Download Our App

Follow us

Home » ಸಿನಿಮಾ » ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಗಣ್ಯರಿಂದ ಸಂತಾಪ..!

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ನಿಧನಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಸೇರಿ ಗಣ್ಯರಿಂದ ಸಂತಾಪ..!

ಬೆಂಗಳೂರು : ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಅಪರ್ಣಾ ಅವರು ನಿನ್ನೆ ಬೆಂಗಳೂರಿನ ಬನಶಂಕರಿಯಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಪುಟ್ಟಣ್ಣ ಕಣಗಾಲ್ ಅವರ ʻಮಸಣದ ಹೂವುʼ ಚಿತ್ರದ ಮೂಲಕ ಸಿನಿರಂಗಕ್ಕೆ ಕಾಲಿಟ್ಟಿದ್ದ ಅಪರ್ಣಾ ಅವರು ಹಿಂದಿರುಗಿ ನೋಡಿರಲಿಲ್ಲ. ನಟನೆ, ನಿರೂಪಣೆ, ಕಿರುತೆರೆಯಲ್ಲಿ ಅವರು ಮಿಂಚಿದ್ದರು. ಅವರಿಂದು ತಮ್ಮ ಮಾತುಗಳಿಗೆ ಪೂರ್ಣ ವಿರಾಮವನ್ನಿಟ್ಟಿದ್ದಾರೆ. ಅಪರ್ಣಾ ಅವರ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸೇರಿದಂತೆ ಹಲವು ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ : ನಟಿ, ಖ್ಯಾತ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ನೋವಾಯಿತು. ಸರ್ಕಾರಿ ಸಮಾರಂಭಗಳು ಸೇರಿದಂತೆ ಕನ್ನಡದ ಪ್ರಮುಖ ವಾಹಿನಿಗಳ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆಯಲ್ಲಿ ಅತ್ಯಂತ ಸೊಗಸಾಗಿ ನಿರೂಪಣೆ ಮಾಡುತ್ತಾ ನಾಡಿನ ಮನೆಮಾತಾಗಿದ್ದ ಬಹುಮುಖ ಪ್ರತಿಭೆಯೊಂದು ಬಹುಬೇಗ ನಮ್ಮನ್ನು ಅಗಲಿರುವುದು ದುಃಖದ ಸಂಗತಿ. ಮೃತ ಅಪರ್ಣಾಳ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಕುಟುಂಬಸ್ಥರಿಗೆ ದುಃಖ ಭರಿಸುವ ಶಕ್ತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಬಸವರಾಜ ಬೊಮ್ಮಾಯಿ ಸಂತಾಪ : ಕನ್ನಡದ ಖ್ಯಾತ‌ ನಿರೂಪಕಿ ಅಪರ್ಣಾ ಅವರ ನಿಧನದ ಸುದ್ದಿ ಕೇಳಿ ಮನಸಿಗೆ ಅತ್ಯಂತ ನೋವಾಯಿತು. ಸರಳ ಕನ್ನಡದಲ್ಲಿ ಸುಂದರವಾಗಿ ಕಾರ್ಯಕ್ರಮಗಳನ್ನು ನಿರೂಪಣೆ ಮಾಡುವ ಮೂಲಕ ಎಲ್ಲರ ಮನೆ ಮಾತಾಗಿದ್ದರು.‌ ಅವರ ಅಗಲಿಕೆಯಿಂದ ಕನ್ನಡ ನಾಡು ಒಬ್ಬ ಸಜ್ಜನಿಕೆಯ ನಿರೂಪಕಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ, ಅವರ ಅಗಲಿಕೆಯ ದುಖವನ್ನು ಭರಿಸುವ ಶಕ್ತಿಯನ್ನು ಅವರ ಅಭಿಮಾನಿಗಳು ಹಾಗೂ ಕುಟುಂಬ ವರ್ಗಕ್ಕೆ ದಯಪಾಲಿಸಲಿ ಎಂದು ಪ್ರಾರ್ಥಿಸುತ್ತೇನೆ.

ಡಿಕೆ ಶಿವಕುಮಾರ್ ಸಂತಾಪ : ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನ ಗೆದ್ದ, ಖ್ಯಾತ ನಿರೂಪಕಿ, ನಟಿ ಶ್ರೀಮತಿ ಅಪರ್ಣ ಅವರ ಸಾವಿನಿಂದ ಮನಸ್ಸಿಗೆ ಅಪಾರ ನೋವುಂಟಾಗಿದೆ. ಅವರ ನಿಧನವು ಕಲಾ ಲೋಕಕ್ಕೆ ತುಂಬಲಾರದ ನಷ್ಟ. ನಿರೂಪಕಿಯಾಗಿ, ನಟಿಯಾಗಿ ದಶಕಗಳಿಂದ ದುಡಿದ ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬ ಹಾಗೂ ಸ್ನೇಹಿತರಿಗೆ ನನ್ನ ಸಾಂತ್ವನಗಳು.

ಹೆಚ್​.ಡಿ ಕುಮಾರಸ್ವಾಮಿ ಸಂತಾಪ : ಕನ್ನಡದ ಪ್ರಖ್ಯಾತ ನಟಿ, ನಿರೂಪಕಿ ಆಗಿದ್ದ ಶ್ರೀಮತಿ ಅಪರ್ಣಾ ಅವರ ನಿಧನದ ಸುದ್ದಿ ತಿಳಿದು ಬಹಳ ದುಃಖವಾಯಿತು. ಅನೇಕ ಕಾರ್ಯಕ್ರಮಗಳಲ್ಲಿ ಅವರು ನೆರೆವೇರಿಸಿಕೊಡುತ್ತಿದ್ದ ಅಚ್ಚಕನ್ನಡದ ನಿರೂಪಣೆ ಮತ್ತು ಅಭಿನಯ ಯಾವತ್ತಿಗೂ ಚಿರಸ್ಮರಣೀಯ. ಅವರ ನಿರೂಪಣಾ ಶೈಲಿ ವಿಶಿಷ್ಟವಾಗಿತ್ತು. ನೆಲದ ಸೊಗಡಿನ ಪ್ರತಿಭಾವಂತರೊಬ್ಬರು ನಮ್ಮನ್ನು ಅಗಲಿದ್ದಾರೆ. ಅಪರ್ಣಾ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಈ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬಕ್ಕೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ.

