ಕನ್ನಡದ ಜನಪ್ರಿಯ ರಿಯಾಲಿಟಿ ಶೋ ಬಿಗ್ ಬಾಸ್ ಸೀಸನ್ 11 ದಿನಕ್ಕೊಂದು ಟ್ವಿಸ್ಟ್ ಪಡೆದುಕೊಂಡು ಮುನ್ನುಗ್ಗುತ್ತಿದೆ. ಈ ವಾರ ಕ್ಯಾಪ್ಟನ್ಸಿ ರೇಸ್ ಸ್ಪರ್ಧೆ ಜೋರಾಗಿದ್ದು, ಕ್ಯಾಪ್ಟನ್ಸಿ ಆಟದ ಅವಕಾಶಕ್ಕಾಗಿ ಚೈತ್ರಾ ಸಣ್ಣ ಮಕ್ಕಳಂತೆ ಕಣ್ಣೀರು ಹಾಕಿದ್ದಾರೆ.
ನಿನ್ನೆ ನಡೆದ ಒಂದು ಪಂದ್ಯದಲ್ಲಿ ಗೌತಮಿ ತಂಡದ ಪರ ಚೈತ್ರಾ ಹಾಗೂ ಮಂಜು ಆಡಿದ್ದರು. ಚೈತ್ರಾ ಹಾಗೂ ಮಂಜು ಜೋಡಿ ಸೋಲನ್ನು ಕಂಡಿದೆ. ನಂತರದ ಗೇಮ್ಗೆ ಚೈತ್ರಾ ಅವರನ್ನು ಉಸ್ತುವಾರಿಯಾಗಿ ಗೌತಮಿ ನೇಮಕ ಮಾಡಿದ್ದರು. ಇದಕ್ಕೆ ಬೇಸರಗೊಂಡ ಚೈತ್ರಾ, ನನಗೆ ಆಡಕ್ಕೆ ಕೊಡಲ್ಲ. ಉಸ್ತುವಾರಿ ಮಾಡಲ್ಲ ಅಂತಿನಿ, ನನಗೆ ಅದನ್ನೇ ಕೊಡ್ತಾರೆ. ಕಳೆದ ವಾರ ಎಲಿಮಿನೇಟ್ ಆಗಿ ವಾಪಸ್ ಬಂದಿದ್ದೀನಿ. ಇಡೀ ವಾರ ಆಟ ಆಡಿಲ್ಲ. ಆಡ್ತೀನಿ ಅಂದರೆ ಆಡಕ್ಕೆ ಕೊಡಲ್ಲ. ಆಮೇಲೆ ಆಟಕ್ಕೆ ಉಂಟು, ಲೆಕ್ಕಕ್ಕೆ ಇಲ್ಲ ಅಂತಾರೆ ಎನ್ನುತ್ತ ಕಣ್ಣೀರು ಇಟ್ಟಿದ್ದಾರೆ.
ನಂತರ ನಡೆದ ಟಾಸ್ಕ್ನಲ್ಲೂ ಮತ್ತೆ ಗೌತಮಿ ತಂಡ ಸೋಲನ್ನು ಕಂಡಿದೆ. ಹೀಗಾಗಿ ಬಿಗ್ಬಾಸ್, ನಿಮ್ಮ ತಂಡದಿಂದ ಕ್ಯಾಪ್ಟನ್ಸಿ ರೇಸ್ನಿಂದ ಒಬ್ಬರನ್ನು ಹೊರಗೆ ಇಡಬೇಕು ಎನ್ನುತ್ತಾರೆ. ಆಗ ಗೌತಮಿ ಚೈತ್ರಾ ಹೆಸರನ್ನು ತೆಗೆದುಕೊಂಡಿದ್ದಾರೆ. ಇದು ಚೈತ್ರಾಗೆ ಸಹಿಸಲಾರ ಸಂಕಟ ಆಗಿದೆ.
ಇದನ್ನೂ ಓದಿ : ಸೆಟ್ಟೇರಿತು ಹರೀಶ್ ರಾಜ್ ನಿರ್ದೇಶನದ “ವೆಂಕಟೇಶಾಯ ನಮಃ” ಚಿತ್ರ..!