Download Our App

Follow us

Home » ರಾಜಕೀಯ » ದಲಿತ ದಮನಿತರ ಪರವಾದ ದಿಟ್ಟ ದನಿಯಾಗಿದ್ದರು – ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ..!

ದಲಿತ ದಮನಿತರ ಪರವಾದ ದಿಟ್ಟ ದನಿಯಾಗಿದ್ದರು – ಶ್ರೀನಿವಾಸ್ ಪ್ರಸಾದ್ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಕಂಬನಿ..!

ಬೆಂಗಳೂರು : ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು-ಚಾಮರಾಜನಗರ ಭಾಗದ ದಲಿತ ನಾಯಕ ವಿ.ಶ್ರೀನಿವಾಸ ಪ್ರಸಾದ್ ಅವರು ನಿಧರಾಗಿದ್ದು, ಅವರ ಅಗಲಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ರಾಜಕೀಯ ಗಣ್ಯರು, ಬಿಜೆಪಿ ನಾಯಕರು ಕಂಬನಿ ಮಿಡಿದಿದ್ದಾರೆ.

ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ. ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ.

ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.

ಇದನ್ನೂ ಓದಿ : ಬಿಜೆಪಿ ಹಿರಿಯ ನಾಯಕ, ಸಂಸದ ವಿ.ಶ್ರೀನಿವಾಸ್ ಪ್ರಸಾದ್ ನಿಧನ..!

Leave a Comment

DG Ad

RELATED LATEST NEWS

Top Headlines

ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯ ಹತ್ಯೆ ಕೇಸ್​ – ಭೋಪಾಲ್​ನಲ್ಲಿ ಆರೋಪಿ ಅಭಿಷೇಕ್​ ಅರೆಸ್ಟ್​..!

ಬೆಂಗಳೂರು : ಕೋರಮಂಗಲದ ಪಿಜಿಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿ ಅಭಿಷೇಕ್​ನನ್ನು ಇದೀಗ ಬೆಂಗಳೂರು ಪೊಲೀಸರು ಭೂಪಾಲ್​ನಲ್ಲಿ ಬಂಧಿಸಿದ್ದಾರೆ. ಜು.23 ರಂದು ಕೋರಮಂಗಲದ

Live Cricket

Add Your Heading Text Here