Download Our App

Follow us

Home » ರಾಜಕೀಯ » ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ : ಜನಪ್ರತಿನಿಧಿಗಳ ಕೋರ್ಟ್‌ ಸೂಚನೆ..!

ಸಿಎಂ ಸಿದ್ದರಾಮಯ್ಯಗೆ 10 ಸಾವಿರ ದಂಡ : ಜನಪ್ರತಿನಿಧಿಗಳ ಕೋರ್ಟ್‌ ಸೂಚನೆ..!

ಬೆಂಗಳೂರು : ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್‌ನ ಜನಪ್ರತಿನಿಧಿ ನ್ಯಾಯಾಲಯ 10 ಸಾವಿರ ರೂ. ದಂಡ ವಿಧಿಸಿದೆ. ಹಾಗೆಯೇ ಖುದ್ದು ವಿಚಾರಣೆಗೆ ಹಾಜರಾಗಲು ಸಿದ್ದರಾಮಯ್ಯಗೆ ಹೈಕೋರ್ಟ್ ಆದೇಶ ನೀಡಿದೆ.

2022ರ ಏಪ್ರಿಲ್ 14ರಂದು ರೇಸ್ ವ್ಯೂ ಹೋಟೆಲ್ ಬಳಿ ಕಾಂಗ್ರೆಸ್ ಪ್ರತಿಭಟನೆ ನಡೆಸಿತ್ತು. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಹಿನ್ನೆಲೆಯಲ್ಲಿ ಸಚಿವರಾಗಿದ್ದ ಕೆ.ಎಸ್.‌ಈಶ್ವರಪ್ಪ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್‌ ನಾಯಕರು ರೇಸ್‌ಕೋರ್ಸ್‌ ರಸ್ತೆಯಲ್ಲಿ ಪ್ರತಿಭಟಿಸಿದ್ದರು.

ಸಾರ್ವಜನಿಕರಿಗೆ ಸಮಸ್ಯೆ ಉಂಟು ಮಾಡಿದ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯ ಸಿದ್ದರಾಮಯ್ಯ, ಸುರ್ಜೆವಾಲಾ ಸೇರಿದಂತೆ ಕಾಂಗ್ರೆಸ್‌ ನಾಯಕರಿಗೆ ದಂಡ ವಿಧಿಸಿದೆ. ಸಿದ್ದರಾಮಯ್ಯನವರಿಗೆ ಮಾರ್ಚ್‌ 6 ರಂದು ಖುದ್ದು ನ್ಯಾಯಾಲಯಕ್ಕೆ ಹಾಜರಾಗಲು ಕೋರ್ಟ್ ಸೂಚನೆ ನೀಡಿದೆ.

ಈ ಸಂಬಂಧ 42ನೇ ACMM ಕೋರ್ಟ್​ ಜಾಮೀನು ರಹಿತ ವಾರೆಂಟ್​ ಜಾರಿ ಮಾಡಿತ್ತು. ನಂತರ ಪ್ರಕರಣ ರದ್ದು ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವರಾದ ರಾಮಲಿಂಗಾ ರೆಡ್ಡಿ, ಎಂ.ಬಿ.‌ಪಾಟೀಲ್ ಮತ್ತು ಎಎಐಸಿಸಿ ಮುಖಂಡ ರಣದೀಪ್ ಸಿಂಗ್ ಸುರ್ಜೇವಾಲಾ ಸಲ್ಲಿಸಿದ್ದ ಅರ್ಜಿಯನ್ನ ಹೈಕೋರ್ಟ್​ ಪೀಠ ವಜಾಗೊಳಿಸಿದೆ.

ಇದನ್ನೂ ಓದಿ : ಕೇಂದ್ರದ ವಿರುದ್ಧ ನಾಳೆ ಕಾಂಗ್ರೆಸ್​ನಿಂದ ದೆಹಲಿ ಚಲೋ ಪ್ರೊಟೆಸ್ಟ್..!

Leave a Comment

DG Ad

RELATED LATEST NEWS

Top Headlines

ರವಿಶಂಕರ್ ಪುತ್ರ ಅದ್ವೈ ನಟನೆಯ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ – ಸಾಥ್ ಕೊಟ್ಟ ಶಿವಣ್ಣ..!

ಬಹುಭಾಷಾ ನಟ ಪಿ. ರವಿಶಂಕರ್​ ಅವರ ಪುತ್ರ ಅದ್ವೈ ಅಭಿನಯದ ಮೊದಲ ಸಿನಿಮಾ ‘ಸುಬ್ರಹ್ಮಣ್ಯ’ ಫಸ್ಟ್ ಲುಕ್ ರಿಲೀಸ್ ಆಗಿದೆ. ಗಣೇಶ ಚತುರ್ಥಿಯ ಶುಭ ದಿನವಾದ ಇಂದು

Live Cricket

Add Your Heading Text Here