Download Our App

Follow us

Home » ಮೆಟ್ರೋ » ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ನಟನ ಎದೆ ಭಾಗಕ್ಕೆ ಭಾರಿ ಪೆಟ್ಟು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ..!

ನಟ ಕಿರಣ್ ರಾಜ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ನಟನ ಎದೆ ಭಾಗಕ್ಕೆ ಭಾರಿ ಪೆಟ್ಟು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ..!

ಬೆಂಗಳೂರು : ಸೀರಿಯಲ್​ ಮೂಲಕ ಅತಿ ಹೆಚ್ಚು ಖ್ಯಾತಿ ಪಡೆದುಕೊಂಡಿದ್ದ ಕನ್ನಡದ ನಟ ಕಿರಣ್ ರಾಜ್ ಕಾರು ಅಪಘಾತಕ್ಕಿಡಾಗಿದೆ. ನಟ ಕಿರಣ್​ ರಾಜ್​ ಅವರು ಇದ್ದ ಕಾರು ಕೆಂಗೇರಿ ಬಳಿ ಡಿವೈಡರ್​ಗೆ ಡಿಕ್ಕಿ ಹೊಡೆದಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದ ಪರಿಣಾಮ ಕಿರಣ್ ರಾಜ್ ಅವರ ಎದೆಯ ಭಾಗಕ್ಕೆ ಭಾರೀ ಪೆಟ್ಟು ಬಿದ್ದಿದೆ. ಆ ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ತೀವ್ರ ನಿಘಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವೈದ್ಯರಿಂದ ಚಿಕಿತ್ಸೆ ಮುಂದುವರೆದಿದೆ.

ಕಿರಣ್​ರಾಜ್ ಅವರು ಸಿದ್ದೇಶ್ವರ ನಿರಾಶ್ರಿತರ ಕೇಂದ್ರಕ್ಕೆ ಊಟ ಕೊಡಲು ಕಾರಿನಲ್ಲಿ ಹೋಗ್ತಿದ್ದರು. ರಾನಿ ಸಿನಿಮಾ ಎಕ್ಸಿಕ್ಯೂಟಿವ್​​​ ಪ್ರೊಡ್ಯೂಸರ್ ಗಿರೀಶ್ ಕಾರು ಡ್ರೈವ್​ ಮಾಡುತ್ತಿದ್ದರು. ಈ ವೇಳೆ ರಸ್ತೆಗೆ ಅಡ್ಡಲಾಗಿ ಬಂದಿದ್ದ ಮುಂಗುಸಿ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ ಎಂದು ತಿಳಿದು ಬಂದಿದೆ. ಕಾರು ಗುದ್ದಿದ ರಭಸಕ್ಕೆ ಕಾರಿನ ಮುಂಭಾಗದ ಟೈರ್ ಬಂಪರ್​ ಕಟ್ ಆಗಿದೆ. ಇನ್ನು ಅಪಘಾತದ ಕುರಿತು ಹೆಚ್ಚಿನ ಮಾಹಿತಿ ಲಭ್ಯವಾಗಬೇಕಿದೆ.

ಕಿರಣ್ ರಾಜ್ ಕನ್ನಡ ಸೇರಿದಂತೆ ಹಿಂದಿ ಸೀರಿಯಲ್​ಗಳಲ್ಲಿಯೂ ನಟಿಸಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿರುವ ಕಿರಣ್ ರಾಜ್ ತಮ್ಮ ಪಂಚಿಂಗ್ ಡೈಲಾಗ್‌ಗಳಿಂದಲೇ ಫೇಮಸ್ ಆಗಿದ್ದಾರೆ. ಕನ್ನಡತಿ ಸೀರಿಯಲ್‌ ಹರ್ಷ ಪಾತ್ರ ಕಿರಣ್‌ ರಾಜ್‌ಗೆ ದೊಡ್ಡಮಟ್ಟದ ಹೆಸರು ತಂದುಕೊಟ್ಟಿತ್ತು.

ಇದನ್ನೂ ಓದಿ : ಹುಬ್ಬಳ್ಳಿ : ಫ್ಲೈಓವರ್​ ಕಾಮಗಾರಿ ವೇಳೆ ಭಾರೀ ಅವಘಡ – ತಲೆ ಮೇಲೆ ರಾಡ್‌ ಬಿದ್ದು ASIಗೆ ಗಂಭೀರ ಗಾಯ..!

Leave a Comment

DG Ad

RELATED LATEST NEWS

Top Headlines

BBK11: ‘ನಿಮ್ಮ ರೀತಿಯ ಫೂಟೇಜ್ ನನಗೆ ಬೇಡ’ – ಮೋಕ್ಷಿತಾ ಖಡಕ್​ ಮಾತಿಗೆ ಜಗದೀಶ್ ಪುಲ್​ ಸೈಲೆಂಟ್..!

ಬಿಗ್‌ ಬಾಸ್‌ ಮನೆ ಈಗ ರಣರಂಗವಾಗಿದ್ದು, ಎರಡನೇ ವಾರಕ್ಕೆ ಕಾಲಿಟ್ಟಿದೆ. 16 ಸ್ಪರ್ಧಿಗಳ ಮಧ್ಯೆ ಒಂಟಿ ಮನೆಯಲ್ಲಿ ಆಟ ಮುಂದುವರಿದಿದೆ. ಮೊದಲ ವಾರ ಯಮುನಾ ಶ್ರೀನಿಧಿ ಎಲಿಮಿನೇಟ್

Live Cricket

Add Your Heading Text Here