ಚಿತ್ರದುರ್ಗ : ಜಿಲ್ಲೆಯ ಹಿರಿಯೂರು ಬಳಿಯ RK ಪವರ್ ಜಿನ್ ಬಳಿ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಟಾಟಾ ಎಸ್ ಡಿಕ್ಕಿ ಹೊಡೆದು ಇಬ್ಬರು ಸಾವನ್ನಪ್ಪಿದ್ದಾರೆ. 65 ವರ್ಷದ ಶಿವಲಿಂಗಪ್ಪ, 50 ವರ್ಷದ ರಮೇಶ್ ಮೃತರು.
ಚಳ್ಳಕೆರೆ ಕಡೆಯಿಂದ ಹಿರಿಯೂರು ಕುರಿ ಮಾರುಕಟ್ಟೆಗೆ ತೆರಳುವಾಗ ಆಕ್ಸಿಡೆಂಟ್ ಆಗಿದೆ. ಟಾಟಾ ಏಸ್ ವಾಹನದಲ್ಲಿ ಕುರಿ ತುಂಬಿಕೊಂಡು ಮಾರುಕಟ್ಟೆಗೆ ಹೋಗುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ರಮೇಶ್ ಚಳ್ಳಕೆರೆ ತಾಲೂಕಿನ ಹುಲಿಕುಂಟೆ ನಿವಾಸಿ, ಶಿವಲಿಂಗಪ್ಪ ಬೆಳೆಗೆರೆ ಗ್ರಾಮದ ನಿವಾಸಿಯಾಗಿದ್ದಾರೆ.
ಟಾಟಾ ಏಸ್ ಚಾಲಕನ ಅತಿವೇಗ & ಅಜಾಗರೂಕತೆ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಚಾಲಕನಿಗೆ ಗಂಭೀರ ಗಾಯಗಳಾಗಿದ್ದು ಹಿರಿಯೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಪೊಲೀಸ್ ಇನ್ಸ್ಪೆಕ್ಟರ್ ಕಾಳಿಕೃಷ್ಣ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಹಿರಿಯೂರು ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಇದನ್ನೂ ಓದಿ : ಇಂಗ್ಲೆಂಡ್ನಿಂದ ಭಾರತಕ್ಕೆ 100 ಟನ್ ಚಿನ್ನ ವಾಪಸ್ ತಂದ ಆರ್ಬಿಐ..!
Post Views: 189