Download Our App

Follow us

Home » ರಾಜಕೀಯ » ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು..!

ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಿಷ್ಟು..!

ಬೆಂಗಳೂರು : ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿರೋ ಸ್ಫೋಟ ಪ್ರಕರಣ ಹಲವು ತಿರುವುಗಳನ್ನ ತೆಗೆದುಕೊಳ್ಳುತ್ತಿದೆ. ರಾಮೇಶ್ವರಂ ಕೆಫೆಯಲ್ಲಿ ನಿಗೂಢ ವಸ್ತುವಿನಿಂದಲೇ ಸ್ಫೋಟವಾಗಿರೋದು ಖಚಿತವಾಗಿದೆ. ಮಾಹಿತಿ ಪ್ರಕಾರ ರಾಮೇಶ್ವರಂ ಕೆಫೆ ಸ್ಫೋಟದಲ್ಲಿ IED ಬಳಸಿರುವ ಶಂಕೆ ಕೂಡ ವ್ಯಕ್ತವಾಗಿದೆ. ಕೃತ್ಯಕ್ಕೆ ಸ್ಫೋಟಕ ಸುಧಾರಿತ ಸಾಧನ ಬಳಸಲಾಗಿದೆ ಎಂದು ಹೇಳಲಾಗುತ್ತಿದೆ.

ಕೇಂದ್ರ ಗೃಹ ಇಲಾಖೆ ರಾಜ್ಯ ಸರ್ಕಾರದೊಂದಿಗೆ ಸಂಪರ್ಕದಲ್ಲಿದ್ದು, ಘಟನೆ ಬಗ್ಗೆ ಖುದ್ದು ಅಮಿತ್​ ಶಾ ಅವರು ಕೂಡ ಮಾಹಿತಿ ಪಡೆದಿದ್ದಾರೆ. ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿ, ರಾಮೇಶ್ವರಂ ಕೆಫೆಯಲ್ಲಿ IED ಬ್ಲಾಸ್ಟ್ ಆಗಿದೆ. ಘಟನೆ ಬಗ್ಗೆ ಅಧಿಕಾರಿಗಳು ತನಿಖೆ ಮಾಡುತ್ತಿದ್ದಾರೆ. ಈಗಾಗ್ಲೇ ಸಿಸಿಟಿವಿಗಳನ್ನು ಪರಿಶೀಲನೆ ನಡೆಸುತ್ತಿದ್ದಾರೆ. ಯಾರು, ಏನೂ ಅಂತ ಯಾರಿಗೂ ಗೊತ್ತಿಲ್ಲ. ಈ ವಿಚಾರದಲ್ಲಿ ರಾಜಕೀಯ ಮಾಡೋದು ಬೇಡ. ಬ್ಲಾಸ್ಟ್ ಮಾಡಿರುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದ್ದಾರೆ.

ಈ ಘಟನೆಯ ಬಗ್ಗೆ ತುಮಕೂರಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯಿಸಿ, ರಾಮೇಶ್ವರಂ ಕೆಫೆಯಲ್ಲಿನ ಸ್ಫೋಟದ ಬಗ್ಗೆ ತನಿಖೆ ನಡೆಯುತ್ತಿದೆ. ಈ ಬಗ್ಗೆ ಎಲ್ಲಾ ಆಯಾಮಗಳಲ್ಲೂ ತನಿಖೆ ಮಾಡಲಾಗುತ್ತಿದೆ. ಕೆಫೆ ಸುತ್ತಮುತ್ತ ಇರೋ ಸಿಸಿಟಿವಿಗಳನ್ನ ಪರಿಶೀಲನೆ ಮಾಡಲಾಗುತ್ತೆ. ಕೆಫೆ ಸುತ್ತಮುತ್ತ ಓಡಾಡಿದವರ ಬಗ್ಗೆಯೂ ಪರಿಶೀಲನೆ ಮಾಡಲಾಗುತ್ತದೆ. ಸದ್ಯಕ್ಕೆ ಯಾರೂ ಆತಂಕ ಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ.

ಇದನ್ನೂ ಓದಿ : ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸುವಂತೆ ಕೋರ್ಟ್ ಆದೇಶ..!

Leave a Comment

DG Ad

RELATED LATEST NEWS

Top Headlines

ಹರ್ಮನ್ ಪಡೆ ಅಬ್ಬರಕ್ಕೆ ಪಾಕ್ ಧೂಳಿಪಟ – ಏಷ್ಯಾಕಪ್‌ನಲ್ಲಿ ಭಾರತಕ್ಕೆ ಗೆಲುವಿನ ಶುಭಾರಂಭ..!

ದಂಬುಲ್ಲಾ : ಶ್ರೀಲಂಕಾದ ರಂಗಿರಿ ದಂಬುಲ್ಲಾ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಿನ್ನೆ ನಡೆದ ಭಾರತ-ಪಾಕಿಸ್ತಾನ ಮಹಿಳಾ ತಂಡಗಳ ಏಷ್ಯಾಕಪ್ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ ನಾಯಕತ್ವದ ಟೀಂ ಇಂಡಿಯಾ, ಪಾಕ್

Live Cricket

Add Your Heading Text Here