Download Our App

Follow us

Home » ರಾಜಕೀಯ » ಗೆಲುವಿನ ತಂತ್ರಗಾರಿಕೆ ಶುರು ಮಾಡಿದ ಕಾಂಗ್ರೆಸ್​ : ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮೆಗಾ ಮೀಟಿಂಗ್​​​..!

ಗೆಲುವಿನ ತಂತ್ರಗಾರಿಕೆ ಶುರು ಮಾಡಿದ ಕಾಂಗ್ರೆಸ್​ : ಇಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಮೆಗಾ ಮೀಟಿಂಗ್​​​..!

ಬೆಂಗಳೂರು : ಲೋಕಸಭೆ ಚುನಾವಣಾ ಅಖಾಡ ರಂಗೇರಿದ್ದು, ಕಾಂಗ್ರೆಸ್​ ಗೆಲುವಿನ ತಂತ್ರಗಾರಿಕೆ ಶುರು ಮಾಡಿದೆ. ಇಂದು ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಮೆಗಾ ಮೀಟಿಂಗ್​​​ ನಡೆಸಲಿದ್ದಾರೆ. ಸಂಜೆ 4 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ತಂತ್ರಗಾರಿಕೆ ರೂಪಿಸಲಿದ್ದು, ಹಾಲಿ, ಮಾಜಿ MLA, MLCಗಳ ಜೊತೆ ನಾಯಕರು ಸಭೆ ಮಾಡಲಿದ್ದಾರೆ.

ಇದು ಮೊದಲ ಹಂತದ ಚುನಾವಣೆ ನಡೆಯುವ ಲೋಕಸಭಾ ಕ್ಷೇತ್ರಗಳ ಮೀಟಿಂಗ್​​ ಆಗಿದೆ. ಈ ಬಾರಿ ಕರ್ನಾಟಕದಿಂದ ಹೆಚ್ಚು ಸ್ಥಾನ ಗೆಲ್ಲಿಸಿಕೊಡುವ ಟಾಸ್ಕ್​​​​ ಇದ್ದು, ಕಾರ್ಯಕರ್ತರನ್ನು ವಿಶ್ವಾಸಕ್ಕೆ ಪಡೆದು ಹೇಗೆ ಗೆಲ್ಲಬೇಕು ಎನ್ನುವ ರಣತಂತ್ರ ರೂಪಿಸಲಿದ್ದಾರೆ. ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ರೆ ಸಿದ್ದು-ಡಿಕೆಶಿ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಕೆ ನೀಡಲಿದ್ದು, ಏಪ್ರಿಲ್​​ 26ರಂದು ಮೊದಲ ಹಂತದಲ್ಲಿ 14 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಲೀಡರ್ಸ್​ ಹಳೇ ಮೈಸೂರು ಭಾಗದ ನಾಯಕರ ಜೊತೆ ಸಭೆ ಮಾಡಲಿದ್ದಾರೆ.

ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ, ಕೋಲಾರ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಚಿತ್ರದುರ್ಗ ಕ್ಷೇತ್ರಗಳ ಮುಖಂಡರಿಗೆ ಬುಲಾವ್​​​ ನೀಡಲಿದ್ದಾರೆ.

ಇದನ್ನೂ ಓದಿ : ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ : ಬಾಂಬರ್​ಗೆ ತಮಿಳುನಾಡು ಲಿಂಕ್​​?

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಬೈಕ್ ಸವಾರನ ಶವವನ್ನು 18 ಕಿ.ಮೀ​ ಎಳೆದೊಯ್ದು ಪರಾರಿಯಾದ ಕಾರು ಚಾಲಕ..!

ಕಾರು ಚಾಲಕನೊಬ್ಬ ಬೈಕ್​ಗೆ ಡಿಕ್ಕಿ ಹೊಡೆದು ಸವಾರನನ್ನು ಬರೋಬ್ಬರಿ 18 ಕಿಲೋ. ಮೀಟರ್​ ದೂರಕ್ಕೆ ಎಳೆದೊಯ್ದು ಪರಾರಿಯಾಗಿರುವ ಘಟನೆ ಅನಂತಪುರದಲ್ಲಿ ನಡೆದಿದೆ. ಈ ಘಟನೆ ಭಾನುವಾರ ರಾತ್ರಿ

Live Cricket

Add Your Heading Text Here