Download Our App

Follow us

Home » ರಾಜ್ಯ » ಏ.14 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ “ಅಂಬೇಡ್ಕರ್ ಜಯಂತಿ” ಆಚರಣೆ ಕಡ್ಡಾಯ – ರಾಜ್ಯ ಸರ್ಕಾರ ಆದೇಶ..!

ಏ.14 ರಂದು ರಾಜ್ಯದ ಎಲ್ಲಾ ಶಾಲೆಗಳಲ್ಲಿ “ಅಂಬೇಡ್ಕರ್ ಜಯಂತಿ” ಆಚರಣೆ ಕಡ್ಡಾಯ – ರಾಜ್ಯ ಸರ್ಕಾರ ಆದೇಶ..!

ಬೆಂಗಳೂರು : ರಾಜ್ಯದಲ್ಲಿ 2023-24ನೇ ಶೈಕ್ಷಣಿಕ ವರ್ಷ ಏಪ್ರಿಲ್ 10ರಂದು ಮುಕ್ತಾಯವಾಗುತ್ತದೆ. ಆದ್ರೆ, ಏಪ್ರಿಲ್ 14ರಂದು ಡಾ ಬಿ.ಆರ್.ಅಂಬೇಡ್ಕರವರ ಜಯಂತಿ ಇರುವುದರಿಂದ ರಾಜ್ಯದ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಅಂಬೇಡ್ಕರವರ ಜಯಂತಿ ಆಚರಿಸಲು ಕ್ರಮವಹಿಸುವಂತೆ ರಾಜ್ಯ ಸರ್ಕಾರದ ಆದೇಶ ಮೇರೆಗೆ ಇದೀಗ ಶಿಕ್ಷಣ ಇಲಾಖೆ ಸುತ್ತೋಲೆಯನ್ನು ಹೊರಡಿಸಿದೆ.

ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಮುಖ್ಯ ಶಿಕ್ಷಕರು, ಶಿಕ್ಷಕರು, ಸಿಬ್ಬಂದಿಗಳು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು ಹಾಗೂ ವಿದ್ಯಾರ್ಥಿಗಳ ಸಹಭಾಗಿತ್ವದಲ್ಲಿ 14.04.2024ರ ಭಾನುವಾರದಂದು ಡಾ ಬಿ.ಆರ್. ಅಂಬೇಡ್ಕರ್​ ಅವರ ಜಯಂತಿಯನ್ನು ಪ್ರಸ್ತುತ ಜಾರಿಯಲ್ಲಿರುವ ಲೋಕಸಭಾ ಚುನಾವಣೆ – 2024 ರ ಮಾದರಿ ನೀತಿ ಸಂಹಿತೆಯನ್ವಯ, ಪ್ರತಿ ವರ್ಷದಂತೆ ನಿಯಮಾನುಸಾರ ಆಚರಿಸಲು ಸೂಕ್ತ ಕ್ರಮಗಳನ್ನು ವಹಿಸುವಂತೆ ರಾಜ್ಯದ ಎಲ್ಲಾ ಶಾಲಾ ಮುಖ್ಯಸ್ಥರಿಗೆ, ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ, ಉಪನಿರ್ದೇಶಕರು (ಆಡಳಿತ) ಹಾಗೂ ಉಪನಿರ್ದೇಶಕರಿಗೆ ಈ ಮೂಲಕ ತಿಳಿಸಿದೆ.

ಇದನ್ನೂ ಓದಿ : ಅದಿತಿ ಪ್ರಭುದೇವ ಮನೆಗೆ ಮಹಾಲಕ್ಷ್ಮೀ ಆಗಮನ – ಹೆಣ್ಣು ಮಗುವಿಗೆ ಜನ್ಮ ನೀಡಿದ ನಟಿ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here