ಚಿತ್ರದುರ್ಗ : ಚಲಿಸುತ್ತಿದ್ದ ಕ್ರೂಸರ್ ವಾಹನದ ಟೈಯರ್ ಬ್ಲಾಸ್ಟ್ ಆಗಿ 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಳ್ಳಕೆರೆ ತಾಲೂಕಿನ ಶಿವಗಂಗಾ ಪೆಟ್ರೋಲ್ ಬಂಕ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾಗಿದೆ. ಅನಿತಾ, ಜ್ಯೋತಿ, ಮಮತ, ಸೇರಿ ಹಲವರಿಗೆ ಗಂಭೀರ ಗಾಯವಾಗಿದೆ. ಗಾಯಾಳಗಳನ್ನು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಎಂದು ಗುರುತಿಸಲಾಗಿದೆ.
ಮೊಳಕಾಲ್ಮೂರಿಂದ ಬೆಂಗಳೂರಿಗೆ ಪ್ರತಿಭಟನೆಗಾಗಿ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದ್ದು, ಸ್ಥಳಕ್ಕೆ ಚಳ್ಳಕೆರೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಬಳ್ಳಾರಿ : ನಕಲಿ ಇ-ಮೇಲ್ ಬಳಸಿ ವಂಚನೆ – 1.49 ಕೋಟಿ ರೂ. ವಶಕ್ಕೆ..!
Post Views: 944