ಸಂತೋಷ್‌ ಲಾಡ್‌ ಸಂತಾಪ : ತಮ್ಮ ಅದ್ಭುತ ಮಾತುಗಾರಿಕೆಯಿಂದ ಹೆಸರು ಮಾಡಿದ್ದ ಖ್ಯಾತ ನಿರೂಪಕಿ, ನಟಿ ಅಪರ್ಣಾ ಅವರ ಅಕಾಲಿಕ ನಿಧನ‌‌ ನಿಜಕ್ಕೂ ಬೇಸರ ತರಿಸಿದೆ. ಅಪರ್ಣಾ ಅವರಾಡುತ್ತಿದ್ದ ಶುದ್ಧ ಕನ್ನಡ ಭಾಷೆಯನ್ನು ಕೇಳುವುದೇ ಅನನ್ಯ ಅನುಭವ. ಅವರ ನಿಧನ ಯಾವತ್ತಿಗೂ ತುಂಬಲಾರದ ನಷ್ಟ. ಅಪರ್ಣಾ ಅವರ ಆತ್ಮಕ್ಕೆ ಪರಮಾತ್ಮನು ಶಾಂತಿ ಕರುಣಿಸಲಿ, ಅವರ ಕುಟುಂಬಕ್ಕೆ ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸೋಣ.

ಸಚಿವ ಶಿವರಾಜ್ ತಂಗಡಗಿ ಸಂತಾಪ ಖ್ಯಾತ ನಿರೂಪಕಿ ಹಾಗೂ ನಟಿ ಅಪರ್ಣಾ ಅವರ ನಿಧನಕ್ಕೆ ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.‌ 1984ರಲ್ಲಿ ಖ್ಯಾತ ನಿರ್ದೇಶಕ ಪುಟ್ಟಣ ಕಣಗಾಲ್ ಅವರ ಮಸಣದ ಹೂ ಚಿತ್ರದ ಮೂಲಕ ಬೆಳ್ಳಿ ಪರದೆಗೆ ಪ್ರವೇಶ ಮಾಡಿದ್ದ ಅಪರ್ಣಾ ಅವರು ತಮ್ಮ ಅಚ್ಚ ಕನ್ನಡದ ಶೈಲಿಯ ನಿರೂಪಣೆ ಮೂಲಕ ರಾಜ್ಯದ ಜನತೆಯ ಮನ ಗೆದ್ದಿದ್ದರು. ಸರ್ಕಾರಿ ಕಾರ್ಯಕ್ರಮ ಅಥವಾ ಯಾವುದೇ ಪ್ರಮುಖ ಕಾರ್ಯಕ್ರಮವಾದರೆ ಅಲ್ಲಿ ಅಪರ್ಣಾ ಅವರೇ ನಿರೂಪಕಿಯಾಗಿರುತ್ತಿದ್ದರು. ರೇಡಿಯೋ‌ ಜಾಕಿಯಾಗಿ, ಧಾರವಾಹಿ, ಟಿ.ವಿ.ಶೋ ಗಳಲ್ಲಿ ಅಭಿನಯಿಸಿ ಖ್ಯಾತಿಗಳಿಸಿದ್ದ ಅಪರ್ಣಾ ಅವರು ಕಿರಿಯ ವಯಸ್ಸಿನಲ್ಲೇ ನಮ್ಮನ್ನು ಅಗಲಿರುವುದು ದುಃಖ ತರಿಸಿದೆ. ಅಪರ್ಣ ಅವರ ಕುಟುಂಬ ವರ್ಗ ಹಾಗೂ ಅಭಿಮಾನಿಗಳಿಗೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಸಚಿವರು ತಮ್ಮ ಸಂತಾಪದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ : ರೀಲ್ಸ್​ನಿಂದಲೇ ಫಜೀತಿಗೆ ಸಿಲುಕಿದ ನಾನು ನಂದಿನಿ ಖ್ಯಾತಿಯ ವಿಕಿಪೀಡಿಯ ವಿಕಾಸ್..!

Leave a Comment

DG Ad

RELATED LATEST NEWS

Top Headlines

ಬಾಲಿವುಡ್ ಸ್ಟಾರ್ ಸೈಫ್​ ಅಲಿ ಖಾನ್​ಗೆ ಚಾಕು ಇರಿತ – ಮುಂಬೈನ ಲೀಲಾವತಿ ಆಸ್ಪತ್ರೆಗೆ ಅಡ್ಮಿಟ್!

ಮುಂಬೈ: ಬಾಲಿವುಡ್ ಸ್ಟಾರ್​​ ನಟ ಸೈಫ್ ಅಲಿಖಾನ್​​ಗೆ ದುಷ್ಕರ್ಮಿಗಳು ಚಾಕು ಇರಿದಿದ್ದು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಧ್ಯರಾತ್ರಿ ಸುಮಾರು 2.30 ಗಂಟೆಗೆ ಮುಂಬೈನ ಬಾಂದ್ರಾದಲ್ಲಿರುವ ಸೈಫ್ ಅಲಿಖಾನ್ ಮನೆಯಲ್ಲಿ ಘಟನೆ

Live Cricket

Add Your Heading Text Here