ಬಹುನಿರೀಕ್ಷಿತ ‘ಚಾಂಪಿಯನ್ಸ್ ಟ್ರೋಫಿ 2025′ ಫೆಬ್ರವರಿ 19ರಿಂದ ಶುರುವಾಗಲಿದ್ದು, ಫೈನಲ್ ಪಂದ್ಯವು ಮಾರ್ಚ್ 9 ರಂದು ನಡೆಯಲಿದೆ ಎಂದು ಹೇಳಲಾಗಿದೆ. ಈ ದಿನಾಂಕ ನಿಗದಿಯ ಬೆನ್ನಲ್ಲೇ ಟೀಮ್ ಇಂಡಿಯಾದ ಪಂದ್ಯಗಳ ಕರಡು ವೇಳಾಪಟ್ಟಿ ಕೂಡ ಹೊರಬಿದ್ದಿದೆ. ಈ ವೇಳಾಪಟ್ಟಿಯಂತೆ ಭಾರತ ತಂಡವು ಫೆಬ್ರವರಿ 20ರಿಂದ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ.
ಟೀಮ್ ಇಂಡಿಯಾ ತನ್ನ ಮೊದಲ ಪಂದ್ಯದಲ್ಲಿ ಬಾಂಗ್ಲಾದೇಶವನ್ನು ಎದುರಿಸಲಿದ್ದು, ಎರಡನೇ ಪಂದ್ಯದಲ್ಲಿ ನ್ಯೂಝಿಲೆಂಡ್ ವಿರುದ್ಧ ಕಣಕ್ಕಿಳಿಯಲಿದೆ. ಹಾಗೆಯೇ ಮೂರನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡದ ವಿರುದ್ಧ ಸೆಣಸಲಿದೆ.
ಫೆಬ್ರವರಿ 20ರಂದು ಭಾರತ Vs ಬಾಂಗ್ಲಾದೇಶ್ ತಂಡಗಳು ಮುಖಾಮುಖಿಯಾಗಲಿದ್ದು, ಫೆಬ್ರವರಿ 23ರಂದು ಭಾರತ vs ನ್ಯೂಝಿಲೆಂಡ್ ತಂಡಗಳು ಸೆಣಸಲಿದೆ. ಇನ್ನು ಮಾರ್ಚ್ 1, ರಂದು ಭಾರತ vs ಪಾಕಿಸ್ತಾನ ನಡುವಣ ಹೈವೋಲ್ಟೆಜ್ ಪಂದ್ಯ ನಡೆಯಲಿದೆ ಎನ್ನಲಾಗಿದೆ.
ಇದನ್ನೂ ಓದಿ : ನಟ ಅಲ್ಲು ಅರ್ಜುನ್ ಮನೆ ಮೇಲೆ ಟೊಮೆಟೊ, ಕಲ್ಲೆಸೆದು ದಾಂಧಲೆ – 8 ಮಂದಿ ಅರೆಸ್ಟ್..!