Download Our App

Follow us

Home » ಅಪರಾಧ » ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ನಡೆದಿದೆ. ಅಪಘಾತದ ಪರಿಣಾಮ ಬೈಕ್​ ಸವಾರ ಯರ್ರಿಸ್ವಾಮಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ಕಾರು ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿ ಹೊಡೆದ ರಭಸಕ್ಕೆ ಬೈಕ್​ ಸವಾರ ಕಾರಿನ ಬಾನೆಟ್‌ ಮೇಲಿದ್ದ ಬಿದ್ದಿದ್ದಾನೆ. ಆದರೆ ಕಾರು ಚಾಲಕ ಇದನ್ನು ಗಮನಿಸದೆ 18 ಕಿಲೋ. ಮೀಟರ್​ನಷ್ಟು ದೂರಕ್ಕೆ ಎಳೆದುಕೊಂಡು ಹೋಗಿದ್ದಾನೆ. ಚಲಿಸುತ್ತಿದ್ದ ಟೊಯೊಟಾ ಇನ್ನೋವಾ ಕಾರಿನ ಮೇಲೆ ಶವ ಪತ್ತೆಯಾಗುತ್ತಿದ್ದಂತೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಈ ವಿಷಯ ತಿಳಿದ ಕೂಡಲೇ ಅಧಿಕಾರಿಗಳು ಘಟನಾ ಸ್ಥಳಕ್ಕೆ ಆಗಮಿಸಿ ವಾಹನವನ್ನು ಪತ್ತೆ ಹಚ್ಚಿದ್ದಾರೆ. ನಂತರ ಮೃತ ಬೈಕ್​​ ಸವಾರರನ್ನು ಯರ್ರಿಸ್ವಾಮಿ ಎಂದು ಗುರುತಿಸಿದ್ದಾರೆ. ಸದ್ಯ ಈ ಪ್ರಕರಣವನ್ನು ದಾಖಲಿಸಿಕೊಂಡು ಹಿರಿಯ ಪೊಲೀಸ್​ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ : ಏ.19ಕ್ಕೆ ಖ್ಯಾತ ಗಾಯಕ ರಾಜು ಅನಂತಸ್ವಾಮಿ ನೆನಪಿನಲ್ಲೊಂದು ಸುಂದರ ಸುಗಮ ಸಂಗೀತ ಸಂಜೆ “ರಾಜು ದಿ ಲೆಜೆಂಡ್”..!

Leave a Comment

DG Ad

RELATED LATEST NEWS

Top Headlines

ಬೇನಾಮಿ, ನಕಲಿ ವ್ಯಕ್ತಿಗಳ ಹೆಸರಲ್ಲಿ ಮುಡಾ ಸೈಟ್ ಹಂಚಿಕೆ.. 300 ಕೋಟಿ ಆಸ್ತಿ ಜಪ್ತಿ – ಇಡಿ ಹೇಳಿದ್ದೇನು?

ಬೆಂಗಳೂರು : ಮುಡಾ ಹಗರಣ ಸಂಬಂಧ ಜಾರಿ ನಿರ್ದೇಶನಾಲಯ 300 ಕೋಟಿ ರೂ. ಮೌಲ್ಯದ 142 ಸ್ಥಿರ ಆಸ್ತಿಗಳನ್ನ ಜಪ್ತಿ ಮಾಡಿದೆ. ಮೈಸೂರು ಲೋಕಾಯುಕ್ತ ದಾಖಲಿಸಿದ FIR

Live Cricket

Add Your Heading Text Here