Download Our App

Follow us

Home » ರಾಜ್ಯ » ಬೆಂಗಳೂರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗಿಫ್ಟ್ ​- ‘ಕಾವೇರಿ 5ನೇ ಹಂತ’ದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ..!

ಬೆಂಗಳೂರಿಗೆ ರಾಜ್ಯ ಸರ್ಕಾರದಿಂದ ಮತ್ತೊಂದು ಗಿಫ್ಟ್ ​- ‘ಕಾವೇರಿ 5ನೇ ಹಂತ’ದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ..!

ಬೆಂಗಳೂರು : ಬೆಂಗಳೂರಿನ ಜನತೆ ದಶಕದಿಂದ ನಿರೀಕ್ಷಿಸುತ್ತಿದ್ಧ ಕಾವೇರಿ ಐದನೇ ಹಂತದ ಕುಡಿಯುವ ನೀರಿನ ಯೋಜನೆ ಇಂದು ಲೋಕಾರ್ಪಣೆಗೊಳ್ಳಲಿದೆ. ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಹೊರವಲಯದ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡುವ ಮಹತ್ವಾಕಾಂಕ್ಷಿಯ ಯೋಜನೆ ಇದಾಗಿದೆ.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ತೊರೆಕಾಡನಹಳ್ಳಿಯಲ್ಲಿನ ಬೆಂಗಳೂರು ಜಲಮಂಡಳಿ ಜಲಶುದ್ದೀಕರಣ ಘಟಕದ ಆವರಣದಲ್ಲಿ ಅದ್ಧೂರಿ ಸಮಾರಂಭ ಏರ್ಪಡಿಸಲಾಗಿದ್ದು, ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಸಿರು ಗಿಡಗಳನ್ನು ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.

ಇದೇ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಜಪಾನ್​ನ ಜೈಕಾ ಸಂಸ್ಥೆಯ ಪ್ರತಿನಿಧಿಗಳು ನೀರು ಶುದ್ಧೀಕರಣ ಘಟಕದ ಬಟನ್ ಪ್ರೆಸ್​​ ಮಾಡುವುದರ ಮೂಲಕ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ಲೋಕಾರ್ಪಣೆ ಮಾಡಲಿದ್ದಾರೆ. ಸಚಿವರಾದ ಎನ್.ಚಲುವರಾಯಸ್ವಾಮಿ, ರಾಮಲಿಂಗಾರೆಡ್ಡಿ, ದಿನೇಶ್ ಗುಂಡೂರಾವ್, ಕೃಷ್ಣ ಭೈರೇಗೌಡ ಸೇರಿ ಮತ್ತಿತರರು ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ.

ಬೆಂಗಳೂರು ಜಲಮಂಡಳಿಯು ಕೈಗೆತ್ತಿಕೊಂಡಿರುವ ಕಾವೇರಿ 5ನೇ ಹಂತದ ಕುಡಿಯುವ ನೀರಿನ ಯೋಜನೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾಗಿದೆ. ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ ಜೈಕಾ ಸಂಸ್ಥೆಯ ಸಹಭಾಗಿತ್ವದಲ್ಲಿ 4,336 ಕೋಟಿ ರೂ.ವೆಚ್ಚದಲ್ಲಿ ಅನುಷ್ಟಾನಗೊಳ್ಳುತ್ತಿರುವ ಯೋಜನೆ ಇದಾಗಿದ್ದು, ಸುಮಾರು 50 ಲಕ್ಷ ಜನರಿಗೆ ಈ  ಯೋಜನೆಯಿಂದ ನೀರು ಒದಗಿಸಲಾಗುತ್ತದೆ.

ಇದನ್ನೂ ಓದಿ : ಅ.25ಕ್ಕೆ ಕೋಮಲ್ ಅಭಿನಯದ ಬಹುನಿರೀಕ್ಷಿತ ‘ಯಲಾಕುನ್ನಿ’ ಚಿತ್ರ ತೆರೆಗೆ..!

Leave a Comment

DG Ad

RELATED LATEST NEWS

Top Headlines

ಕರ್ನಾಟಕ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿ ಉದ್ಘಾಟಿಸಿದ ರಾಗಿಣಿ ದ್ವಿವೇದಿ..!

ಸ್ಯಾಂಡಲ್‌ವುಡ್ ಬ್ಯೂಟಿ ರಾಗಿಣಿ ದ್ವಿವೇದಿ ಅವರು ಕರ್ನಾಟಕ ರಾಜ್ಯ ಚಲನಚಿತ್ರ ವಸ್ತ್ರಾಲಂಕಾರ ಕಲಾವಿದರ ಸಂಘದ ನೂತನ ಕಛೇರಿಯನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಶಿವರಾಜ್, ಗೌರವಾಧ್ಯಕ್ಷರಾದ ರವಿಶಂಕರ್,

Live Cricket

Add Your Heading Text Here