ಸರ್ಕಾರಿ ಬಸ್‌ಗಳ ಟಿಕೆಟ್ ದರ ಏರಿಕೆ ಮಾಡಿ ಆದೇಶ ಹೊರಡಿಸಿದ ಬೆನ್ನಲ್ಲೇ ರಾಜ್ಯಾದ್ಯಂತ ಜನಸಾಮಾನ್ಯರು ಸೇರಿದಂತೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ. ಕೇಂದ್ರ ಸಚಿವ ಕುಮಾರಸ್ವಾಮಿ ಗ್ಯಾರಂಟಿಗಳಿಗೆ ಹಣ ಹೊಂದಿಸಲು ಬೆಲೆ ಏರಿಕೆ ಮಾಡಲಾಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದರು. ಅಷ್ಟೇ ಅಲ್ಲದೆ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ನಾಯಕರೇ ಅಸಮಾಧಾನ ಹೊರಹಾಕ್ತಿದ್ದಾರೆ.
ಸಿಎಂ ಸಿದ್ದರಾಮಯ್ಯ ಆಪ್ತ ರಾಘವೇಂದ್ರ ಹಿಟ್ನಾಳ್ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಾಧಾನ ಹೊರಹಾಕಿದ್ದಾರೆ. ಅಭಿವೃದ್ಧಿ ಕಾರ್ಯಗಳು ಕುಂಠಿತವಾಗಲು ಗ್ಯಾರಂಟಿ ಯೋಜನೆಗಳೇ ಕಾರಣ ಎಂದಿದ್ದಾರೆ.
ಈ ಬಗ್ಗೆ ಕೊಪ್ಪಳದಲ್ಲಿ ರಾಘವೇಂದ್ರ ಹಿಟ್ನಾಳ್ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಯಿಂದ ಅಭಿವೃದ್ದಿ ಕಾರ್ಯಗಳು ಕುಂಠಿತವಾಗಿವೆ ಎಂದು ಬಾಂಬ್ ಸಿಡಿಸಿದ್ದಾರೆ. ಗ್ಯಾರಂಟಿ ಯೋಜನೆಗೆ 56,000 ಕೋಟಿ ಅನುದಾನ ನೀಡಲಾಗಿದೆ. ಈಗ ಅಭಿವೃದ್ದಿ ನಡೆಯುತ್ತಿವೆ. ಆದರೂ ಕುಂಠಿತವಾಗಿದೆ. ಅಭಿವೃದ್ಧಿಕಾರ್ಯಗಳು ನಡೆದಿವೆ. ಆದರೆ ಸ್ವಲ್ಪ ತಡವಾಗಿ ನಡೆದಿದೆ ಎಂದು ಕಾಂಗ್ರೆಸ್ ಶಾಸಕ ರಾಘವೇಂದ್ರ ಹಿಟ್ನಾಳ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ : ಇಂದಿನಿಂದ 2 ದಿನ ಈ ಭಾಗಗಳಲ್ಲಿ ಭರ್ಜರಿ ಮಳೆ.. ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?