Download Our App

Follow us

Home » ರಾಜಕೀಯ » ಇಂದು ದಾಖಲೆಯ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ..!

ಇಂದು ದಾಖಲೆಯ ಬಜೆಟ್ ಮಂಡಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯನವರು ಇಂದು ಬೆಳಗ್ಗೆ 10:15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದಾರೆ. ಸಿದ್ದರಾಮಯ್ಯ ಮಂಡಿಸುತ್ತಿರುವ 15ನೇ ಬಜೆಟ್ ಇದಾಗಿದ್ದು, ಈ ಬಾರಿ 3.80 ಲಕ್ಷ ಕೋಟಿ ಬಜೆಟ್​ ಮಂಡಿಸಲಿದ್ದಾರೆ.

ಬಜೆಟ್ ಮಂಡನೆಗೂ ಮುನ್ನ ಸಿದ್ದರಾಮಯ್ಯ ಅವರು ವಿಶೇಷ ಸಂಪುಟ ಸಭೆ ನಡೆಸಲಿದ್ದಾರೆ. ಬೆಳಗ್ಗೆ 9.30ಕ್ಕೆ ಸಂಪುಟ ಸಭೆಯಲ್ಲಿ ಸಿಎಂ ತಮ್ಮ ಸಚಿವ ಸಂಪುಟ ಸಹೋದ್ಯೋಗಿಗಳ ಜತೆ ಚರ್ಚಿಸಲಿದ್ದಾರೆ. ಕಳೆದ ಬಾರಿ 3 ಲಕ್ಷದ 27 ಸಾವಿರ ಕೋಟಿ ಗಾತ್ರದ ಬಜೆಟ್​ ಮಂಡನೆ ಮಾಡಿದ್ದು, ಈ ವರ್ಷ 3.80 ಲಕ್ಷ ಕೋಟಿಗೂ ಹೆಚ್ಚು ಗಾತ್ರದ ಬಜೆಟ್​ ಮಂಡನೆಯಾಗಲಿದೆ.

ಕರ್ನಾಟಕದ ಮಟ್ಟಿಗೆ ಇದೊಂದು ಹೊಸ ದಾಖಲೆಯಾಗಿದೆ. ಲೋಕಸಭೆ ಚುನಾವಣೆಗೆ ಹೊತ್ತಲ್ಲೇ ಬಜೆಟ್ ಮಂಡನೆ ಮಾಡುತ್ತಿರುವುದರಿಂದ ಮಹತ್ವದ ಘೋಷಣೆಗಳು ಹೊರಬೀಳುವ ನಿರೀಕ್ಷೆಗಳಿವೆ.

ಕಳೆದ ಬಾರಿಗೆ ಹೋಲಿಕೆ ಮಾಡಿದ್ರೆ ಈ ಬಾರಿ ಬಜೆಟ್ ಗಾತ್ರ ಹೆಚ್ಚಾಗುವ ಸಾಧ್ಯತೆ ಇದೆ. ಕಳೆದ ಬಾರಿ ಬಜೆಟ್ ಗಾತ್ರ 3 ಲಕ್ಷದ 27 ಸಾವಿರ ಕೋಟಿ ರೂಪಾಯಿ ಇತ್ತು. ಈ ವರ್ಷದ ಬಜೆಟ್ ಗಾತ್ರ 3 ಲಕ್ಷದ 50 ರಿಂದ 80 ಸಾವಿರ ಕೋಟಿ ರೂಪಾಯಿ ದಾಟುವ ಸಾಧ್ಯತೆಯಿದ್ದು, ಸಾಲದ ಹೊರೆಯೂ ಈ ಬಾರಿ ಹೆಚ್ಚಳವಾಗುವ ಸಾಧ್ಯತೆಯಿದೆ. ಕಳೆದ ಬಜೆಟ್​ನಲ್ಲಿ ಸಾಲದ ಪ್ರಮಾಣ 85,815 ಕೋಟಿ ಇತ್ತು, ಈ ಬಾರಿ ಅಂದಾಜು 1 ಲಕ್ಷ ಕೋಟಿವರೆಗೂ ಸಾಲ ಹೆಚ್ಚಳವಾಗುವ ಸಾಧ್ಯತೆಯಿದೆ.

ಇದನ್ನೂ ಓದಿ : ನಕಲಿ ದಾಖಲೆ ಸೃಷ್ಟಿ : ಸಿಎಂ ಸಿದ್ದರಾಮಯ್ಯ ಆಪ್ತ ಎಂ.ಕೆ ಸೋಮಶೇಖರ್ ವಿರುದ್ಧ FIR..!

Leave a Comment

DG Ad

RELATED LATEST NEWS

Top Headlines

ರೀಲ್ಸ್​​ಗಾಗಿ ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯಲ್ಲಿ ಮಲಗಿದ್ದ ವ್ಯಕ್ತಿ – ವಿಡಿಯೋ ವೈರಲ್..!

ಯುವಜನತೆ ರೀಲ್ಸ್​ ಹುಚ್ಚಿನಿಂದ ಅದೇನೋ ಸಾಹಸಗಳನ್ನು ಮಾಡಲು ಹೋಗಿ ಪ್ರಾಣವನ್ನೇ ಕಳೆದುಕೊಂಡಿರೋದನ್ನು ನೋಡಿದ್ದೇವೆ. ಆದರೆ ಇಲ್ಲೊಬ್ಬ ಯುವಕ ರೀಲ್ಸ್​​ಗಾಗಿ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು

Live Cricket

Add Your Heading Text Here