Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ..!

ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ವಿಧಾನಸೌಧದಲ್ಲಿ ಸಂಪುಟ ಸಭೆ ನಡೆಯಲಿದ್ದು, ಸರ್ಕಾರಿ ಹುದ್ದೆಗಳಲ್ಲಿ ಕ್ರೀಡಾ ಕೋಟಾ ವಿಸ್ತರಣೆ ಸೇರಿದಂತೆ ಹಲವು ಮಹತ್ವದ ವಿಚಾರಗಳು ಚರ್ಚೆಗೆ ಬರಲಿವೆ.

ಎಲ್ಲಾ ಇಲಾಖೆಗಳಲ್ಲೂ ಕ್ರೀಡಾ ಕೋಟಾ ಹೆಚ್ಚಿಸುವ ಬಗ್ಗೆ ಸಂಪುಟ ನಿರ್ಧರಿಸುವ ಸಾಧ್ಯತೆ ಇದೆ. ರಾಜ್ಯದಲ್ಲಿ ಶೇಕಡಾ 2ರಷ್ಟು ಕ್ರೀಡಾ ಕೋಟಾ ನೀಡುವ ಸಾಧ್ಯತೆ ಇದೆ. ಹಟ್ಟಿ ಚಿನ್ನದ ಗಣಿ ಪುನರಾರಂಭದ ಬಗ್ಗೆಯೂ ಸಂಪುಟ ಅಂತಿಮ ತೀರ್ಮಾನ ಮಾಡುವ ಸಾಧ್ಯತೆಗಳಿವೆ. ಮತ್ತೊಂದು ಕಡೆ ಕನ್ನಡ ಬೋರ್ಡ್​ ವಿಚಾರವಾಗಿ ರಾಜ್ಯಪಾಲರು ಸುಗ್ರೀವಾಜ್ಞೆ ಕಡತ ವಾಪಸ್​ ಕಳಿಸಿದ್ದು, ಇದರ ಸಂಬಂಧ ಏನ್​​ ಹೆಜ್ಜೆ ಇಡಬೇಕು ಎಂದೂ ಸಂಪುಟದಲ್ಲಿ ಚರ್ಚೆ ನಡೆಸುವ ಸಾಧ್ಯತೆ ಇದೆ.

ಲೋಕಸಭೆ ಎಲೆಕ್ಷನ್​ ದಿನಾಂಕ ಶೀಘ್ರವೇ ಘೋಷಣೆ ಆಗುವ ಹಿನ್ನೆಲೆಯಲ್ಲಿ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆಗಳೂ ಇವೆ.

ಇದನ್ನೂ ಓದಿ : ಕಾಶಿ ಕೇಸ್​ನಲ್ಲಿ ಹಿಂದೂಗಳಿಗೆ ಭರ್ಜರಿ ಜಯ – ಜ್ಞಾನವಾಪಿ ಮಸೀದಿಯಲ್ಲಿ ಪೂಜೆ ನಡೆಸಲು ಅನುಮತಿ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರು : ಕುಡಿದ ಮತ್ತಲ್ಲಿ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಹೊಡೆದಾಟ – ವಿಡಿಯೋ ವೈರಲ್​..!

ಬೆಂಗಳೂರು : ಬೆಳಂದೂರಿನ ಜುನ್ನಸಂದ್ರದ ಅಪಾರ್ಟ್​ಮೆಂಟ್​ನ ಬೇಸ್​ಮೆಂಟ್​​ನಲ್ಲಿ ಯುವಕರ ಮಧ್ಯೆ ಗಲಾಟೆ ನಡೆದಿದೆ. ಕುಡಿದ ನಶೆಯಲ್ಲಿ ಹುಡುಗರು ಹೊಡೆದಾಡಿಕೊಂಡಿದ್ದು, ಪುಂಡರ ಕ್ವಾಟ್ಲೆಗೆ ಅಕ್ಕಪಕ್ಕದ ನಿವಾಸಿಗಳು ಹೈರಾಣಾಗಿದ್ದಾರೆ. ಯುವಕರ

Live Cricket

Add Your Heading Text Here