ಬೆಂಗಳೂರು : ಸಿಎಂ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ವಿಚಾರವಾಗಿ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ನಡುವೆಯೇ ಪ್ರಾಸಿಕ್ಯೂಷನ್ ಖಂಡಿಸಿ ಬೆಂಗಳೂರಿನ ಪ್ರೆಸ್ಕ್ಲಬ್ನಲ್ಲಿ ಪ್ರೆಸ್ಮೀಟ್ ಮಾಡ್ತಿದ್ದಾಗಲೇ ಕೋಲಾರದ ಕಾಂಗ್ರೆಸ್ ಮುಖಂಡ ರವಿಚಂದ್ರನ್ ಸಾವನ್ನಪ್ಪಿದ್ದಾರೆ.
ಇದೀಗ ರವಿಚಂದ್ರನ್ ಸಾವಿಗೆ ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ ಸಿಎಂ ಸಿದ್ದರಾಮಯ್ಯ ಅವರು, ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಆದೇಶ ನೀಡಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳು ಮತ್ತು ಅಲ್ಪ ಸಂಖ್ಯಾತರ ಸಂಘದ ವತಿಯಿಂದ ಬೆಂಗಳೂರು ಪ್ರೆಸ್ಕ್ಲಬ್ನಲ್ಲಿ ಸುದ್ದಿಗೋಷ್ಠಿ ನಡೆಸುತ್ತಿದ್ದ ವೇಳೆ ಸಂಘದ ಸದಸ್ಯ, ನಮ್ಮ ಪಕ್ಷದ ಕಾರ್ಯಕರ್ತ ಸಿ.ಕೆ.ರವಿಚಂದ್ರನ್ ಹೃದಯಾಘಾತದಿಂದ ನಿಧನರಾದ ಸುದ್ದಿ ತಿಳಿಯಿತು.
ಸಂವಿಧಾನ, ಪ್ರಜಾಪ್ರಭುತ್ವದ ಉಳಿವಿನ ಈ ಹೋರಾಟದಲ್ಲಿ ನಮ್ಮ ಜೊತೆಯಾಗಿದ್ದ ರವಿಚಂದ್ರನ್ ಅವರ ನಿಧನ ಅತೀವು ನೋವುಂಟು ಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ದುಃಖತಪ್ತ ಕುಟುಂಬಸ್ಥರು ಮತ್ತು ಬಂಧುಬಳಗದ ಜೊತೆ ನಾನಿದ್ದೇನೆ ಎಂದು ಸಿಎಂ ಟ್ವೀಟ್ ಮಾಡಿ ಸಂತಾಪ ಸೂಚಿಸಿದ್ದಾರೆ.
ಇದನ್ನೂ ಓದಿ : ಸದ್ಯದಲ್ಲೇ ಅಡ್ವೆಂಚರಸ್ ಕಾಮಿಡಿ ಕಥಾಹಂದರ ಒಳಗೊಂಡ ‘ಫಾರೆಸ್ಟ್’ ಚಿತ್ರದ ಟ್ರೈಲರ್ ರಿಲೀಸ್..!