Download Our App

Follow us

Home » ಅಪರಾಧ » ಮಗು ಅಕ್ರಮ ದತ್ತು ಪಡೆದ ಪ್ರಕರಣ : ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ..!

ಮಗು ಅಕ್ರಮ ದತ್ತು ಪಡೆದ ಪ್ರಕರಣ : ಸೋನು ಶ್ರೀನಿವಾಸಗೌಡಗೆ 14 ದಿನ ನ್ಯಾಯಾಂಗ ಬಂಧನ..!

ಬೆಂಗಳೂರು : ಸೋಶಿಯಲ್ ಮಿಡಿಯಾ ಸ್ಟಾರ್ ಆಗಿರುವ ಸೋನು ಶ್ರೀನಿವಾಸ್ ಗೌಡ ಕಾನೂನು ಬಾಹಿರವಾಗಿ ಮಗುವನ್ನು ದತ್ತು ಪಡೆದ ಆರೋಪದ ಮೇಲೆ ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿನ್ನೆ ರಾಯಚೂರಿನ ಮಸ್ಕಿ ತಾಲೂಕಿನ ಕಾಚಾಪುರದಲ್ಲಿ ಪೊಲೀಸರು ಸ್ಥಳ ಮಹಜರು ನಡೆಸಿದ್ದರು.

ಬೆಂಗಳೂರು ಪೊಲೀಸರು ಮಸ್ಕಿಯ ಕಾಚಾಪುರ ಗ್ರಾಮಕ್ಕೆ ಸೋನುಗೌಡಳನ್ನು ಕರೆದುಕೊಂಡು ಹೋಗಿ ಮಗುವಿನ ಮನೆಗೆ ಭೇಟಿ ನೀಡಿದ್ದರು. ಬೇಟಿ ನೀಡಿದ ಬಳಿಕ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎನ್​ಕ್ವೈರಿ ನಡೆಸಿದ್ದಾರೆ. ಇದೀಗ ವಿಚಾರಣೆ ಬಳಿಕ ಸೋನು ಶ್ರೀನಿವಾಸ ಗೌಡಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

ಇಂದಿಗೆ ಸೋನು ಶ್ರೀನಿವಾಸಗೌಡ ಪೊಲೀಸ್ ಕಸ್ಟಡಿ ಅಂತ್ಯವಾಗಿತ್ತು. ಆದರೆ ಕೆಲ ಹೊತ್ತಿನ ಹಿಂದೆ ಬ್ಯಾಡರಹಳ್ಳಿ ಪೊಲೀಸರು CJM ಕೋರ್ಟ್​ ಮುಂದೆ ಸೋನು ಶ್ರೀನಿವಾಸ ಗೌಡರನ್ನು ಹಾಜರು ಪಡಿಸಿದ್ದರು. ಕೋರ್ಟ್​ ವಿಚಾರಣೆ ಬಳಿಕ ಸೋನು ಶ್ರೀನಿವಾಸ ಗೌಡಗೆ ಏಪ್ರಿಲ್​​​ 8ರವರೆಗೆ ಕೋರ್ಟ್​ ನ್ಯಾಯಾಂಗ ಬಂಧನ ವಿಧಿಸಿದೆ.

ಪ್ರಕರಣದ ಹಿನ್ನೆಲೆ : ಸೋನು ಶ್ರೀನಿವಾಸ್ ಗೌಡ ಉತ್ತರ ಕರ್ನಾಟಕ ಭಾಗದ 8 ವರ್ಷದ ಮಗುವನ್ನು ದತ್ತು ತೆಗೆದುಕೊಂಡಿದ್ದರು. ಆದರೆ, ಅವರು ಕಾನೂನು ಬಾಹಿರವಾಗಿ ಅವರು ಮಗುವನ್ನು ದತ್ತು ಪಡೆದಿದ್ದಾರೆ ಎಂಬ ಕಾರಣಕ್ಕೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯಲ್ಲಿ ಜೆ.ಜೆ.ಆ್ಯಕ್ಟ್ ಅಡಿಯಲ್ಲಿ ದೂರು ದಾಖಲಾಗಿದೆ. ಮಕ್ಕಳ ಕಲ್ಯಾಣ ಇಲಾಖೆಯಿಂದ ಸೋನು ಗೌಡ ವಿರುದ್ಧ ದೂರ ದಾಖಲಾಗಿದೆ. ಈ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ.

ಬ್ಯಾಡರಹಳ್ಳಿ ಪೊಲೀಸರು ಸೋನು ಶ್ರೀನಿವಾಸ್ ಗೌಡ ಬಂಧಿಸಿದ್ದಾರೆ. ಮಗು ದತ್ತು ಪಡೆದಿರುವುದಾಗಿ, ಮಗುವಿನ ಫೋಟೋವನ್ನು ಅವರು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಎಂಟು ವರ್ಷದ ಮಗುವನ್ನು ಕಾನೂನು ಬಾಹಿರವಾಗಿ ಅವರು ದತ್ತು ಪಡೆದಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಗೀತಾ ದೂರು ನೀಡಿದ್ದರು. ದತ್ತು ಪಡೆದಿರುವ ಹೆಣ್ಣು ಮಗುವನ್ನು ಪ್ರಚಾರಕ್ಕೆ ಬಳಸಿಕೊಂಡಿರುವ ಆರೋಪ ಸೋನು ಮೇಲಿದೆ. ಸಾರ್ವಜನಿಕವಾಗಿ ಮಗುವಿನ ಮಾಹಿತಿ ಹಂಚಿಕೊಳ್ಳುವಂತಿಲ್ಲ. ಇನ್ನು ದತ್ತು ಪಡೆಯಲು ಅನುಸರಿಬೇಕಾದ ಕಾನೂನಾತ್ಮಕ ಪ್ರಕ್ರಿಯೆಗಳನ್ನು ಸಹ ಸರಿಯಾಗಿ ಮಾಡಿಲ್ಲ ಎಂಬ ಆರೋಪ ಸಹ ಇದೆ‌.

ಇದನ್ನೂ ಓದಿ : ಇಂದು ಜೆಡಿಎಸ್​ನ ಮೂರು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಿರುವ ಹೆಚ್​ಡಿಕೆ..!

Leave a Comment

DG Ad

RELATED LATEST NEWS

Top Headlines

RBI ಗವರ್ನರ್​ ಟು ಪ್ರಧಾನಿ ಆಗುವವರೆಗೆ.. ಡಾ.ಮನಮೋಹನ್ ಸಿಂಗ್​​ ನಡೆದು ಬಂದ ಹಾದಿಯೇ ರೋಚಕ..!

ಭಾರತದ ಕಂಡಂಥ ಅಪ್ರತಿಮ ನಾಯಕ, ಭಾರತದ ಆರ್ಥಿಕತೆಗೆ ಭದ್ರ ಬುನಾದಿ ಹಾಕಿದ ಆರ್ಥಿಕ ತಜ್ಞ, ಮಾಜಿ ಪ್ರಧಾನಿ ಮನಮೋಹನ್​ ಸಿಂಗ್​ ವಿಧಿವಶರಾಗಿದ್ದಾರೆ. 92 ವರ್ಷ ವಯಸ್ಸಿನ ಡಾ.

Live Cricket

Add Your Heading Text Here