Download Our App

Follow us

Home » ಸಿನಿಮಾ » “ಫಾರೆಸ್ಟ್”ನಲ್ಲಿ ಚಿಕ್ಕಣ್ಣ-ಅನೀಶ್-ಗುರುನಂದನ್ ಹಾಗೂ ರಂಗಾಯಣ ರಘು : ಇದು ಬ್ರಹ್ಮಚಾರಿ ನಿರ್ದೇಶಕ ಹೊಸ ಸಿನಿಮಾ..!

“ಫಾರೆಸ್ಟ್”ನಲ್ಲಿ ಚಿಕ್ಕಣ್ಣ-ಅನೀಶ್-ಗುರುನಂದನ್ ಹಾಗೂ ರಂಗಾಯಣ ರಘು : ಇದು ಬ್ರಹ್ಮಚಾರಿ ನಿರ್ದೇಶಕ ಹೊಸ ಸಿನಿಮಾ..!

ಕನ್ನಡದಲ್ಲಿ ‌ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ ನಾಲ್ಕು ಜನ ತಾರೆಯರನ್ನು ಒಂದೇ ಫ್ರೇಮ್ ಗೆ ತಂದು ಆಕ್ಷನ್ ಕಟ್ ಹೇಳುತ್ತಿರುವುದು ಡಬ್ಬಲ್ ಇಂಜಿನ್, ಬ್ರಹ್ಮಚಾರಿ ಸಿನಿಮಾಗಳ‌ ಸಾರಥಿ ಚಂದ್ರ ಮೋಹನ್.

ಚಂದ್ರ ಮೋಹನ್ ಹೊಸ ಪ್ರಯತ್ನಕ್ಕೆ ಫಾರೆಸ್ಟ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಫಾರೆಸ್ಟ್ ಅಡ್ವೆಂಚರ್‌ ಕಾಮಿಡಿ ಸಿನಿಮಾ. ಚಿತ್ರ 80%ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ.

ಚಿಕ್ಕಣ್ಣ, ಅನೀಶ್ , ಗುರುನಂದನ್ ಹಾಗೂ ರಂಗಾಯಣ ರಘು ನಾಲ್ಕು ತಾರೆಯರು ಫಾರೆಸ್ಟ್ ಸಿನಿಮಾದ ಆಧಾರ ಸ್ತಂಭಗಳು. ಫನ್ ಜೊತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡುವ ಫಾರೆಸ್ಟ್ ಚಿತ್ರಕ್ಕೆ ಎನ್ ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಅಂದಹಾಗೇ ಕಾಂತರಾಜು ಅವರಿಗಿದು ಚೊಚ್ಚಲ ಚಿತ್ರ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ಫಾರೆಸ್ಟ್ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.

ಫಾರೆಸ್ಟ್ ಸಿನಿಮಾಗೆ ವಿ. ರವಿಶಂಕರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಧರ್ಮವೀರ್-ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.

ಇದನ್ನೂ ಓದಿ : ಕನ್ನಡ ಸಿನಿಮಾ ರಂಗಕ್ಕೆ ದ್ವಾರಕೀಶ್ ಕೊಡುಗೆ ಅಪಾರ : ಸಿಎಂ ಸಿದ್ದರಾಮಯ್ಯ..!

Leave a Comment

RELATED LATEST NEWS

Top Headlines

ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ : KSRTC ಬಸ್​ ಡ್ರೈವರ್​​ಗೆ ಚಾ*ಕುವಿನಿಂದ ಇರಿದ ಮಿನಿ ಟ್ರಕ್​​ ಡ್ರೈವರ್​​..!

ಬೆಂಗಳೂರು : ವಾಹನವನ್ನು ಓವರ್​ ಟೇಕ್​ ಮಾಡುವ ವಿಚಾರಕ್ಕೆ ಜಗಳ ನಡೆದು KSRTC ಬಸ್​ ಡ್ರೈವರ್​​ಗೆ ಮಿನಿ ಟ್ರಕ್​​ ಡ್ರೈವರ್ ​​ಚಾಕುವಿನಿಂದ ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ

Live Cricket

Add Your Heading Text Here