ಚಿರ್ತದುರ್ಗ : ಬ್ಯಾಂಕ್ ಅಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಹೊಸದುರ್ಗದ ಖಾಸಗಿ ಲಾಡ್ಜ್ವೊಂದರಲ್ಲಿ ನಡೆದಿದೆ. 36 ವರ್ಷದ ಸಂತೋಷ್ ಆತ್ಮಹತ್ಯೆಗೆ ಶರಣಾದ ಬ್ಯಾಂಕ್ ಅಧಿಕಾರಿ.
ಸಂತೋಷ್ ಬ್ಯಾಂಕ್ ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆಗೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.. ಮಧ್ಯ ಪ್ರದೇಶದ ಖಾಸಗಿ ಬ್ಯಾಂಕ್ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್, ಮೇಲಾಧಿಕಾರಿಗಳ ಕಿರುಕುಳಕ್ಕೆ ಬೇಸತ್ತು ವರ್ಗಾವಣೆ ಕೋರಿದ್ದರು.
ವರ್ಗಾವಣೆಗೂ ಕೂಡಾ ಬ್ಯಾಂಕ್ ಮೇಲಾಧಿಕಾರಿಗಳು ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇದರಿಂದ ಮನನೊಂದ ಸಂತೋಷ್, ಹೊಸದುರ್ಗದ ಖಾಸಗಿ ಲಾಡ್ಜ್ನಲ್ಲಿ ಫ್ಯಾನ್ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಕುರಿತು ಸಂತೋಷ್ ಪತ್ನಿ ಲಾವಣ್ಯ ದೂರು ದಾಖಲಿಸಿದ್ದಾರೆ. ಇನ್ನು ಘಟನಾ ಸ್ಥಳಕ್ಕೆ ಹೊಸದುರ್ಗ CPI ತಿಮ್ಮಣ್ಣ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೊಸದುರ್ಗ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : NOC ನೀಡಲು 1 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟ ಅಗ್ನಿಶಾಮಕ ದಳದ ಅಧಿಕಾರಿ, ಸಿಬ್ಬಂದಿ ಲೋಕಾ ಬಲೆಗೆ..!