Download Our App

Follow us

Home » ಜಿಲ್ಲೆ » ಚಿಕ್ಕಮಗಳೂರು : ತಾಯಿಯನ್ನ ಮನೆಗೆ ಕಳಿಸದ ಮಾವನ ಮೇಲೆ ನಡುರಸ್ತೆಯಲ್ಲೇ ಮಚ್ಚು ಬೀಸಿದ ಅಳಿಯ..!

ಚಿಕ್ಕಮಗಳೂರು : ತಾಯಿಯನ್ನ ಮನೆಗೆ ಕಳಿಸದ ಮಾವನ ಮೇಲೆ ನಡುರಸ್ತೆಯಲ್ಲೇ ಮಚ್ಚು ಬೀಸಿದ ಅಳಿಯ..!

ಚಿಕ್ಕಮಗಳೂರು : ತನ್ನ ತಾಯಿಯನ್ನ ಮನೆಗೆ ಕಳಿಸಲಿಲ್ಲ ಎಂದು ಕೋಪಗೊಂಡು ಅಳಿಯನೊಬ್ಬ ಮಾವನ ಮೇಲೆಯೇ ಬೀಸಿರುವ ಘಟನೆ ಜಿಲ್ಲೆಯ ಕಡೂರು ಪಟ್ಟಣದ ವಿಜಯಲಕ್ಷ್ಮಿ ಟಾಕೀಸ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಕಡೂರು ಪಟ್ಟಣದಲ್ಲಿ ಆಟೋ ಓಡಿಸುತ್ತಿರುವ ಭರತ್ ಮಾವನ ಮೇಲೆ ಮಚ್ಚು ಬೀಸಿದ ಯುವಕ. ಭರತ್ ತಾಯಿ ಗಂಡನ ಜೊತೆ ಜಗಳವಾಡಿ ತವರು ಸೇರಿದ್ದರು. ಗಂಡನ ಮನೆಗೆ ಬಂದಿರಲಿಲ್ಲ. ಮಗ ಭರತ್ ತಾಯಿ ಬಳಿ ಮನೆಗೆ ಬರುವಂತೆ ಹೇಳಿದ್ದನು. ಜೊತೆಗೆ ತಾಯಿಯನ್ನು ಮನೆಗೆ ಕಳುಹಿಸುವಂತೆ ಮಾವ ಮಹಾಲಿಂಗ ಅವರ ಬಳಿ ಹೇಳಿದ್ದನು. ಆದರೂ ತಾಯಿ ಗಂಡನ ಮನೆಗೆ ಹೋಗಿರಲಿಲ್ಲ.

ಈ ಬಗ್ಗೆ ಮಾವ ಮಹಾಲಿಂಗ ಭರತ್ ಹಾಗೂ ಆತನ ತಂದೆ ರಾಮಸ್ವಾಮಿ ವಿರುದ್ಧ ಅಸಮಾಧಾನ ಹೊರಹಾಕಿದ್ದರು. ನೀವು ನನ್ನ ತಂಗಿಗೆ ಸಾಕಷ್ಟು ಹಿಂಸೆ ನೀಡಿದ್ದೀರಿ. ಹಾಗಾಗಿ ಅವಳನ್ನು ಕಳಿಸುವುದಿಲ್ಲ. ಅಪ್ಪ-ಮಗ ಇಬ್ಬರನ್ನು ಜೈಲಿಗೆ ಕಳುಹಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದರು. ಆದರೂ ಭರತ್ ಮೇಲಿಂದ ಮೇಲೆ ಫೋನ್ ಮಾಡಿ ಅಮ್ಮನನ್ನು ಕಳುಹಿಸುವಂತೆ ಬಲವಂತ ಮಾಡಿದ ಪರಿಣಾಮ ಮಾವ ಮಹಾಲಿಂಗ ಡಿಸೆಂಬರ್ 31ರಂದು ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು.

ಹಾಗಾಗಿ ಸಿಟ್ಟಿನಿಂದ ಜ.2 ರಂದು ಭರತ್ ಹಾಡಹಗಲೇ ನಡು ರಸ್ತೆಯಲ್ಲಿ ಮಾವನ ಮೇಲೆ ಮನಸ್ಸು ಇಚ್ಚೆ ಮಚ್ಚು ಬೀಸಿದ್ದಾನೆ. ಏಕಾಏಕಿ ದಾಳಿಯಿಂದ ಗಂಭೀರ ಗಾಯಗೊಂಡಿರುವ ಮಹಾಲಿಂಗನ ಸ್ಥಿತಿ ಚಿಂತಾಜನಕವಾಗಿದ್ದು, ಶಿವಮೊಗ್ಗ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಪ್ರಕರಣ ಸಂಬಂಧ ಭರತ್​​ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ಪೊಲೀಸರು. ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ – ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?

Leave a Comment

DG Ad

RELATED LATEST NEWS

Top Headlines

ಹೊಸ ವರ್ಷದ ಆರಂಭದಲ್ಲೇ ಬಿಗ್ ಶಾಕ್​​.. ಸ್ಟಾರ್ ನಟನಿಗೆ ಅನಾರೋಗ್ಯ – ಫ್ಯಾನ್ಸ್ ಆತಂಕ.. ಹೆಲ್ತ್​ ಬುಲೆಟಿನ್​​​ನಲ್ಲಿ ಏನಿದೆ ?

ಚೆನ್ನೈ : ತಮಿಳು ನಟ ವಿಶಾಲ್‌ ಅವರು ಗಂಭೀರವಾದ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾರೆಯೇ ಎನ್ನುವ ಬಗ್ಗೆ ಚರ್ಚೆ ಶುರುವಾಗಿದೆ. ತಮಿಳು ಚಿತ್ರರಂಗದಲ್ಲಿ ವಿಶಾಲ್‌ ಫೇಮಸ್‌ ಆಗಿದ್ದಾರೆ. ಅಲ್ಲದೆ

Live Cricket

Add Your Heading Text Here