ಬೆಂಗಳೂರು : ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜಕೀಯ ಪಕ್ಷದ ಟಿಕೆಟ್ ಹಂಚಿಕೆ ವಿಚಾರ ಇನ್ನು ಬಗೆಹರಿದಿಲ್ಲ. ಇದರ ನಡುವೆ ಚಿಕ್ಕಬಳ್ಳಾಪುರದ ಬಿಜೆಪಿ ಅಭ್ಯರ್ಥಿ ಸುಧಾಕರ್ ಎಂದು ಹೈಕಮಾಂಡ್ ಘೋಷಣೆ ಮಾಡಿದ ಬೆನ್ನಲ್ಲೇ ಯಲಹಂಕ ವಿಶ್ವನಾಥ್ ಬೆಂಬಲಿಗರು ಹಾಗೂ ಬಿಜೆಪಿ ಕಾರ್ಯಕರ್ತರು ಸೇರಿ ‘ಗೋಬ್ಯಾಕ್ ಸುಧಾಕರ್’ ಎಂದು ಘೋಷಣೆ ಕೂಗಿದ್ದರು. ಆದರೆ ಇದೀಗ ಈ ಅಭಿಯಾನ ಕಾಂಗ್ರಸ್ ಪಕ್ಷದ ಚಿಕ್ಕಬಳ್ಳಾಪುರ ಅಭ್ಯರ್ಥಿ ರಕ್ಷಾರಾಮಯ್ಯಗೆ ವರವಾಗುತ್ತಾ ಎಂಬ ಪ್ರಶ್ನೆ ಎದ್ದಿದೆ.
ಇದೇ ವಿಚಾರವಾಗಿ ದೇವನಹಳ್ಳಿಯ BIAAPA ಅಧ್ಯಕ್ಷ ಶಾಂತಕುಮಾರ್ ಬರ್ತಡೇ ಕಾರ್ಯಕ್ರಮದಲ್ಲಿ ರಕ್ಷಾರಾಮಯ್ಯ ಮಾತನಾಡಿ, ಚಿಕ್ಕಬಳ್ಳಾಪುರದ ಆರು ಕ್ಷೆತ್ರಗಳಲ್ಲಿ ಕಾಂಗ್ರೆಸ್ ಶಾಸಕರಿದ್ದಾರೆ. ಇನ್ನು ಚಿಕ್ಕಬಳ್ಳಾಪುರ ಕ್ಷೇತ್ರದಾದ್ಯಂತ ಬಿಜೆಪಿ ವೀಕ್ ಇದೆ. ಕ್ಷೇತ್ರದಲ್ಲಿ ಧರ್ಮ ಮತ್ತು ಅಧರ್ಮದ ನಡುವೆ ಹೋರಾಟ ನಡೆಯುತ್ತದೆ ಎಂದು ಹೇಳಿದ್ದಾರೆ. ಯಾವುದು ಧರ್ಮ, ಯಾವುದು ಅಧರ್ಮ ಎಂದು ಮತದಾರ ಡಿಸೈಡ್ ಮಾಡ್ತಾರೆ. ಬಿಜೆಪಿ ಪಕ್ಷದಲ್ಲಿ ಅಸಮಾಧಾನ ಹೆಚ್ಚಾಗಿದೆ. ಮೈತ್ರಿ ಭಾಗವಾಗಿದ್ದ ಚಿಕ್ಕಬಳ್ಳಾಪುರದ ಜೆಡಿಎಸ್ ಮಾಜಿ ಶಾಸಕ ಬಚ್ಚೇಗೌಡ ಕಾಂಗ್ರೆಸ್ ಸೇರಿದ್ದಾರೆ. ಚಿಕ್ಕಬಳ್ಳಾಪುರದ ಇನ್ನು ಅನೇಕ ಶಾಸಕರು ಕಾಂಗ್ರೆಸ್ ಸೇರ್ತಾರೆ ಎಂದು ಹೇಳಿದ್ದಾರೆ.
ಕಾಂಗ್ರೆಸ್ ನ ಟಿಕೆಟ್ ಆಕಾಂಕ್ಷಿಗಳಾಗಿದ್ದ ಮೊಯ್ಲಿ ಸಾಹೇಬ್ರು, ಶಿವಶಂಕರ್ ರೆಡ್ಡಿ ನನಗೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಕರೋನಾ ವೇಳೆ ಡಾ.ಸುಧಾಕರ್ ಸಚಿವರಾಗಿದ್ದ ವೇಳೆ ಭ್ರಷ್ಟಾಚಾರದ ಒಂದೋಂದೆ ಅರೋಪ ಆಚೆ ಬರ್ತಿದೆ. ಯಲಹಂಕದಲ್ಲಿ ಕಾಂಗ್ರೆಸ್ ವೀಕ್ ಇಲ್ಲ, ಹೆಸರಘಟ್ಟ ದಾಸರಹಳ್ಳಿಗಳಲ್ಲಿ ಕಾಂಗ್ರೆಸ್ ಸ್ಟ್ರಾಂಗ್ ಇದೆ ಎಂದು ದೇವನಹಳ್ಳಿಯ BIAAPA ಅಧ್ಯಕ್ಷ ಶಾಂತಕುಮಾರ್ ಬರ್ತ್ ಡೇ ಕಾರ್ಯಕ್ರಮದಲ್ಲಿ ರಕ್ಷಾರಾಮಯ್ಯ ಗೆಲುವಿನ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ವಿಜಯನಗರ : ಕ್ಷುಲ್ಲಕ ಕಾರಣಕ್ಕೆ ಎರಡು ಕುಟುಂಬಗಳ ಮಧ್ಯೆ ಬಡಿದಾಟ – ಇಬ್ಬರಿಗೆ ಗಾಯ..!