Download Our App

Follow us

Home » ಜಿಲ್ಲೆ » ಬೀದರ್ : ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಬೆಳಗ್ಗೆ ಜೋಳಿಗೆಯಲ್ಲಿ ಪ್ರತ್ಯಕ್ಷ..!

ಬೀದರ್ : ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಮಗುವಿನ ಮೃತದೇಹ ಬೆಳಗ್ಗೆ ಜೋಳಿಗೆಯಲ್ಲಿ ಪ್ರತ್ಯಕ್ಷ..!

ಬೀದರ್ : ರಾತ್ರಿ ಅಂತ್ಯಸಂಸ್ಕಾರ ಮಾಡಿದ್ದ ಒಂದೂವರೆ ವರ್ಷದ ಮಗುವಿನ ಮೃತದೇಹ ಬೆಳಗ್ಗೆ ಜೋಳಿಗೆಯಲ್ಲಿ ಪತ್ತೆಯಾಗಿರುವ ಘಟನೆ ಬೀದರ್​​ನಲ್ಲಿ ನಡೆದಿದೆ. ಜೋಳಿಗೆಯಲ್ಲಿ ಮೃತದೇಹ ಕಂಡು ಗ್ರಾಮಸ್ಥರು, ಕುಟುಂಬಸ್ಥರು ಆತಂಕಗೊಂಡಿದ್ದಾರೆ.

ಬಸವಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದ ಅಂಬಯ್ಯ ಸ್ವಾಮಿ ಎಂಬುವವರ ಒಂದೂವರೆ ವರ್ಷದ ಹೆಣ್ಣು ಮಗು ಅನಾರೋಗ್ಯದಿಂದ ಜೂನ್ 29ರ ಸಂಜೆ ಸಾವನ್ನಪ್ಪಿದ್ದಳು. ಈ ಹಿನ್ನೆಲೆಯಲ್ಲಿ ಕುಟುಂಬಸ್ಥರು ತಡರಾತ್ರಿ ಮಗುವಿನ ಮೃತದೇಹವನ್ನು ಅಂತ್ಯಸಂಸ್ಕಾರ ಮಾಡಿದ್ದರು. ಆದರೆ ಮರುದಿನ ಅಂದರೆ ಜೂನ್ 30ರ ಬೆಳಗ್ಗೆ ಮರಕ್ಕೆ ಕಟ್ಟಿದ್ದ ಜೋಳಿಗೆಯಲ್ಲಿ ಮಗುವಿನ ಮೃತದೇಹ ಪ್ರತ್ಯಕ್ಷವಾಗಿದೆ.

ಜೋಳಿಗೆಯಲ್ಲಿ ಮೃತದೇಹ ಕಂಡು ಸ್ಥಳೀಯರು ಆತಂಕಕ್ಕೊಳಗಾಗಿದ್ದಾರೆ. ಭಾನುವಾರ ಕುಟುಂಬಸ್ಥರು ಮತ್ತೆ ಅಂತ್ಯಸಂಸ್ಕಾರ ಮಾಡಿದ್ದು, ಮಗುವಿನ ಕಾಲಲ್ಲಿ ಬಿಟ್ಟಿದ್ದ ಚೈನ್ ಆಸೆಗೆ ಮಗುವನ್ನು ಹೊರತೆಗೆದಿರೋ ಶಂಕೆ ವ್ಯಕ್ತವಾಗಿದೆ.

ಇದನ್ನೂ ಓದಿ : ಡೇಂಜರಸ್​ ಬೆರಿಲ್​​​ ಸೈಕ್ಲೋನ್​ಗೆ​​ ಸಿಲುಕಿದ ವಿಶ್ವಕಪ್ ವಿಜೇತ ಟೀಂ ಇಂಡಿಯಾ – ಆಟಗಾರರು ತವರಿಗೆ ಬರೋದು ಯಾವಾಗ?

 

 

 

Leave a Comment

DG Ad

RELATED LATEST NEWS

Top Headlines

ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್​​ಗೆ ಡಿಕ್ಕಿ ಹೊಡೆದ ಕಾರು – ತಾಯಿ, ಮಗ ಸ್ಥಳದಲ್ಲೇ ಸಾವು..!

ಮಂಡ್ಯ : ಮೈಸೂರು-ಬೆಂಗಳೂರು ಎಕ್ಸ್​ಪ್ರೆಸ್​ ವೇ ನಲ್ಲಿ ಭೀಕರ ರಸ್ತೆ ಅಪಘಾತಕ್ಕೆ ತಾಯಿ ಮಗ ಬಲಿಯಾಗಿರುವ ಘಟನೆ ನಡೆದಿದೆ. ರುದ್ರಾಕ್ಷಿಪುರ ಗ್ರಾಮದ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಕಾರಿನಲ್ಲಿ

Live Cricket

Add Your Heading Text Here