Download Our App

Follow us

Home » ಅಪರಾಧ » ಗದಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ – ಪೊಲೀಸರಿಂದ ಲಾಠಿ ಚಾರ್ಜ್..!

ಗದಗದಲ್ಲಿ ಗಣೇಶ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ – ಪೊಲೀಸರಿಂದ ಲಾಠಿ ಚಾರ್ಜ್..!

ಗದಗ : ಎರಡು ಗಣೇಶ ಮೂರ್ತಿಗಳ ವಿಸರ್ಜನೆ ವೇಳೆ ಎರಡು ಗುಂಪುಗಳ ನಡುವೆ ಗಲಾಟೆ ನಡೆದಿರುವ ಘಟನೆ ಗದಗ ನಗರದ ಟಾಂಗಾಕೂಟ್ ಸರ್ಕಲ್​ನಲ್ಲಿ ಮಧ್ಯರಾತ್ರಿ 2 ಗಂಟೆ ಸುಮಾರಿಗೆ ನಡೆದಿದೆ.

ಗಲಾಟೆಯನ್ನು ನಿಯಂತ್ರಿಸಲು ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಪಟಾಕಿ ಹಚ್ಚುವ ವಿಚಾರಕ್ಕೆ ಎರಡು ಗುಂಪುಗಳ ನಡುವೆ ವಾಗ್ವಾದ ಆರಂಭವಾಗಿದೆ. ವಾಗ್ವಾದ ವಿಕೋಪಕ್ಕೆ ತಿರುಗಿ ಗುಂಪುಗಳ ನಡುವೆ ಗಲಾಟೆ ನಡೆದಿದೆ.

ಈ ವೇಳೆ ಪೊಲೀಸರು ಮಧ್ಯ ಪ್ರವೇಶಿಸಿ, ತಿಳಿಗೊಳಿಸಲು ಯತ್ನಿಸಿದರು. ಆದರೆ, ಪರಿಸ್ಥಿತಿ ಕೈ ಮೀರಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಲಾಠಿ ಚಾರ್ಜ್​ ಮಾಡುತ್ತಿದ್ದಂತೆ ಜನರು ದಿಕ್ಕಾಪಾಲಾಗಿ ಓಡಿದ್ದಾರೆ. ಬೆಟಗೇರಿ ಸಿಪಿಐ ಧೀರಜ್ ಶಿಂಧೆ ನೇತೃತ್ವದಲ್ಲಿ ಭದ್ರತೆ ಕಲ್ಪಿಸಲಾಗಿತ್ತು. KSRP, DAR ತುಕಡಿಯನ್ನೂ ಭದ್ರತೆಗೆ ನಿಯೋಜಿಸಲಾಗಿತ್ತು. ಗದಗ ಶಹರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ : ಪರಶಿವನ ಮುಂದೆ ರೀಲ್ಸ್ ರಾಣಿಯ ಅವಾಂತರ.. ಗಂಗೆ ಪಾಲಾದ ಆಕೆ ಬದುಕಿದ್ದೇ ಪವಾಡ..!

Leave a Comment

DG Ad

RELATED LATEST NEWS

Top Headlines

4 ಅಂತಸ್ತಿನ ಕಟ್ಟಡ ಕುಸಿತ – ಕೂದಲೆಳೆ ಅಂತರದಲ್ಲಿ ಪಾರಾದ ತಾಯಿ, ಮಗು..!

ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ತಾಯಿ ಮಗು ಪ್ರಾಣಾಪಾಯದಿಂದ ಪಾರಾಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಈ ಆಘಾತಕಾರಿ ಘಟನೆಯ ಸಂಪೂರ್ಣ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದ್ದು, ವೀಡಿಯೊದಲ್ಲಿ

Live Cricket

Add Your Heading Text Here