Download Our App

Follow us

Home » ರಾಜಕೀಯ » ಕಾಂಗ್ರೆಸ್​ ಸರ್ಕಾರದ ಮೊದಲ ವಿಕೆಟ್ ಪತನ – ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ..!?

ಕಾಂಗ್ರೆಸ್​ ಸರ್ಕಾರದ ಮೊದಲ ವಿಕೆಟ್ ಪತನ – ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸಿಎಂ ಸೂಚನೆ..!?

ಬೆಂಗಳೂರು : ವಾಲ್ಮೀಕಿ ಅಭಿವೃದ್ಧಿ ನಿಗಮದ ಅದೀಕ್ಷಕ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ಮೊದಲ ವಿಕೆಟ್​ ಪತನವಾಗಿದೆ. ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಬರೋಬ್ಬರಿ 187 ಕೋಟಿ ಹಗರಣ ನಡೆದಿದೆ ಅಂತ ಹೇಳಲಾಗಿತ್ತು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಆತ್ಮಹತ್ಯೆ ಮಾಡಿಕೊಂಡಿದ್ರು. ಇದು ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿತ್ತು. ಇದೇ ವಿಚಾರವಾಗಿ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ನಾಯಕರು ಪಟ್ಟು ಹಿಡಿದಿದ್ರು. ಸರ್ಕಾರದ ವಿರುದ್ಧ ಆಕ್ರೋಶ ವಕ್ತಪಡಿಸಿದ್ರು.

ಇದೀಗ ಸರ್ಕಾರಕ್ಕೆ ಆಗುತ್ತಿರುವ ಮುಜುಗರ ತಪ್ಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಸೂಚನೆ ನೀಡಿದ್ದಾರೆ. ಖುದ್ದು ಹೇಳಿಕೆ ನೀಡಿ ರಾಜೀನಾಮೆ ಕೊಡಲು  ಸಿಎಂ ಹೇಳಿದ್ದಾರೆ.

ನಿನ್ನೆ ಸಂಜೆಯೇ ಸಿಎಂ ಸಿದ್ದು ನಾಗೇಂದ್ರರನ್ನು ಕರೆಸಿ ಸೂಚನೆ ನೀಡಿದ್ದರು. ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ರು. ಸಚಿವರ ಮೌಖಿಕ ಆದೇಶ ಎಂದು ಡೆತ್​ನೋಟ್​ನಲ್ಲಿ ಉಲ್ಲೇಖವಾಗಿತ್ತು, ಈ ಹಿನ್ನೆಲೆಯಲ್ಲಿ ಸಚಿವ ನಾಗೇಂದ್ರ ಕರೆಸಿ ಸಿಎಂ ರಾಜೀನಾಮೆಗೆ ಸೂಚನೆ ನೀಡಿದ್ದಾರೆ. ವಿರೋಧ ಪಕ್ಷಗಳು ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿದ್ದು, ಯಾವುದೇ ಕ್ಷಣದಲ್ಲಿ ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆಯಿದೆ.

ಇದನ್ನೂ ಓದಿ : “ಕಾಗದ” ಚಿತ್ರದ ಟೀಸರ್​ಗೆ ಮೆಚ್ಚುಗೆಯ ಮಹಾಪೂರ – ಇದು ಮೊಬೈಲ್ ಪೂರ್ವದ ಲವ್ ಸ್ಟೋರಿ..!

Leave a Comment

DG Ad

RELATED LATEST NEWS

Top Headlines

ಉಪ ಚುನಾವಣೆ : ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್‌, ಸಂಡೂರಲ್ಲಿ ಅನ್ನಪೂರ್ಣ ತುಕಾರಾಂಗೆ ಕಾಂಗ್ರೆಸ್​ ಟಿಕೆಟ್..!

ಬೆಂಗಳೂರು : ರಾಜ್ಯದಲ್ಲಿ ಉಪಚುನಾವಣಾ ಕಣ ರಂಗೇರಿದ್ದು, ಎರಡು ಕ್ಷೇತ್ರಗಳಿಗೆ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಘೋಷಿಸಲಾಗಿದೆ. ಚನ್ನಪಟ್ಟಣದಿಂದ ಸಿ.ಪಿ.ಯೋಗೇಶ್ವರ್‌ ಹಾಗೂ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ ಅವರು ಸ್ಪರ್ಧಿಸಲಿದ್ದಾರೆ ಎಂದು ಎಐಸಿಸಿ

Live Cricket

Add Your Heading Text Here