Download Our App

Follow us

Home » ಜಿಲ್ಲೆ » ರಾಮನಗರ : ಚುಚ್ಚುಮದ್ದು ನೀಡಿದ 1 ಗಂಟೆಯಲ್ಲಿ ಮಗು ಸಾ*ವು – ವೈದ್ಯರ ನಿರ್ಲಕ್ಷ್ಯ ಆರೋಪ..!

ರಾಮನಗರ : ಚುಚ್ಚುಮದ್ದು ನೀಡಿದ 1 ಗಂಟೆಯಲ್ಲಿ ಮಗು ಸಾ*ವು – ವೈದ್ಯರ ನಿರ್ಲಕ್ಷ್ಯ ಆರೋಪ..!

ರಾಮನಗರ : ಚುಚ್ಚುಮದ್ದು ನೀಡಿದ ಕೆಲವೇ ಗಂಟೆಗಳಲ್ಲಿ ಮಗು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಬೈರಾಪಟ್ಟಣ ಗ್ರಾಮದಲ್ಲಿ ನಡೆದಿದೆ. ಸ್ಪೂರ್ತಿ ಮತ್ತು ಮೋಹನ್ ದಂಪತಿಯ ಒಂದೂವರೆ ತಿಂಗಳ ಮಗು ಸಾವನ್ನಪ್ಪಿದೆ.

ಇಂದು ಬೆಳಗ್ಗೆ ದೊಡ್ಡಮಳೂರಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪೋಷಕರು ಮಗುವಿಗೆ ಇಂಜೆಕ್ಷನ್ ಹಾಕಿಸಿದ್ದರು. ವ್ಯಾಕ್ಸಿನ್ ಹಾಕಿದ ಒಂದು ಗಂಟೆ ಬಳಿಕ ಮಗುವಿನ ಆರೋಗ್ಯದಲ್ಲಿ ಏರುಪೇರಾಗಿದ್ದು, ಪೋಷಕರು ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮಗು ಸಾವನ್ನಪ್ಪಿದೆ. ಇದೀಗ ಸೂಕ್ತ ರೀತಿಯಲ್ಲಿ ಮಗು ತಪಾಸಣೆ ಮಾಡದೇ ವ್ಯಾಕ್ಸಿನ್ ಹಾಕಿರುವ ಆರೋಪ ಕೇಳಿಬಂದಿದೆ.

ಮಗುವಿನ ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ. ಇಂದು ಅದೇ ಗ್ರಾಮದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ 18 ಮಕ್ಕಳಿಗೆ ಲಸಿಕೆ ನೀಡಿದ್ದು, 18 ಮಕ್ಕಳ ಪೈಕಿ 17 ಮಕ್ಕಳೂ ಆರೋಗ್ಯವಾಗಿದ್ದಾರೆ.

ಇದನ್ನೂ ಓದಿ : ರಾಧಿಕಾ ಕುಮಾರಸ್ವಾಮಿ ಅಭಿನಯದ ‘ಅಜಾಗ್ರತ’ ಚಿತ್ರಕ್ಕೆ ನೂರು ದಿನಗಳ ಚಿತ್ರೀಕರಣ ಪೂರ್ಣ..!

Leave a Comment

DG Ad

RELATED LATEST NEWS

Top Headlines

ಬೆಂಗಳೂರಿಗೆ ನಾಯಿ ಮಾಂಸ ರವಾನೆ ಆರೋಪ : ರೈಲ್ವೆ ನಿಲ್ದಾಣದಲ್ಲಿ ಹೈಡ್ರಾಮಾ – ಪೋಲಿಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಪುನೀತ್ ಕೆರೆಹಳ್ಳಿ ಅರೆಸ್ಟ್..!

ಬೆಂಗಳೂರು : ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜು ಆಗುವ ಮಟನ್ ಮಾಂಸದಲ್ಲಿ ನಾಯಿ ಮಾಂಸ ಬೆರೆಸಲಾಗಿದೆ ಎನ್ನುವ ಆರೋಪ ಕೇಳಿಬಂದಿದೆ. ನಿನ್ನೆ (ಜುಲೈ 26) ರಾಜಸ್ಥಾನದಿಂದ ಬಂದ

Live Cricket

Add Your Heading Text Here