Download Our App

Follow us

Home » ರಾಜಕೀಯ » CBI, IT, EDಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, BJP ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ – ಸಿಎಂ ಸಿದ್ದರಾಮಯ್ಯ..!

CBI, IT, EDಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, BJP ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ – ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಲೋಕಸಭಾ ಚುನಾವಣೆ ಹೊಸ್ತಿಲಲ್ಲಿರುವಾಗಲೇ ಸಿಎಂ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಒಂದು ಭಾರೀ ಸಂಚಲನ ಮೂಡಿಸುತ್ತಿದೆ. ಬಿಜೆಪಿ ವಿರುದ್ಧ ಟ್ವೀಟ್​ನಲ್ಲೇ ಸಿಎಂ ಸಿದ್ದರಾಮಯ್ಯ ಗುಡುಗಿದ್ದು, “ಸಿಬಿಐ, ಐಟಿ, ಇಡಿಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ. BJP ಪಕ್ಷದ ಅಂಗ ಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ. ಇದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ನಡೆದ ದಾಳಿಗಳೇ ಸಾಕ್ಷಿ” ಎಂದು ಬರೆದು ಟ್ವೀಟ್​ನಲ್ಲೇ ಸಿಎಂ ಸಿದ್ದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
ಕಳೆದ 10 ವರ್ಷದಲ್ಲಿ 115 ವಿಪಕ್ಷ ನಾಯಕರ ಮೇಲೆ ರೇಡ್ ಆಗಿವೆ. ಆಡಳಿತ ಪಕ್ಷದ 6 ನಾಯಕರ ಮೇಲೆ ಮಾತ್ರ ED ರೇಡ್ ಆಗಿದೆ. ಇಡಿ ರೇಡ್ ಆದ ಶೇ.95ರಷ್ಟು ನಾಯಕರು ವಿಪಕ್ಷದವರು ಎಂದು ಪೋಸ್ಟ್ ಹಂಚಿಕೊಂಡು ಸಿಎಂ ಸಿದ್ದರಾಮಯ್ಯ ಬಿಗ್​ ಬಾಂಬ್​ ಸಿಡಿಸಿದ್ದಾರೆ.
ಇಂಡಿಯನ್​ ಎಕ್ಸ್​ಪ್ರೆಸ್​ ವರದಿ ಆಧರಿಸಿ ಟ್ವೀಟ್​ ಮಾಡಿರುವ ಸಿಎಂ ಸಿದ್ದು, ವಿಪಕ್ಷ ನಾಯಕರ ಮೇಲೆ ನಡೆದ ಇಡಿ ದಾಳಿಗಳೇ ಟಾರ್ಗೆಟ್​ಗೆ ಸಾಕ್ಷಿ. ಬಿಜೆಪಿ ಸರ್ಕಾರ ಸ್ವಾರ್ಥ ರಾಜಕೀಯದ ಮೇರೆ ಮೀರಿದೆ. ವಿಪಕ್ಷಗಳು ಚುನಾವಣೆಯಲ್ಲಿ ಬಿಜೆಪಿ ವಿರುದ್ಧ ಸೆಣಸಬೇಕಿದೆ.
ಮಾತ್ರವಲ್ಲ ಐಟಿ, ಸಿಬಿಐ, ಇಡಿ ಸಂಸ್ಥೆಗಳ ವಿರುದ್ಧವೂ ಹೋರಾಡಬೇಕು. ಇಂಥಾ ಅನಿವಾರ್ಯತೆಯನ್ನು ಕಳೆದ 10 ವರ್ಷಗಳಲ್ಲಿ ನೋಡಿದ್ದೇವೆ. ಬಿಜೆಪಿ ಆಡಳಿತದಲ್ಲಿ ಸಂವಿಧಾನ, ಪ್ರಜಾಪ್ರಭುತ್ವ ಅವಸಾನದ ಹಾದಿಗೆ ಸರಿಯುತ್ತಿದೆ ಎಂದು ಟ್ವೀಟ್​ನಲ್ಲೇ ಬಿಜೆಪಿ ವಿರುದ್ಧ ಸಿಎಂ ಗುಡುಗಿದ್ದಾರೆ. ಸದ್ಯ ಸಿಎಂ ಸಿದ್ದರಾಮಯ್ಯ ಮಾಡಿರುವ ಈ ಟ್ವೀಟ್​ಗೆ ಬಿಜೆಪಿಯ ಯಾರೂ ಇನ್ನೂ ರಿಯಾಕ್ಟ್ ಮಾಡಿಲ್ಲ.

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here