Download Our App

Follow us

Home » ರಾಜಕೀಯ » ಮುಖ್ಯಮಂತ್ರಿಗಳೇ ರಾಜೀನಾಮೆ ನೀಡಿ, ತನಿಖೆ ಎದುರಿಸಿ – ಹೈಕೋರ್ಟ್ ಆದೇಶ ಬೆನ್ನಲ್ಲೇ ಬಿಜೆಪಿ ಟ್ವೀಟ್..!

ಮುಖ್ಯಮಂತ್ರಿಗಳೇ ರಾಜೀನಾಮೆ ನೀಡಿ, ತನಿಖೆ ಎದುರಿಸಿ – ಹೈಕೋರ್ಟ್ ಆದೇಶ ಬೆನ್ನಲ್ಲೇ ಬಿಜೆಪಿ ಟ್ವೀಟ್..!

ಬೆಂಗಳೂರು : ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್‌, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ. ಸಿಎಂ ಸಿದ್ದರಾಮಯ್ಯ ಪರ ಹಾಗೂ ದೂರುದಾರರ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್‌ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಮುಡಾ ಪ್ರಕರಣದಲ್ಲಿ ಅರ್ಜಿದಾರರ ಕ್ರಮ ಸೂಕ್ತವಾಗಿದೆ. ಹೀಗಾಗಿ ಗವರ್ನರ್ ಆದೇಶವನ್ನು ಹೈಕೋರ್ಟ್‌ ಒಪ್ಪಿಕೊಂಡಿದೆ.

ಇದೀಗ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಹೈಕೋರ್ಟ್ ಅನುಮತಿ ನೀಡಿದ ಬೆನ್ನಲ್ಲೇ ಬಿಜೆಪಿ ಟ್ವೀಟ್ ಮಾಡಿದೆ. ಹೈಕೋರ್ಟ್ ಆದೇಶ ಬೆನ್ನಲ್ಲೇ ಟ್ವೀಟ್ ಮಾಡಿರುವ ಬಿಜೆಪಿ, ದಲಿತರ ಭೂಮಿಯನ್ನು ಅಕ್ರಮವಾಗಿ ಕಬಳಿಸಿ, ಬಡವರ ಪಾಲಿಗೆ ಸೇರಬೇಕಾಗಿದ್ದ ಸೈಟುಗಳನ್ನು ತಮ್ಮ ಹೆಸರಿಗೆ ಮಾಡಿಕೊಂಡಿದ್ದ ಸಿಎಂ @siddaramaiah ಅವರು, ತಮ್ಮ ವಿರುದ್ಧ ತನಿಖೆಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾ ಮಾಡಿರುವುದು ಸ್ವಾಗತಾರ್ಹ.

ತಮ್ಮ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳಲು ಘನತೆವೆತ್ತ ರಾಜ್ಯಪಾಲರ ಮೇಲೆ ಕೀಳು ಮಟ್ಟದ ರಾಜಕೀಯಕ್ಕೆ ಕಾಂಗ್ರೆಸ್​​ನ ನಾಯಕರು ಮುಂದಾಗಿದ್ದರು. ಆದರೆ ನ್ಯಾಯಾಲಯ ರಾಜ್ಯಪಾಲರ ನಡೆಯನ್ನು ಎತ್ತಿ ಹಿಡಿದು, ಭ್ರಷ್ಟರಿಗೆ ಭಾರತದಲ್ಲಿ ಜಾಗವಿಲ್ಲ ಎಂಬುದನ್ನು ಪುನರುಚ್ಛರಿಸಿದೆ.

ಸಿದ್ದರಾಮಯ್ಯ ಅವರಿಗೆ ಈ ನೆಲದ ಕಾನೂನಿನ ಬಗ್ಗೆ, ಸಂವಿಧಾನದ ಬಗ್ಗೆ , ನ್ಯಾಯಾಲಯದ ಬಗ್ಗೆ ಕಿಂಚಿತ್ತಾದರೂ ಗೌರವವಿದ್ದರೆ, ಭಂಡತನವನ್ನು ಮುಂದುವರೆಸದೆ, ನ್ಯಾಯಾಲಯದ ತೀರ್ಪಿಗೆ ತಲೆಬಾಗಿ ಕೂಡಲೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಬೇಕು.

ಇನ್ನು  ಬಡವರ ನಿವೇಶನ ಕಬಳಿಸಿ, ಲಜ್ಜೆಬಿಟ್ಟು ಸಿಎಂ ಹುದ್ದೆಯಲ್ಲಿ ಮುಂದುವರಿಯುತ್ತಿರುವ @siddaramaiah ನವರೇ ಒಂದು ಕ್ಷಣವೂ ಮುಖ್ಯಮಂತ್ರಿ ಹುದ್ದೆಯಲ್ಲಿ ಮುಂದುವರಿಯುವ ನೈತಿಕತೆಯನ್ನು ಇಂದು ತಾವು ಉಳಿಸಿಕೊಂಡಿಲ್ಲ. ರಾಜೀನಾಮೆ ನೀಡಿ, ತನಿಖೆ ಎದುರಿಸಿ. ನೀವು ಕಟ್ಟಿರುವ ಸುಳ್ಳಿನ ಸಾಮ್ರಾಜ್ಯ ಸಂಪೂರ್ಣ ಕುಸಿದಿದೆ ಇನ್ನು ಗೌರವಯುತವಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.

ಇದನ್ನೂ ಓದಿ : ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್ – ಮುಡಾ ಸಂಕಷ್ಟ ಫಿಕ್ಸ್.. ಅರ್ಜಿ ವಜಾಗೊಳಿಸಿದ ಹೈಕೋರ್ಟ್​..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here