ಮೈಸೂರು : ಲೋಕಸಭೆ ಚುನಾವಣೆಯಲ್ಲಿ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿಯಲು ಎಲ್ಲಾ ಕ್ಷೇತ್ರದಲ್ಲೂ ತಂತ್ರಗಾರಿಕೆ ಬಲು ಜೋರಾಗಿಯೇ ನಡೆಯುತ್ತಿದ್ದು, ಈ ಹಿನ್ನೆಲೆ ಇದೀಗ ಎರಡನೇ ದಿನವೂ ಮೈಸೂರಿನಲ್ಲಿ ವಾಸ್ತವ್ಯ ಹೂಡಿರುವ ಸಿಎಂ ಸಿದ್ದರಾಮಯ್ಯ ಮಹಾರಾಜರನ್ನು ಸೋಲಿಸಲು ಮಿಂಚಿನ ಸಂಚಾರ ನಡೆಸುತ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಮೈಸೂರಿನಲ್ಲೇ ಮಾಸ್ಟರ್ ಪ್ಲಾನ್ ರೂಪಿಸುತ್ತಿದ್ದು, ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ವೇಳೆ ಸಾಥ್ ನೀಡಲಿದ್ದಾರೆ. ಇಂದು ವರುಣಾ, ಟಿ. ನರಸೀಪುರದಲ್ಲಿ ಕಾಂಗ್ರೆಸ್ ಪ್ರಚಾರದಲ್ಲಿ ಭಾಗಿಯಾಗಿ ಸಂಜೆ 6 ಗಂಟೆಗೆ ಮೈಸೂರಿನ ಬಿಷಪ್ ನಿವಾಸಕ್ಕೆ ಭೇಟಿ ನೀಡಿ ಚರ್ಚೆ ನಡೆಸಲಿದ್ದಾರೆ.
ಇಂದು ಕೂಡ ಮೈಸೂರಿನಲ್ಲಿ ವಾಸ್ತವ್ಯ ಹೂಡಿ ನಾಳೆ ಮತ್ತೆ ಪ್ರಚಾರ ಮಾಡಲಿರುವ ಸಿಎಂ ಸಿದ್ದರಾಮಯ್ಯ, ಬುಧವಾರ ಬೆಳಗ್ಗೆ 9.30ಕ್ಕೆ ಸುತ್ತೂರು ಮಠಕ್ಕೆ ಭೇಟಿ ನೀಡಲಿದ್ದಾರೆ. ನಂತರ ಚಾಮರಾಜಗರ ಅಭ್ಯರ್ಥಿ ಸುನಿಲ್ ಬೋಸ್ ನಾಮಪತ್ರ ಸಲ್ಲಿಕೆ ವೇಳೆ ಭಾಗಿ, ಮಧ್ಯಾಹ್ನ 1ಗಂಟೆಗೆ ಮೈಸೂರು ಅಭ್ಯರ್ಥಿ ಎಂ. ಲಕ್ಷಣ್ ನಾಮಪತ್ರ ಸಲ್ಲಿಕೆಯಲ್ಲಿ ಪಾಲ್ಗೊಳ್ಳಲಿದ್ದಾರೆ.ಇನ್ನುಇದಾದ ಬಳಿಕ ಬುಧವಾರ ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ.
ಇದನ್ನೂ ಓದಿ : ಚಿಕ್ಕಬಳ್ಳಾಪುರ ಕ್ಷೇತ್ರದಾದ್ಯಂತ ಬಿಜೆಪಿ ವೀಕ್ ಇದೆ : ರಕ್ಷಾರಾಮಯ್ಯ ಗೆಲುವಿನ ವಿಶ್ವಾಸ..!