ಚಿತ್ರದುರ್ಗ : ಮಾಜಿ ಉಪ ಮುಖ್ಯಮಂತ್ರಿ, ಬಿಜೆಪಿ ಹಿರಿಯ ನಾಯಕ ಗೋವಿಂದ ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಬಿಜೆಪಿ ಹೈಕಮಾಂಡ್ ನೀಡಿದೆ. ಹಾಗಾಗಿ ಚಿತ್ರದುರ್ಗದಲ್ಲಿ ಕಾರಜೋಳ ವಿರುದ್ಧ ಆಕ್ರೋಶ ಭುಗಿಲೆದ್ದಿದೆ.
ಚಿತ್ರದುರ್ಗ BJP ಟಿಕೆಟ್ ಪೈನಲ್ ಬೆನ್ನಲ್ಲೇ ಬಿಜೆಪಿಯಲ್ಲಿ ಬೆಂಕಿ ಹಚ್ಚಿಕೊಂಡಿದ್ದು, ಗೋವಿಂದ ಕಾರಜೋಳ ವಿರುದ್ದ ಕಾರ್ಯಕರ್ತರು ಬಂಡಾಯ ಎದ್ದಿದ್ದಾರೆ. ಕಾರಜೋಳ ಅವರಿಗೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಕೊಟ್ಟಿದ್ದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಬಹಿರಂಗ ಅಸಮಾಧಾನ ವ್ಯಕ್ತವಾಗಿದ್ದು, ಅಭಿಮಾನಿಗಳು ಗೋ ಬ್ಯಾಕ್ ಕಾರಜೋಳ ಎಂದು ಕಾಮೆಂಟ್ ಮಾಡಿದ್ದಾರೆ.
ನಿಷ್ಠಾವಂತರಿಗೆ ಬೆಲೆ ಇಲ್ವಾ? ಕಾರಜೋಳ ಸೋಲು ಖಚಿತ ಎಂದು ಆಕ್ರೋಶ ಹೊರಹಾಕಿದ್ದಾರೆ. ಸ್ಥಳೀಯರು ಮಾತ್ರ ಹಿಂದೂಗಳ ಪರ ಹೊರಗಿನ ಅಭ್ಯರ್ಥಿ ಅಲ್ಲ, ಯಾವ ಪುರುಷಾರ್ಥಕ್ಕೆ ಸಮೀಕ್ಷೆ, ಸರ್ವೆಗಳು ಎಂದು ಕಾರ್ಯಕರ್ತರು ಪ್ರಶ್ನೆ ಮಾಡಿದ್ದಾರೆ. 2 ಲಕ್ಷ ಮತಗಳ ಅಂತರದಲ್ಲಿ ಬಿಜೆಪಿ ಸೋಲುತ್ತೆ ಎಂದು ಬಿಜೆಪಿ ಸಾಮಾಜಿಕ ಜಾಲತಾಣ ಗ್ರೂಪ್ನಲ್ಲಿ ಬಿಜೆಪಿ ಹೈಕಮಾಂಡ್ ಮೇಲೆ ಬೇಸರ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಲೋಕಸಭೆ ಚುನಾವಣೆ : ರಾಜ್ಯದ 14 ಕ್ಷೇತ್ರಗಳಿಗೆ ಇಂದಿನಿಂದ ನಾಮಪತ್ರ ಸಲ್ಲಿಕೆ ಆರಂಭ..!