Download Our App

Follow us

Home » ಜಿಲ್ಲೆ » ಚಿಕ್ಕಮಗಳೂರು : ಬಿರುಗಾಳಿ ಸಹಿತ ಮಳೆ ಆರ್ಭಟಕ್ಕೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ನಾಶ..!

ಚಿಕ್ಕಮಗಳೂರು : ಬಿರುಗಾಳಿ ಸಹಿತ ಮಳೆ ಆರ್ಭಟಕ್ಕೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ನಾಶ..!

ಚಿಕ್ಕಮಗಳೂರು : ಜಿಲ್ಲೆಯಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಬಿರುಗಾಳಿ ಸಹಿತ ಮಳೆ ಆರ್ಭಟಕ್ಕೆ ಮನೆಯ ಮೇಲೆ ಬೃಹತ್ ಗಾತ್ರದ ಮರ ಬಿದ್ದ ಘಟನೆ ಜಿಲ್ಲೆಯ ಕಳಸ ತಾಲೂಕಿನ ಬಾಳೆಹೊಳೆ ಕಗ್ಗನಹಳ್ಳ ಗ್ರಾಮದಲ್ಲಿ ನಡೆದಿದೆ.

ಕಳಸ ತಾಲೂಕಿನ ಕಗ್ಗನಹಳ್ಳ ಗ್ರಾಮದಲ್ಲಿ ನಿನ್ನೆ ರಾತ್ರಿ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದ್ದು, ಬೆಳಗಿನ ಜಾವ ನಾಲ್ಕು ಗಂಟೆ ಸುಮಾರಿಗೆ ಗಿರಿಜಾ ಎಂಬುವರ ಮನೆಯ ಮೇಲೆ ಬೃಹತ್ ಗಾತ್ರದ ಮರವೊಂದು ಉರುಳಿ ಬಿದ್ದಿದೆ.

ಕುಟುಂಬಸ್ಥರು ಮಲಗಿದ್ದ ಮಂಚದ ಮೇಲೆಯೇ ಕೊಂಬೆ ಬಿದ್ದಿದ್ದು, ಮನೆಯಲ್ಲಿದ್ದ ಐವರು ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಮನೆಯಲ್ಲಿದ್ದ ಕುಟುಂಬಸ್ಥರು ಸಣ್ಣಪುಟ್ಟ ಗಾಯಗಳಾಗಿದ್ದು, ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಘಟನೆಯಲ್ಲಿ ಮನೆ ಸಂಪೂರ್ಣ ಜಖಂ ಆಗಿದ್ದು, ಮನೆಯಲ್ಲಿದ್ದ ಪಿಠೋಪಕರಣಗಳಿಗೆ ಬಹುತೇಕ ಹಾನಿಯಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಆಹಾರ ಪದಾರ್ಥಗಳು ಮಣ್ಣು ಪಾಲಾಗಿದೆ.

ಇದನ್ನೂ ಓದಿ : ಬೆಳಗಾವಿ ಗುಂಪು ಘರ್ಷಣೆ ಪ್ರಕರಣ – 50ಕ್ಕೂ ಹೆಚ್ಚು ಮಂದಿ ವಿರುದ್ದ FIR ದಾಖಲು..!

 

 

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here