ಬೆಂಗಳೂರು : ಕಳೆದ ಮೇ15 ರಂದು ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಪ್ರಬುದ್ಧ ಕೊಲೆ ಪ್ರಕರಣ ಗಂಭೀರ ಸ್ವರೂಪ ಪಡೆದಿದೆ. ಈ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆಗೆ ವಹಿಸಿ ಮಹತ್ವದ ಸೂಚನೆ ನೀಡಿದ್ದಾರೆ.
ಪ್ರಬುದ್ಧ ಅವರ ಕೊಲೆಗೆ ದಿಗ್ಬ್ರಾಂತರಾಗಿದ್ದ ತಾಯಿ ಸೌಮ್ಯ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಪ್ರಕರಣದಲ್ಲಿ ಪೊಲೀಸರ ಅಸಹಕಾರ, ಉದ್ದೇಶಪೂರ್ವಕ ನಿರ್ಲಕ್ಷತೆ, ಸಾಕ್ಷಿ ನಾಶ ಯತ್ನ ನಡೆದಿದೆ. ಸಂತ್ರಸ್ಥ ತಾಯಿಯಾದ ನನಗೂ ಬೆದರಿಕೆ ಹಾಕಲಾಗುತ್ತಿದೆ. ಹೀಗಾಗಿ ಸಿಐಡಿ ತನಿಖೆಗೆ ವಹಿಸಲು ಒತ್ತಾಯಿಸಿದ್ದರು.
ಯುವತಿ ಪ್ರಬುದ್ಧ ತಾಯಿಯ ಮನವಿ ಹಿನ್ನೆಲೆಯಲ್ಲಿ ಕೊಲೆ ಪ್ರಕರಣವನ್ನು ಸಿಎಂ ಸಿದ್ದರಾಮಯ್ಯ ಸಿಐಡಿ ತನಿಖೆಗೆ ವಹಿಸಲು ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರಿಗೆ ಸೂಚನೆ ನೀಡಿದ್ದಾರೆ.
ಪ್ರಕರಣದ ಹಿನ್ನೆಲೆ : ಮೇ 15 ರಂದು 20 ವರ್ಷದ ಪ್ರಬುದ್ಧಾ ಮೃತದೇಹ ಮನೆಯ ಬಾತ್ರೂಂನಲ್ಲಿ ಪತ್ತೆ ಆಗಿತ್ತು. ಕತ್ತು ಹಾಗೂ ಕೈ ಕೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಮೇಲ್ನೋಟಕ್ಕೆ ಇದು ಆತ್ಮಹತ್ಯೆ ಅಂತಾ ಪೊಲೀಸರು ಪರಿಗಣಿಸಿದ್ದರು. ಮಗಳ ಸಾವಿನ ಬಗ್ಗೆ ತಾಯಿ ಅನುಮಾನ ವ್ಯಕ್ತಪಡಿಸಿದ್ದರು. ನನ್ನ ಮಗಳ ಕತ್ತು ಮತ್ತು ಕೈಯನ್ನ ಚಾಕುವಿನಿಂದ ಕುಯ್ದು ಕ್ರೂರವಾಗಿ ಕೊಲೆ ಮಾಡಿದ್ದಾರೆ. ಮುಖಕ್ಕೆ ಮತ್ತು ತಲೆಯ ಹಿಂಭಾಗಕ್ಕೆ ಬಲವಾಗಿ ಹೊಡೆಯಲಾಗಿದೆ. ಹೀಗಾಗಿ ನನ್ನ ಮಗಳದ್ದು ಆತ್ಮಹತ್ಯೆ ಅಲ್ಲ ಕೊಲೆ ಅಂತ ದೂರು ದಾಖಲಿಸಿದ್ದರು. ಈ ಕುರಿತು ತನಿಖೆ ಆರಂಭಿಸಿದ ಪೊಲೀಸರಿಗೆ ಸ್ನೇಹಿತನ ಕನ್ನಡಕ ರಿಪೇರಿ ವಿಚಾರದಲ್ಲಿ ಅಪ್ರಾಪ್ತನೇ ಪ್ರಬುದ್ಧಾ ಕೊಲೆ ಮಾಡಿರುವುದು ಬೆಳಕಿಗೆ ಬಂದಿತ್ತು.
ಇದನ್ನೂ ಓದಿ : ಪೊಲೀಸರು ಲಾಠಿ ರುಚಿ ತೋರಿಸ್ತಿದ್ದಂತೆ ಉಮಾಪತಿಗೌಡ, ಪ್ರಥಮ್ಗೆ ಕೈ ಮುಗಿದು ಕ್ಷಮೆ ಕೇಳಿದ ದರ್ಶನ್ ರೌಡಿ ಫ್ಯಾನ್..!