. ದೇಶ ಸುಭದ್ರತೆಗಾಗಿ ಪ್ರಧಾನಿಗಳೊಂದಿಗೆ ಹೆಗಲಿಗೆ ಹೆಗಲು ಕೊಟ್ಟು ಐತಿಹಾಸಿಕ ಹೆಜ್ಜೆಗಳನ್ನಿಡುತ್ತಿರುವ ಮಾನ್ಯ ಅಮಿತ್ ಶಾ ಜೀ ಯವರು ಪಕ್ಷ ಸಂಘಟನೆಗಾಗಿಯೂ ಅಷ್ಟೇ ಬದ್ಧತೆ ಹಾಗೂ ಕಾಳಜಿ ವಹಿಸುವುದು ಪ್ರತಿಯೊಬ್ಬ ಕಾರ್ಯಕರ್ತನಲ್ಲಿ ಆತ್ಮವಿಶ್ವಾಸದ ಛಲ ತುಂಬಲು ಕಾರಣವಾಗಿದೆ, ಅವರ ಸಂಘಟನಾ ಸಾಮರ್ಥ್ಯದ ಚತುರತೆ ಪಕ್ಷ ಕಟ್ಟುವ ಕಾಯಕದಲ್ಲಿ ಸದಾ ನನಗೆ ಪ್ರೇರಣೆಯ ಶಕ್ತಿಯಾಗಿದೆ. ಇಂದಿನ ಅವರ ಭೇಟಿಯ ಕ್ಷಣಗಳು ಎಂದಿನಂತೆ ಇನ್ನಷ್ಟು ಉತ್ಸಾಹತುಂಬಿ ಸಂಘಟನೆಯನ್ನು ನಿರೀಕ್ಷೆಯ ಗುರಿ ತಲುಪಿಸಲು ಆತ್ಮವಿಶ್ವಾಸ ತುಂಬಿತು ಎಂದು ತಮ್ಮ ಫೇಸ್​​ಬುಕ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ನ್ಯೂ ಇಯರ್​​ ಸೆಲೆಬ್ರೇಷನ್​ಗೆ ಸೇರಿದ್ದ ಜನರ ಮೇಲೆ ಟ್ರಕ್ ಹತ್ತಿಸಿದ ಚಾಲಕ – 10 ಮಂದಿ ಸಾವು..!

Leave a Comment

DG Ad

RELATED LATEST NEWS

Top Headlines

ಸಚಿವ ಪ್ರಿಯಾಂಕ್​ ಖರ್ಗೆ ರಾಜೀನಾಮೆಗೆ ‘ಕೇಸರಿ’ ಬಿಗಿಪಟ್ಟು – ಜೂ.ಖರ್ಗೆ ನಿವಾಸದ ಬಳಿ ಭಾರೀ ಹೈಡ್ರಾಮಾ!

ಕಲಬುರಗಿ : ಗುತ್ತಿಗೆದಾರ ಸಚಿನ್ ಪಾಂಚಾಳ್​​ ಆತ್ಮಹತ್ಯೆ ಪ್ರಕರಣವನ್ನು ಅಸ್ತ್ರ ಮಾಡಿಕೊಂಡಿರುವ ಬಿಜೆಪಿ ನಾಯಕರು ಕಾಂಗ್ರೆಸ್ ಸರ್ಕಾರದ ವಿರುದ್ಧ ಸಮರ ಸಾರಿದ್ದಾರೆ. ಸಚಿವ ಪ್ರಿಯಾಂಕ್​ ಖರ್ಗೆಯನ್ನೇ ಟಾರ್ಗೆಟ್ ಮಾಡಿರುವ

Live Cricket

Add Your Heading Text Here