Download Our App

Follow us

Home » ರಾಜ್ಯ » ಈ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾರೀ ಬದಲಾವಣೆ – ಹೊಸ ನಿಯಮ ಜಾರಿಗೊಳಿಸಿದ ಸರ್ಕಾರ..!

ಈ ವರ್ಷದಿಂದ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಭಾರೀ ಬದಲಾವಣೆ – ಹೊಸ ನಿಯಮ ಜಾರಿಗೊಳಿಸಿದ ಸರ್ಕಾರ..!

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಹೊಸ ನಿಯಮವನ್ನು ಜಾರಿಗೆ ತಂದಿದೆ. ದ್ವಿತೀಯ ಪಿಯುಸಿ ಪರೀಕ್ಷೆ ಅವಧಿಯನ್ನು 15 ನಿಮಿಷ ಕಡಿತಗೊಳಿಸಿ ಗುರುವಾರ ಸುತ್ತೋಲೆ ಹೊರಡಿಸಿದ್ದು, ಹೊಸ ನಿಯಮದಂತೆ ಪರೀಕ್ಷಾ ಅವಧಿ 2 ಗಂಟೆ 45 ನಿಮಿಷ ಮಾತ್ರ ಇರಲಿದೆ ಎಂದು ತಿಳಿಸಿದೆ.

3 ಗಂಟೆಗಳ ಕಾಲ ಬರೆಯಬೇಕಿದ್ದ ಪರೀಕ್ಷೆ ಇದೇ ಶೈಕ್ಷಣಿಕ ವರ್ಷದಿಂದ 2 ಗಂಟೆ 45 ನಿಮಿಷಕ್ಕೆ ನಿಗಧಿ ಮಾಡಲಾಗಿದೆ. 15 ನಿಮಿಷಗಳ ಕಾಲ ಪರೀಕ್ಷೆ ಅವಧಿ ಇಳಿಕೆ ಮಾಡಿದರೂ ವಿದ್ಯಾರ್ಥಿಗಳು ಪರೀಕ್ಷಾ ಹಾಲ್​ನಲ್ಲಿ ಮೂರು ಗಂಟೆ ಇರಲೇಬೇಕಿದೆ. ಪರೀಕ್ಷೆಯ ಆರಂಭದಲ್ಲಿನ 15 ನಿಮಿಷವನ್ನು ಪ್ರಶ್ನೆಗಳನ್ನು ಓದಿಕೊಳ್ಳಲು ಅವಕಾಶ ನೀಡಲಾಗಿದೆ.

ಈ ಶೈಕ್ಷಣಿಕ ವರ್ಷದಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ ಎಂದು ಮಂಡಳಿ ತಿಳಿಸಿದ್ದು, ಲಿಖಿತ ಬರವಣಿಗೆಗೆ ಮಾತ್ರ 2 ಗಂಟೆ 45 ನಿಮಿಷಗಳ ಕಾಲಾವಕಾಶ ನೀಡಲಾಗುತ್ತದೆ. ಈ ಅವಧಿಯಲ್ಲಿ 100 ಅಂಕಕ್ಕೆ ಬದಲು 80 ಅಂಕಕ್ಕೆ ಪರೀಕ್ಷೆ ಬರೆಯುವಂತೆ ಮಾಡಲಾಗುತ್ತದೆ. ಈ ಹಿಂದೆಯೂ 3 ಗಂಟೆ ಅವಧಿಯ ಪರೀಕ್ಷೆ ಇದ್ದಾಗಲೂ ಪ್ರಶ್ನೆಗಳನ್ನು ಓದಿಕೊಳ್ಳಲು 15 ನಿಮಿಷವನ್ನು ಹೆಚ್ಚುವರಿಯಾಗಿ ಕೊಡಲಾಗುತ್ತಿತ್ತು.

ಇದನ್ನೂ ಓದಿ : ಸಿದ್ದರಾಮಯ್ಯರನ್ನು ಕೆಳಗಿಳಿಸಲು ನಾಗಮಂಗಲಕ್ಕೆ ಕಿಚ್ಚು – ಕೇಂದ್ರ ಸಚಿವ ಹೆಚ್​ಡಿಕೆ ಸ್ಫೋಟಕ ಹೇಳಿಕೆ..!

Leave a Comment

DG Ad

RELATED LATEST NEWS

Top Headlines

MLA ಮುನಿರತ್ನ ವಿರುದ್ಧ ರೇಪ್ ಆರೋಪದ ಬೆನ್ನಲ್ಲೇ ಮಾಜಿ ಕಾರ್ಪೊರೇಟರ್ ಪತಿಯ ಹನಿಟ್ರ್ಯಾಪ್ ವಿಡಿಯೋ ವೈರಲ್..!

ಬೆಂಗಳೂರು : ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಬಿಜೆಪಿ ಶಾಸಕ ಮುನಿರತ್ನ ಸೇರಿ ಏಳು ಮಂದಿಯ ವಿರುದ್ಧ ರಾಮನಗರ ಜಿಲ್ಲಾ ವ್ಯಾಪ್ತಿಯ ಕಗ್ಗಲಿಪುರ ಪೊಲೀಸ್ ಠಾಣೆಯಲ್ಲಿ

Live Cricket

Add Your Heading Text Here