Download Our App

Follow us

Home » ರಾಜಕೀಯ » ರಾಯಚೂರು ಶಾಲಾ ಬಸ್​​​ ದುರಂತಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ ..!

ರಾಯಚೂರು ಶಾಲಾ ಬಸ್​​​ ದುರಂತಕ್ಕೆ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ ..!

ಬೆಂಗಳೂರು : ಶಾಲಾ ಬಸ್​​ ಹಾಗೂ ಸಾರಿಗೆ ಬಸ್​ ನಡುವೆ ಭೀಕರ ಅಪಘಾತ ಸಂಭವಿಸಿ ಇಬ್ಬರು ವಿದ್ಯಾರ್ಥಿಗಳು ಮೃತಪಟ್ಟು, ಹಲವು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಿನ ಮಾನ್ವಿ ತಾಲೂಕಿನ ಕಪಗಲ್ ಬಳಿ ನಡೆದಿದೆ. ಇದೀಗ ದುರಂತಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​​ ಮೂಲಕ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ರಾಯಚೂರು ಜಿಲ್ಲೆ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು ಮಕ್ಕಳು ಗಂಭೀರವಾಗಿ ಗಾಯಗೊಂಡ ಸುದ್ದಿ ಕೇಳಿ ಸಂಕಟವಾಯಿತು. ಮೃತ ಕಂದಮ್ಮಗಳ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ.

ಘಟನೆಯಲ್ಲಿ ಗಾಯಗೊಂಡ ಮಕ್ಕಳಿಗೆ ಉಚಿತ ಚಿಕಿತ್ಸೆಯ ವ್ಯವಸ್ಥೆ ಮಾಡಲಾಗುವುದು, ಮೃತ ಮಕ್ಕಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ಪರಿಹಾರವನ್ನು ನೀಡಲಾಗುವುದು. ಮಕ್ಕಳನ್ನು ಕಳೆದುಕೊಂಡ ಪೋಷಕರ ದುಃಖದಲ್ಲಿ ನಾನೂ ಭಾಗಿ ಎಂದು ಬರೆದುಕೊಂಡಿದ್ದಾರೆ.

ಇನ್ನು ಸಂತಾಪ ಸೂಚಿಸಿದ ಕೇಂದ್ರ ಸಚಿವ ಹೆಚ್​.ಡಿ ಕುಮಾರಸ್ವಾಮಿಯವರು, ರಾಯಚೂರು ಜಿಲ್ಲೆ ಮಾನ್ವಿಯ ಕಪಗಲ್ ಬಳಿ ರಾಜ್ಯ ಸಾರಿಗೆ ಬಸ್ & ಶಾಲಾ ಬಸ್ ನಡುವಿನ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸಾವನ್ನಪ್ಪಿರುವ ಸುದ್ದಿ ಕೇಳಿ ನನಗೆ ತೀವ್ರ ಆಘಾತವಾಗಿದೆ. ದುರಂತದಲ್ಲಿ ಮತ್ತಷ್ಟು ಮಕ್ಕಳು ತೀವ್ರ ಗಾಯಗೊಂಡು, ಕೆಲವರು ಕೈಕಾಲು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಅಪಘಾತದ ದೃಶ್ಯಗಳು ನನ್ನ ಮನಸ್ಸನ್ನು ಕಲಕಿ ಹಾಕಿವೆ.

ಮೃತ ಮಕ್ಕಳಿಗೆ ನನ್ನ ಶ್ರದ್ಧಾಂಜಲಿ. ಗಾಯಾಳು ಮಕ್ಕಳಿಗೆ @INCKarnataka ಸರ್ಕಾರವೇ ಸರ್ವ ಚಿಕಿತ್ಸೆಯನ್ನು ಉಚಿತವಾಗಿ ಕೊಡಿಸಬೇಕು, ತಕ್ಷಣವೇ ಅಗತ್ಯ ಪರಿಹಾರ ಘೋಷಿಸಬೇಕು. ರಸ್ತೆ ಸುರಕ್ಷತಾ ನಿಯಮಗಳ ಪಾಲನೆಯಲ್ಲಿ ನಿರ್ಲಕ್ಷ್ಯ, ಚಾಲಕರ ಅಸಡ್ಡೆ ಇಂಥ ದುರಂತಗಳಿಗೆ ಕಾರಣವಾಗುತ್ತಿದೆ. ಪ್ರತಿಯೊಬ್ಬರೂ ಸಾರಿಗೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎನ್ನುವುದು ನನ್ನ ಕಳಕಳಿಯ ಮನವಿ ಎಂದು ಬರೆದುಕೊಂಡಿದ್ದಾರೆ. 

ಇದನ್ನೂ ಓದಿ : ರೇಣುಕಾಸ್ವಾಮಿ ಕೊನೆ ಕ್ಷಣದ ಮತ್ತೊಂದು ಪೋಟೋ ರಿವೀಲ್..!​​

Leave a Comment

DG Ad

RELATED LATEST NEWS

Top Headlines

ಮೈಸೂರಿನಲ್ಲಿ ಹಾಡಹಗಲೇ ಮನೆ ಕಳ್ಳತನಕ್ಕೆ ಯತ್ನ – ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

ಮೈಸೂರು : ಮೈಸೂರಿನಲ್ಲಿ ಹಾಡುಹಗಲೇ ಮನೆಗಳ್ಳತನಕ್ಕೆ ಯತ್ನಿಸಿದ್ದ ಖದೀಮನ ಕಳ್ಳತನದ ಯತ್ನ ವಿಫಲವಾಗಿದೆ. ಜಿಲ್ಲೆಯ ಬನ್ನೂರಿನ ರಾಮದೇವರ ಬೀದಿಯಲ್ಲಿ ಜಯಮ್ಮ ಎಂಬುವರಿಗೆ ಸೇರಿದ ಮನೆಯಲ್ಲಿ ಕಳ್ಳತನದ ಯತ್ನ

Live Cricket

Add Your Heading Text Here