ಬೆಂಗಳೂರು : ಮುಡಾ ಹಗರಣ ಆರೋಪ ಸಂಬಂಧ ಸಿಎಂ ಸಿದ್ದರಾಮಯ್ಯ ಸಂಕಷ್ಟಕ್ಕೆ ಸಿಲುಕಿದ್ದಾರೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ನೀಡಿರುವ ಅನುಮತಿ ರದ್ದು ಕೋರಿ ಸಿಎಂ ಹೈಕೋರ್ಟ್ ಮೆಟ್ಟಿಲೇರಿದ್ದು, ಹೈಕೋರ್ಟ್‌ನಲ್ಲಿ ಬಿರುಸಿನ ವಾದ ಪ್ರತಿವಾದಗಳು ನಡೆಯುತ್ತಿದ್ದು ಈಗಾಗಲೇ 3 ಬಾರಿ ವಿಚಾರಣೆ ಮುಂದೂಡಿಕೆಯಾಗಿದೆ.
ಆಗಸ್ಟ್ 31ರಂದು ನಡೆದಿದ್ದ ವಿಚಾರಣೆಯಲ್ಲಿ ಎರಡು ಕಡೆಯ ವಕೀಲರು ಹಲವು ಅಂಶಗಳನ್ನು ಮುಂದಿಟ್ಟು ವಾದ ಪ್ರತಿವಾದ ನಡೆಸಿದ್ದರು. ಇಂದು ಮಧ್ಯಾಹ್ನ 2.30ಕ್ಕೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ನ್ಯಾಯಪೀಠದಲ್ಲಿ ಮತ್ತೆ ವಿಚಾರಣೆ ಮುದುವರಿಯಲಿದೆ.
ಸಿಎಂ ಸಿದ್ದರಾಮಯ್ಯ ಪರ ಅಭಿಷೇಕ್ ಮನು ಸಿಂಘ್ವಿ, ರಾಜ್ಯಪಾಲರ ಕಾರ್ಯದರ್ಶಿ ಪರ ಕೇಂದ್ರದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರು ವಾದ ಮಂಡಿಸಲಿದ್ದಾರೆ. ದೂರುದಾರರ ಪರ ಮಾಜಿ ಅಡ್ವೊಕೇಟ್ ಜನರಲ್ ಪ್ರಭುಲಿಂಗನಾವದಗಿ ವಾದ ಮಂಡಿಸಿದ್ದರು, ಇಂದು ಹಿರಿಯ ವಕೀಲ ಕೆ.ಜಿ.ರಾಘವನ್ ವಾದ ಮಂಡನೆಗೆ ಅವಕಾಶ ನೀಡಿದ್ದಾರೆ.
ಇದನ್ನೂ ಓದಿ : ಸಂಗೀತ ಲೋಕದಲ್ಲಿ ಅಜನೀಶ್ ಲೋಕನಾಥ್ ಹೊಸ ಮೈಲಿಗಲ್ಲು- 50 ಚಿತ್ರಗಳಿಗೆ ಸಂಗೀತ ನಿರ್ದೇಶನ..!