ಬೆಂಗಳೂರು : ಯಶವಂತಪುರ ಸರ್ಕಲ್ ಬಳಿ ಮುಂಜಾನೆ 3.45ರ ಸುಮಾರಿಗೆ ಬೈಕ್ಗೆ ಗುದ್ದಿದ ಕಾರು ಫ್ಲೈಓವರ್ನಿಂದ ಕೆಳಗೆ ಬಿದ್ದು ಅಪಘಾತ ಸಂಭವಿಸಿದೆ. 40 ಅಡಿ ಎತ್ತರದಿಂದ ಕೆಳಗೆ ಬಿದ್ದ ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಕಾರಿನಲ್ಲಿದ್ದ ಮೂವರು, ಬೈಕ್ನಲ್ಲಿದ್ದ ಇಬ್ಬರಿಗೆ ಗಂಭೀರ ಗಾಯಗಳಾಗಿವೆ.
ಸ್ಯಾಂಕಿ ರಸ್ತೆಯಿಂದ ತುಮಕೂರು ಕಡೆ ತೆರಳುತ್ತಿದ್ದ ಕಾರು ಬೈಕ್ಗೆ ಡಿಕ್ಕಿ ಹೊಡೆದು ಫ್ಲೈಓವರ್ ಮೇಲೆ ಡಿವೈಡರ್ನಿಂದ ಹಾರಿ ಬಿದ್ದಿದೆ. ತಮಿಳುನಾಡು ನೋಂದಣಿ TN37 DH9484 ಸಂಖ್ಯೆಯ ಕಾರು ಇದಾಗಿದ್ದು ಯಶವಂತಪುರ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ವೇಗವಾಗಿ ಬಂದು ಫ್ಲೈ ಓವರ್ ಮೇಲಿನ ಡಿವೈಡರ್ಗೆ ಡಿಕ್ಕಿ ಹೊಡೆದ ನಂತರ ಕಾರು ಬೈಕ್ಗೆ ಗುದ್ದಿ ಕೆಳಗೆ ಬಿದ್ದಿದೆ. ಕೂಡಲೇ ಹೊಯ್ಸಳ ಪೊಲೀಸರು ಬಂದು ಗಾಯಾಳುಗಳನ್ನು ರಕ್ಷಣೆ ಮಾಡಿದ್ದಾರೆ.
ಐವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದ್ದು ಇಬ್ಬರಿಗೆ ಗಂಭೀರ ಗಾಯಗಳಾಗಿವೆ. ಅಪಘಾತಕ್ಕೀಡಾದ ಕಾರಿನಲ್ಲಿ ಮದ್ಯದ ಬಾಟಲ್ ಪತ್ತೆಯಾಗಿದ್ದು, ಕುಡಿದು ವಾಹನ ಚಲಾಯಿಸಿರುವ ಬಗ್ಗೆ ಮೆಡಿಕಲ್ ಟೆಸ್ಟ್ ಮಾಡಲಿದ್ದಾರೆ.
ಇದನ್ನೂ ಓದಿ : ಮುಡಾ ಅಕ್ರಮಕ್ಕೆ ಮೊದಲ ವಿಕೆಟ್ ಪತನ – ಮಾಜಿ ಆಯುಕ್ತ ಜಿ.ಟಿ ದಿನೇಶ್ ಕುಮಾರ್ ಸಸ್ಪೆಂಡ್..!