ಮಂಡ್ಯ : ಕಾವೇರಿ ಜಲನಯನ ಪ್ರದೇಶದಲ್ಲಿ ಕಳೆದ ಹಲವು ದಿನಗಳಿಂದ ಧಾರಕಾರ ಮಳೆಯಾಗುತ್ತಿದೆ. ಮಳೆರಾಯನ ಆರ್ಭಟಕ್ಕೆ ಮಂಡ್ಯ ಜಿಲ್ಲೆ ಶ್ರೀರಂಗಟ್ಟಣ ತಾಲೂಕಿನ ಕೆಆರ್‌ಎಸ್ ಜಲಾಶಯ ಸಂಪೂರ್ಣ ಭರ್ತಿಯಾಗಿಜೀವನದಿ ಕಾವೇರಿ ಮೈದುಂಬಿ ಹರಿಯುತ್ತಿದ್ದಾಳೆ.
ಎರಡು ವರ್ಷಗಳ ಬಳಿಕ ಭರ್ತಿಯಾಗಿರುವ ಕನ್ನಡಿಗರ ಜೀವನಾಡಿ ಕನ್ನಂಬಾಡಿ ಅಣೆಕಟ್ಟಿಗೆ ಸಿಎಂ ಸಿದ್ದರಾಮಯ್ಯ ಇಂದು ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ್ದಾರೆ. ಈ ಮೂಲಕ ಅವರು ಮೂರನೇ ಬಾರಿಗೆ ಕೆಆರ್‌ಎಸ್ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ. ಈ ವೇಳೆ ಡಿಸಿಎಂ ಡಿಕೆಶಿ, ಸಚಿವರಾದ ಚೆಲುವರಾಯಸ್ವಾಮಿ, HC ಮಹದೇವಪ್ಪ ಸೇರಿ ಹಲವರು ಸಿಎಂ ಸಿದ್ದರಾಮಯ್ಯಗೆ ಸಾಥ್ ಕೊಟ್ಟಿದ್ದಾರೆ.
ಮೊದಲಿಗೆ ಸಿಎಂ ಸಿದ್ದರಾಮಯ್ಯನವರು ಬಾಗಿನಗಳಿಗೆ ಹೂ ಹಾಕಿ ಕೈ ಮುಗಿದು ಪೂಜೆ ಸಲ್ಲಿಸಿ ಬಳಿಕ ಕಾವೇರಿ ತಾಯಿಗೆ ಬಾಗಿನ ಅರ್ಪಿಸಿದರು. ಕಾವೇರಿ ಮಾತೆ ಪ್ರತಿಮೆಗೆ ಕೃಷಿ ಸಚಿವರು, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿವಕುಮಾರ್ ಪುಷ್ಪಾರ್ಚನೆ ಮಾಡಿದ್ದಾರೆ.
ಮೊದಲ ಬಾರಿಗೆ ಸಿಎಂ ಆದಾಗ 2013 ಹಾಗೂ 2014 ರಲ್ಲಿ ಸಿದ್ದರಾಮಯ್ಯ ಬಾಗಿನ ಅರ್ಪಿಸಿದ್ದರು. ಆನಂತರ ಬರಗಾಲ ಹಿನ್ನೆಲೆ ಜಲಾಶಯ ಭರ್ತಿಯಾಗಿರಲಿಲ್ಲ. ಎರಡನೇ ಅವಧಿಗೂ ಸಿಎಂ ಆದಗಲೂ 2023ರಲ್ಲಿ ಕನ್ನಂಬಾಡಿ ಅಣೆಕಟ್ಟು ಭರ್ತಿಯಾಗಿರಲಿಲ್ಲ. ಈ ವರ್ಷ ಸಂಪೂರ್ಣ ಭರ್ತಿಯಾಗಿದ್ದು, ಬಾಗಿನ ಅರ್ಪಿಸಿದ್ದಾರೆ.
ಇದನ್ನೂ ಓದಿ : ಬೆಂಗಳೂರು TO ಮೈಸೂರು ಪಾದಯಾತ್ರೆಗೆ ಸ್ವಪಕ್ಷದಲ್ಲೇ ಅಪಸ್ವರ – ಪರ್ಯಾಯ ಪಾದಯಾತ್ರೆಗೆ ಸಜ್ಜಾದ ಯತ್ನಾಳ್, ಜಾರಕಿಹೊಳಿ..!