Download Our App

Follow us

Home » ರಾಜ್ಯ » ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಹೆಸರು ಶಿಫಾರಸ್ಸು..!

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾ. ಪಿ.ಎಸ್ ದಿನೇಶ್ ಕುಮಾರ್ ಹೆಸರು ಶಿಫಾರಸ್ಸು..!

ನವದೆಹಲಿ : ಸುಪ್ರೀಂ ಕೋರ್ಟ್ ಕೊಲಿಜಿಯಂ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಸ್ಥಾನಕ್ಕೆ ನ್ಯಾಯಮೂರ್ತಿ ಪಿ.ಎಸ್. ದಿನೇಶ್ ಕುಮಾರ್ ಅವರ ಹೆಸರನ್ನು ಶಿಫಾರಸ್ಸು ಮಾಡಿದೆ.

ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಅವರ ಹೆಸರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸ್ಸು ಮಾಡಿರುವ ಬೆನ್ನಲ್ಲೇ, ಅವರ ಪದೋನ್ನತಿಯಿಂದ ತೆರವಾಗುವ ಕರ್ನಾಟಕ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ನ್ಯಾ. ಪಿ.ಎಸ್‌ ದಿನೇಶ್‌ ಕುಮಾರ್‌ ಅವರ ಹೆಸರನ್ನು ಕೊಲಿಜಿಯಂ ಶುಕ್ರವಾರ ಶಿಫಾರಸ್ಸು ಮಾಡಿದೆ.

ನ್ಯಾ.ಪಿ. ಎಸ್ ದಿನೇಶ್‌ ಕುಮಾರ್‌ ಅವರು ಹೈಕೋರ್ಟ್‌ ನ್ಯಾಯಾಧೀಶರಾಗಿ ನ್ಯಾಯಾಂಗ ಮತ್ತು ಆಡಳಿತಾತ್ಮಕ ಭಾಗದಲ್ಲಿ ಸಾಕಷ್ಟು ಅನುಭವ ಹೊಂದಿದ್ದಾರೆ. ಫೆಬ್ರವರಿ 24, 2024ರಂದು ನ್ಯಾ. ದಿನೇಶ್‌ ಕುಮಾರ್‌ ನಿವೃತ್ತರಾಗಲಿದ್ದು, ಮುಖ್ಯ ನ್ಯಾಯಮೂರ್ತಿಯಾಗಿ ಒಂದು ತಿಂಗಳಿಗಿಂತ ಸ್ವಲ್ಪ ಹೆಚ್ಚು ಅಧಿಕಾರಾವಧಿಯನ್ನು ಹೊಂದಿರುತ್ತಾರೆ.

ಅವರು ಉತ್ಕೃಷ್ಟ ಸಮಗ್ರತೆ, ಪ್ರಾಮಾಣಿಕತೆ ಮತ್ತು ಸಾಮರ್ಥ್ಯಗಳಿಂದ ಗಮನಸೆಳೆದವರಾಗಿದ್ದಾರೆ. ನೇಮಕವಾದಾಗಿನಿಂದ ಕರ್ನಾಟಕ ಹೈಕೋರ್ಟ್‌ನಲ್ಲಿ ನ್ಯಾ. ದಿನೇಶ್‌ ಕುಮಾರ್‌ ಮಹತ್ತರ ಸೇವೆ ಸಲ್ಲಿಸಿದ್ದಾರೆ” ಎಂದು ಸುಪ್ರೀಂ ಕೋರ್ಟ್‌ ಕೊಲಿಜಿಯಂ ಪ್ರಕಟಣೆ ತಿಳಿಸಿದೆ.

2015 ರಲ್ಲಿ ನ್ಯಾಯಪೀಠಕ್ಕೆ ಬಡ್ತಿ ಪಡೆಯುವ ಮೊದಲು, ನ್ಯಾಯಮೂರ್ತಿ ಕುಮಾರ್ ಅವರು 1990 ರಿಂದ ವಕೀಲರಾಗಿ ಅಭ್ಯಾಸ ಮಾಡುತ್ತಿದ್ದರು ಮತ್ತು ವಿವಿಧ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಪ್ರಮುಖ ಪ್ರಕರಣಗಳಲ್ಲಿ ಹಾಜರಾಗಿದ್ದರು.

ಇದನ್ನೂ ಓದಿ : ರಾಮ ಪ್ರತಿಷ್ಠಾಪನೆ ದಿನ ರಜೆ ಕೊಡಿ – ಸರ್ಕಾರಕ್ಕೆ ಬೆಂಗಳೂರು ವಕೀಲರ ಸಂಘ ಮನವಿ..!

Leave a Comment

DG Ad

RELATED LATEST NEWS

Top Headlines

ಮತ್ತೊಂದು ಸ್ಟಾರ್ ಜೋಡಿಯ ಡಿವೋರ್ಸ್ ಪಕ್ಕಾನಾ – ಇನ್‌ಸ್ಟಾಗ್ರಾಂನಲ್ಲಿ ಅನ್‌ಫಾಲೋ ಮಾಡಿದ ದಂಪತಿ!

ಮುಂಬೈ: ಟಿಂ ಇಂಡಿಯಾದ ಆಲ್​​ರೌಂಡರ್​ ಹಾರ್ದಿಕ್ ಪಾಂಡ್ಯಾ ಡಿವೋರ್ಸ್​ ಬೆನ್ನಲ್ಲೇ ಇದೀಗ ಭಾರತ ಕ್ರಿಕೆಟ್ ತಂಡದ ಮತ್ತೋರ್ವ ಆಟಗಾರನ ವಿಚ್ಛೇದನ ಸುದ್ದಿ ವ್ಯಾಪಕ ಚರ್ಚೆಯಾಗುತ್ತಿದೆ.  ಭಾರತದ ತಂಡದ

Live Cricket

Add Your Heading Text Here