ಚೆನ್ನೈ : ಚೆನ್ನೈ ಮಹಾನಗರಕ್ಕೆ ಅಪ್ಪಳಿಸಿದ ಫೆಂಗಾಲ್ ಚಂಡಮಾರುತದಿಂದ ಭಾರೀ ಮಳೆಯಾಗುತ್ತಿದೆ. ಚೆನ್ನೈ ಸೇರಿದಂತೆ ತಮಿಳುನಾಡಿನ ಹಲವೆಡೆ ಭಾರೀ ಮಳೆಯಾಗುತ್ತಿದ್ದು, ಚೆನ್ನೈ ಏರ್ಪೋರ್ಟ್ನಲ್ಲಿ ನೀರು ನಿಂತು ಸಂಚಾರ ಅಸ್ತವ್ಯಸ್ತವಾಗಿದೆ.
ಮಳೆಯ ಅಬ್ಬರದಿಂದಾಗಿ ಬಹುತೇಕ ವಿಮಾನಗಳ ಸಂಚಾರ ರದ್ದು ಮಾಡಲಾಗಿದೆ ಎಂಬುದು ತಿಳಿದು ಬಂದಿದೆ. ಇದರೊಂದಿಗೆ ಅಬುದಾಬಿಯಿಂದ ಚೆನ್ನೈಗೆ ತೆರಳಬೇಕಿದ್ದ ಇಂಡಿಗೋ ವಿಮಾನವನ್ನು ಪ್ರತಿಕೂಲ ಹವಾಮಾನದಿಂದಾಗಿ ಬೆಂಗಳೂರಿಗೆ ತಿರುಗಿಸಲಾಗಿದೆ.
ಇನ್ನು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಪೆಕ್ಟ್ನಿಂದ ಚೆನ್ನೈ ಹಾಗೂ ಸುತ್ತಮುತ್ತಲಿನ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ರಸ್ತೆಗಳಲ್ಲಿ ನೀರು ನದಿಯಂತೆ ಹರಿಯುತ್ತಾ ಇದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ತಗ್ಗು ಪ್ರದೇಶಗಳಲ್ಲಿ ನೀರು ನಿಂತು ಜನರ ಪರದಾಟ ನಡೆಸುವ ಸ್ಥಿತಿ ಎದುರಾಗಿದೆ.
ಚಂಡಮಾರುತದಿಂದಾಗಿ ತಿರುವಳ್ಳೂರು, ಕಾಂಚೀಪುರಂ, ಕಲ್ಲಕುರಿಚಿ, ಮತ್ತು ತಮಿಳುನಾಡಿನ ಕಡಲೂರು ಜಿಲ್ಲೆಗಳು ಮತ್ತು ಪುದುಚೇರಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಕರ್ನಾಟಕ ಸೇರಿ ದಕ್ಷಿಣ ಭಾರತದ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.
ಇದನ್ನೂ ಓದಿ : ಸ್ವಾಮೀಜಿಗಳನ್ನು ವಿಚಾರಣೆಗೆ ಕರೆಯಬಾರದಾ? ಕಾನೂನು, ಸಂವಿಧಾನ ಎಲ್ಲರಿಗೂ ಒಂದೇ – ಸಚಿವ ಪ್ರಿಯಾಂಕ್ ಖರ್ಗೆ..!