ಬೆಂಗಳೂರು : ಮುಡಾ ಹಗರಣ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕಾರಣ ಸಿದ್ದರಾಮಯ್ಯ ವಿರುದ್ಧ ದೂರು ದಾಖಲಿಸಲು ಸಿದ್ಧತೆ ನಡೆದಿದೆ.
ಇದೀಗ ಪ್ರಾಸಿಕ್ಯೂಶನ್ಗೆ ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಅವರು ಎಮೆರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ಕರೆದಿದ್ದಾರೆ. ಈಗಾಗಲೇ ಸಿಎಂ ನಿವಾಸಕ್ಕೆ ಹೋಂ ಮಿನಿಸ್ಟರ್ ಪರಮೇಶ್ವರ್, ಡಿಸಿಎಂ ಡಿಕೆ ಶಿವಕುಮಾರ್ ಹಾಗೂ HC ಮಹಾದೇವಪ್ಪ ಕೂಡ ಆಗಮಿಸಿದ್ದಾರೆ. ಇನ್ನು ಕೆಲವೇ ಕ್ಷಣಗಳಲ್ಲಿ ಉಳಿದ ಸಚಿವರೂ ಈ ಕ್ಯಾಬಿನೆಟ್ ಸಭೆಯಲ್ಲಿ ಭಾಗಿಯಾಗಲಿದ್ದಾರೆ.
ಇನ್ನು ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಅದಕ್ಕೂ ಮುನ್ನ ಎಮೆರ್ಜೆನ್ಸಿ ಕ್ಯಾಬಿನೆಟ್ ಮೀಟಿಂಗ್ ರಾಜೀನಾಮೆ ಕೊಡಬೇಕೇ ಅಥವಾ ವಿಚಾರಣೆ ಎದುರಿಸಬೇಕೆ ಎಂದು ಸಿಎಂ ಸಿದ್ದರಾಮಯ್ಯ ಹಿರಿಯ ಸಚಿವರ ಜೊತೆ ಚರ್ಚೆ ಮಾಡಲಿದ್ದಾರೆ.
ಇದನ್ನೂ ಓದಿ : ಕೋಲ್ಕತ್ತಾ ವೈದ್ಯೆ ಅತ್ಯಾಚಾರ, ಕೊಲೆ ಖಂಡಿಸಿ ಇಂದು ಪ್ರತಿಭಟನೆ – ವೈದ್ಯರಿಗೆ ರಜೆ ನೀಡದಂತೆ ಸರ್ಕಾರ ಆದೇಶ..!