ಚಿಕ್ಕಬಳ್ಳಾಪುರ : ಚಿಂತಾಮಣಿ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ವಿವಿಧ ಗ್ರಾಮಗಳಲ್ಲಿ ಮನೆಗಳಿಗೆ ಕನ್ನ ಹಾಕಿ ಬಂಗಾರ, ಬೆಳ್ಳಿ ಮುಂತಾದ ಒಡವೆಗಳನ್ನು ಕಳ್ಳತನ ಮಾಡಿ ಪರಾರಿಯಾಗಿದ್ದ ಮೂರು ಮಂದಿ ಖತರ್ನಾಕ್ ಕಳ್ಳರನ್ನು ಚಿಂತಾಮಣಿ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದು, ಕಳ್ಳರಿಂದ 47 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸೆ ಮಾರ್ಗದರ್ಶನದಲ್ಲಿ ಮನೆಗಳ್ಳರ ಬಂಧಿಸಲಾಗಿದೆ.
ಆಂಧ್ರಪ್ರದೇಶದ ಸತ್ಯಸಾಯಿ ಜಿಲ್ಲೆಯ ಹಿಂದೂಪುರದ ನಿವಾಸಿ ಮಹೇಶ್ (25) ಮುದಾಸೀರ್ ಪಾಷಾ (33) ಚಿನ್ನಸಂದ್ರ ಗ್ರಾಮದ ಸುಲ್ತಾನ್ ಬಾಷಾ (22) ಬಂಧಿತ ಆರೋಪಿಗಳು.
ಈ ಖತರ್ನಾಕ್ ಕಳ್ಳರ ಗ್ಯಾಂಗ್ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ನಾಯನಹಳ್ಳಿ ಗ್ರಾಮದಲ್ಲಿ ಇತ್ತೀಚಿಗೆ ಸಿವಿ ಕೃಷ್ಣಾರೆಡ್ಡಿ ಎಂಬುವರ ಮನೆಯ ಬೀಗ ಮುರಿದು ಚಿನ್ನದ ಒಡವೆಗಳನ್ನು ಕಳ್ಳತನ ಮಾಡಿದ್ದರು. ಅದಲ್ಲದೆ ತಾಲ್ಲೂಕಿನ ಕಾಗತಿ ಗ್ರಾಮದ ಮನೆಯಲ್ಲೂ ಇತ್ತೀಚೆಗಷ್ಟೇ ಕಳ್ಳರು ಒಡವೆಗಳನ್ನು ದೋಚಿ ಪರಾರಿಯಾಗಿದ್ದರು.
ಇದನ್ನೂ ಓದಿ : ಪ್ರೊ ಕಬಡ್ಡಿ ಸೀಸನ್ 11ಕ್ಕೆ ಅದ್ದೂರಿ ಚಾಲನೆ.. ಉದ್ಘಾಟನಾ ಪಂದ್ಯದಲ್ಲಿ ತೆಲುಗು ಟೈಟಾನ್ಸ್ಗೆ ಜಯ..!