Download Our App

Follow us

Home » ರಾಜಕೀಯ » ತುಳುನಾಡು ಮಲೆನಾಡಿನಲ್ಲಿ ಮತ್ತೆ ಅರಳಿದ ಕಮಲ : ಮಂಗಳೂರಿಗೆ ಚೌಟ, ಉಡುಪಿಗೆ ಕೋಟ..!

ತುಳುನಾಡು ಮಲೆನಾಡಿನಲ್ಲಿ ಮತ್ತೆ ಅರಳಿದ ಕಮಲ : ಮಂಗಳೂರಿಗೆ ಚೌಟ, ಉಡುಪಿಗೆ ಕೋಟ..!

ಮಂಗಳೂರು : ಕಳೆದ ಕೆಲವು ದಶಕಗಳಿಂದ ಬಿಜೆಪಿಯ ಭದ್ರಕೋಟೆಯಾಗಿರುವ ದಕ್ಷಿಣ ಕನ್ನಡ ಕ್ಷೇತ್ರದಲ್ಲಿ ಮತ್ತೆ ಕಮಲ ಕಮಾಲ್ ಮಾಡಿದೆ. ಕಳೆದ 8 ಚುನಾವಣೆಗಳಲ್ಲಿ ಗೆಲುವಿನ ಪತಾಕೆ ಹಾರಿಸಿರುವ ಬಿಜೆಪಿಯೂ ಈ ಬಾರಿಯೂ ಗೆಲುವಿನ ನಗೆ ಬೀರಿದೆ. ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್‌ ಬ್ರಿಜೇಶ್‌ ಚೌಟ ಅವರು ಕಾಂಗ್ರೆಸ್ ಅಭ್ಯರ್ಥಿ ಆರ್‌ ಪದ್ಮರಾಜ್‌ ಅವರನ್ನು ಸೋಲಿಸಿದ್ದಾರೆ. ಈ ಬಗ್ಗೆ ಅಧಿಕೃತ ಘೋಷಣೆಯೊಂದೇ ಬಾಕಿಯಿದೆ.

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ್ ಪೂಜಾರಿ ಅವರು ಮತ್ತೆ ಅಭೂತಪೂರ್ವ ಗೆಲುವು ಸಾಧಿಸಿದ್ದಾರೆ. ಕೋಟ ಶ್ರೀನಿವಾಸ್ ಪೂಜಾರಿ ಅವರು 6,34,746 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಅವರು 4,15,051 ಮತಗಳನ್ನು ಪಡೆದಿರುತ್ತಾರೆ. ಈ ಮೂಲಕ ಕೋಟ ಶ್ರೀನಿವಾಸ ಪೂಜಾರಿ ಅವರು 2,19,695 ಮತಗಳ ಭರ್ಜರಿ ಗೆಲುವು ಸಾಧಿಸಿದ್ದಾರೆ.

ಬೆಂಗಳೂರು ದಕ್ಷಿಣದಲ್ಲಿ ತೇಜಸ್ವಿ ಸೂರ್ಯ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇತ್ತ ಈ ಬಾರಿ ನಾನೇ ಗೆಲ್ತೀನಿ ಅಂದುಕೊಂಡಿದ್ದ ಸೌಮ್ಯ ರೆಡ್ಡಿಗೆ ಬಿಗ್‌ ಶಾಕ್‌ ಎದುರಾಗಿದೆ. ಕಳೆದ ವಿಧಾನಸಭೆಯಲ್ಲೂ ಸೌಮ್ಯ ರೆಡ್ಡಿ ಬೆರಳಣಿಕೆಯಷ್ಟು ಮತಗಳಿಂದ ಸೋತ್ತಿದ್ದರು. ಆದರೆ ಲೋಕಸಭೆಯಲ್ಲಿ ಭಾರೀ ಅಂತರದಿಂದ ಸೋಲುಂಡಿದ್ದಾರೆ.

ಇದನ್ನೂ ಓದಿ : ಕೋಲಾರದಲ್ಲಿ ಜಯಭೇರಿ ಬಾರಿಸಿದ ಜೆಡಿಎಸ್ ಅಭ್ಯರ್ಥಿ ಎಂ. ಮಲ್ಲೇಶ್ ಬಾಬು..!

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here