ಬೆಂಗಳೂರು : ಬಿಜೆಪಿ, ಜೆಡಿಎಸ್ನವರು ಸರ್ಕಾರ ಬೀಳಿಸಲ್ಲ. ನಾವು ಯಾವತ್ತೂ ಸರ್ಕಾರ ಬೀಳಿಸುತ್ತೇವೆ ಅಂತ ಹೇಳಿಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಆರ್.ಅಶೋಕ್ ಅವರು, ಕಾಂಗ್ರೆಸ್ ಸರ್ಕಾರ ಬೀಳಿಸಲು ಕಾಂಗ್ರೆಸ್ನವರೇ ಸಾಕು. ಸಿಎಂ ಹುದ್ದೆಗಾಗಿ ಕಾಂಗ್ರೆಸ್ ನಾಯಕರೇ ಮ್ಯೂಸಿಕಲ್ ಚೇರ್ ಆಡ್ತಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.
ಡಿ.ಕೆ.ಶಿವಕುಮಾರ್, ಡಾ.ಜಿ.ಪರಮೇಶ್ವರ್, ಮಲ್ಲಿಕಾರ್ಜುನ ಖರ್ಗೆ, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ಜಮೀರ್ ಅಹ್ಮದ್ ನಡುವೆ ಪೈಪೋಟಿ ನಡೆದಿದೆ. ಎಲ್ಲರೂ ದೆಹಲಿಗೆ ಓಡಾಡುತ್ತಿದ್ದಾರೆ. ಸಿದ್ದರಾಮಯ್ಯ ಬಳಿಕ ಯಾರನ್ನು ಮುಖ್ಯಮಂತ್ರಿ ಮಾಡಬೇಕು ಎಂಬ ಬಗ್ಗೆ ಕಾಂಗ್ರೆಸ್ ನಾಯಕರಲ್ಲಿ ಚರ್ಚೆ ನಡೆದಿದೆ ಎಂದಿದ್ದಾರೆ.
ಇದನ್ನೂ ಓದಿ : ಮೈಸೂರು : ಪರಿಶಿಷ್ಟ ಮಹಿಳೆ ಮೇಲೆ ಅತ್ಯಾಚಾರವೆಸಗಿ ಹತ್ಯೆ – ಕೇಸ್ ದಾಖಲು..!
Post Views: 13