Download Our App

Follow us

Home » ಮೆಟ್ರೋ » ಬೆಂಗಳೂರಲ್ಲಿ ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ..!

ಬೆಂಗಳೂರಲ್ಲಿ ಬೈಕ್​ಗೆ ಗುದ್ದಿ ಫ್ಲೈಓವರ್​ನಿಂದ ಕೆಳಗೆ ಬಿದ್ದ ಕಾರು – ಐವರಿಗೆ ಗಂಭೀರ ಗಾಯ..!

ಬೆಂಗಳೂರು : ಯಶವಂತಪುರ ಸರ್ಕಲ್​ ಬಳಿ ಮುಂಜಾನೆ 3.45ರ ಸುಮಾರಿಗೆ ಬೈಕ್​ಗೆ ಗುದ್ದಿದ ಕಾರು ಫ್ಲೈಓವರ್​ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು, ಬೈಕ್​ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

ಸ್ಯಾಂಕಿ ರಸ್ತೆಯಿಂದ ತುಮಕೂರು ಕಡೆ ತೆರಳುತ್ತಿದ್ದ ಕಾರು ಬೈಕ್​​ಗೆ ಡಿಕ್ಕಿ ಹೊಡೆದು ಫ್ಲೈಓವರ್​​​​​ ಮೇಲೆ ಡಿವೈಡರ್​​​ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಬಂದು ಫ್ಲೈ ಓವರ್ ಮೇಲಿನ ಡಿವೈಡರ್​ಗೆ ಡಿಕ್ಕಿ ಹೊಡೆದ ನಂತರ ಕಾರು ಬೈಕ್​ಗೆ ಗುದ್ದಿ ಕೆಳಗೆ ಬಿದ್ದಿದೆ. ಕೂಡಲೇ ಹೊಯ್ಸಳ ಪೊಲೀಸರು ಬಂದು ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.

ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಪಘಾತಕ್ಕೀಡಾದ ಕಾರಿನಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು, ಕುಡಿದು ವಾಹನ ಚಲಾಯಿಸಿರುವ ಬಗ್ಗೆ ಮೆಡಿಕಲ್​ ಟೆಸ್ಟ್​ ಮಾಡಲಿದ್ದಾರೆ.

ಇದನ್ನೂ ಓದಿ : ಮುಡಾ ಅಕ್ರಮಕ್ಕೆ ಮೊದಲ ವಿಕೆಟ್ ಪತನ – ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಸಸ್ಪೆಂಡ್..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here