ಬೆಂಗಳೂರು : ಹೃದಯ ಸಂಬಂಧಿ ಸಮಸ್ಯೆಗೆ ಶಸ್ತ್ರಚಿಕಿತ್ಸೆಗಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಚೆನ್ನೈಯಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮಂಗಳವಾರ ಮಧ್ಯಾಹ್ನ ಚೆನ್ನೈಗೆ ತೆರಳಿದ ಕುಮಾರಸ್ವಾಮಿ ಅವರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೊಳಗಾಗಿದ್ದು, ವೈದ್ಯರು ಆರೋಗ್ಯ ತಪಾಸಣೆ ನಡೆಸಿ ಕೆಲವು ಪರೀಕ್ಷೆಗಳನ್ನು ನಡೆಸಿದ್ದಾರೆ. ಇಂದು ಹೆಚ್.ಡಿ.ಕುಮಾರಸ್ವಾಮಿಯವರಿಗೆ ಶಸ್ತ್ರಚಿಕಿತ್ಸೆ ನಡೆಸಲಾಗುತ್ತಿದ್ದು, ಬಳಿಕ ಮೂರ್ನಾಲ್ಕು ದಿನಗಳವರೆಗೆ ಆಸ್ಪತ್ರೆಯಲ್ಲಿಯೇ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. 25ರಂದು ಬೆಂಗಳೂರಿಗೆ ಹಿಂತಿರುಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಆಸ್ಪತ್ರೆಯಲ್ಲಿ .ಕುಮಾರಸ್ವಾಮಿಯವರೊಂದಿಗೆ ಕೆ.ಆರ್.ಪೇಟೆ MLA ಮಂಜುನಾಥ್ ಸೇರಿ 10ಕ್ಕೂ ಹೆಚ್ಚು ಶಾಸಕರು ಹಾಜರಾಗಿದ್ದಾರೆ. ಹೆಚ್ಡಿಕೆ ಪತ್ನಿ ಅನಿತಾ ಕುಮಾರಸ್ವಾಮಿ, ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ
ಜಯದೇವ ಆಸ್ಪತ್ರೆ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಆಸ್ಪತ್ರೆಯಲ್ಲಿದ್ದಾರೆ. ಅಮೆರಿಕದ ನುರಿತ ವೈದ್ಯರ ತಂಡದಿಂದ ಹೆಚ್ಡಿಕೆಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಸಲಾಗುತ್ತಿದೆ.
ಕುಮಾರಸ್ವಾಮಿ ಮೂರನೇ ಬಾರಿ ಹೃದಯ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳುತ್ತಿದ್ದಾರೆ. ಈ ಮೊದಲು ಎರಡು ಬಾರಿ ಮಾಜಿ ಸಿಎಂ ಕುಮಾರಸ್ವಾಮಿಗೆ ಆಪರೇಷನ್ ಆಗಿತ್ತು. ಇದೀಗ ಹೆಚ್ಡಿಕೆ ಬೇಗ ಚೇತರಿಕೆಗಾಗಿ ಅಭಿಮಾನಿಗಳು ಚಿಕ್ಕಬಳ್ಳಾಪುರದ ಬಲಮುರಿ ಗಣಪತಿ ದೇವಾಲಯದ ಪೂಜೆ, ಪುನಸ್ಕಾರ ನೆರವೇರಿಸಿದ್ದು, ಜೆಡಿಎಸ್-ಬಿಜೆಪಿ ಕಾರ್ಯಕರ್ತರು ದೇಗುಲಗಳಲ್ಲಿ ವಿಷೇಶ ಪೂಜೆ ಸಲ್ಲಿಸಿದ್ದಾರೆ.
ಶಸ್ತ್ರಚಿಕಿತ್ಸೆ ಏಕೆ? ಶಸ್ತ್ರಚಿಕಿತ್ಸೆ ಕುರಿತು ಮಂಗಳವಾರ ಸುದ್ದಿಗಾರರ ಜತೆ ಮಾತನಾಡಿದ ಕುಮಾರಸ್ವಾಮಿ, ಹೃದಯ ಸಂಬಂಧಿ ಸಮಸ್ಯೆ ನನಗೆ ಹುಟ್ಟಿದ್ದಾಗಿನಿಂದಲೂ ಇದೆ. ಈ ಹಿನ್ನೆಲೆಯಲ್ಲಿ ಎರಡೂ ಬಾರಿ ಟಿಶ್ಯೂ ವಾಲ್ವ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗಿದೆ. ಎರಡು ರೀತಿಯಲ್ಲಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ. ಇಂದು ಟಿಶ್ಯೂ ವಾಲ್ವ್, ಮತ್ತೊಂದು ಮೆಟಾಲಿಕ್ ವಾಲ್ವ್ ಹಾಕಿ ಶಸ್ತ್ರಚಿಕಿತ್ಸೆ ಮಾಡಲಾಗುತ್ತದೆ ಎಂದು ಹೇಳೀದ್ದರು.
ಇದನ್ನೂ ಓದಿ : ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು..!