ಹೈದರಾಬಾದ್ : ತಿರುಪತಿಯ ವೈಕುಂಠ ದ್ವಾರದ ದರ್ಶನದ ಟೋಕನ್ ಪಡೆಯುವ ವೇಳೆ ಕಾಲ್ತುಳಿತ ಸಂಭವಿಸಿ 7 ಭಕ್ತರು ಕೊನೆಯುಸಿರುಳೆದಿದ್ದಾರೆ. ಈ ಘಟನೆಯಲ್ಲಿ 40ಕ್ಕೂ ಹೆಚ್ಚು ಭಕ್ತರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಹೆಚ್ಚಿನ ಚಿಕಿತ್ಸೆ ಅವಶ್ಯಕವಿದ್ದಲ್ಲಿ ಏರ್ಲಿಫ್ಟ್ ಮಾಡುವಂತೆ ಆಂಧ್ರದ ಸಿಎಂ ಚಂದ್ರಬಾಬು ನಾಯ್ಡು ಸೂಚಿಸಿದ್ದಾರೆ.
ದುರ್ಘಟನೆಯಲ್ಲಿ ಮೂವರು ಮಹಿಳೆಯರು, ನಾಲ್ವರು ಪುರಷರು ಮೃತಪಟ್ಟಿದ್ದು, ಇನ್ನುಳಿದಂತೆ 40ಕ್ಕೂ ಹೆಚ್ಚು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಗಾಯಾಳುಗಳನ್ನು ತಿರುಪತಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನುಕಾಲ್ತುಳಿತ ಸ್ಥಳಕ್ಕೆ ಇಂದು ಸಿಎಂ ಚಂದ್ರಬಾಬು ನಾಯ್ಡು ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ಈ ಘಟನೆಯಿಂದ ಸಿಎಂ ಚಂದ್ರಬಾಬು ನಾಯ್ಡು ಅವರು ಆತಂಕ ವ್ಯಕ್ತಪಡಿಸಿದ್ದು, ಉನ್ನತ ಅಧಿಕಾರಿಗಳು ಸ್ಥಳಕ್ಕೆ ತೆರಳಿ ಎಲ್ಲವನ್ನು ನಿಯಂತ್ರಣದಲ್ಲಿ ತೆಗೆದುಕೊಳ್ಳಬೇಕು. ಗಾಯಗೊಂಡ ಎಲ್ಲರಿಗೂ ಚಿಕಿತ್ಸೆ ಕೊಡುವಂತೆ ವೈದ್ಯರಿಗೆ ಹೇಳಿದ್ದಾರೆ. ಇನ್ನುಳಿದ ಪ್ರದೇಶಗಳಲ್ಲಿ ಇಂತಹ ಘಟನೆ ನಡೆಯದಂತೆ ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು. ಇನ್ನು ದೇವಾಲಯದ ಆಡಳಿತ ಮಂಡಳಿ ಅಲ್ಲಿನ ಪರಿಸ್ಥಿತಿ ಕುರಿತು ಎಲ್ಲ ಮಾಹಿತಿ ತಮಗೆ ತಿಳಿಸುತ್ತಿರಬೇಕು ಎಂದು ಸಿಎಂ ಅವರು ಸೂಚಿಸಿದ್ದಾರೆ.
ತಿರುಪತಿ ವೈಕುಂಠ ದ್ವಾರ ದರ್ಶನಕ್ಕೆ ಭಾರೀ ಡಿಮ್ಯಾಂಡ್ ಇದ್ದು, ಈ ಬಾರಿ 1 ಕೋಟಿ 20 ಲಕ್ಷ ಟಿಕೆಟ್ ಹಂಚಿಕೆಗೆ TTD ಮುಂದಾಗಿತ್ತು. ಇಂದು ಬೆಳಗ್ಗಿನಿಂದ 95 ಕೌಂಟರ್ ಮೂಲಕ ಟಿಕೆಟ್ ಹಂಚಿಕೆಗೆ ತಯಾರಿ ನಡೆಸಲಾಗಿತ್ತು. ಆದರೆ ನಿನ್ನೆ ರಾತ್ರಿಯೇ ಟಿಕೆಟ್ ಪಡೆಯಲು ಭಾರೀ ನೂಕುನುಗ್ಗಲು ಉಂಟಾಗಿದ್ದರಿಂದ ಈ ದುರಂತ ಸಂಭವಿಸಿದೆ. ಇನ್ನು 3 ದಿನಗಳಲ್ಲಿ 3 ಕೋಟಿಗೂ ಹೆಚ್ಚು ಜನ ತಿರುಪತಿಗೆ ಬರೋ ನಿರೀಕ್ಷೆಯಿದ್ದು, ಸದ್ಯ ಆಂಧ್ರ ಸರ್ಕಾರ ತಿರುಪತಿಯಲ್ಲಿ ಹೆಚ್ಚುವರಿ ವ್ಯವಸ್ಥೆಯನ್ನು ಮಾಡಿದೆ.
ಇದನ್ನೂ ಓದಿ : ಕಾಂಗ್ರೆಸ್‌ನಲ್ಲಿ ಕೋಲಾಹಲ ಎಬ್ಬಿಸಿದ ಡಿನ್ನರ್ ಪಾಲಿಟಿಕ್ಸ್ – ದಿಢೀರ್ CLP ಮೀಟಿಂಗ್ ಕರೆದಿದ್ದೇಕೆ ಸಿಎಂ?