Download Our App

Follow us

Home » ರಾಜಕೀಯ » ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಂದೇ ಶ್ರೀರಾಮನ ದೇವಾಲಯ ಉದ್ಘಾಟಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ..!

ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯಂದೇ ಶ್ರೀರಾಮನ ದೇವಾಲಯ ಉದ್ಘಾಟಿಸಲಿದ್ದಾರೆ ಸಿಎಂ ಸಿದ್ದರಾಮಯ್ಯ..!

ಜನವರಿ 22 ರಂದು ಅಯೋಧ್ಯೆ ಶ್ರೀರಾಮ ಮಂದಿರದಲ್ಲಿ ರಾಮಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ನಡೆಯಲಿದೆ. ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಮಾಡುವ ದಿನವೇ ಸಿಎಂ ಸಿದ್ದರಾಮಯ್ಯ ಶ್ರೀರಾಮನ ದೇವಾಲಯ ಉದ್ಘಾಟಿಸಲಿದ್ದಾರೆ.

ಬೆಂಗಳೂರು ಪೂರ್ವ ತಾಲೂಕಿನ ಬಿದರಹಳ್ಳಿಯಲ್ಲಿ ನಿರ್ಮಿಸಿರುವ ಸೀತಾ, ರಾಮ, ಲಕ್ಷ್ಮಣ, ಆಂಜನೇಯ ದೇವಾಲಯವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ.

ಸೀತಾ ರಾಮ ಲಕ್ಷ್ಮಣ ಹಾಗೂ 33 ಅಡಿ ಎತ್ತರದ ಏಕಶಿಲಾ ಆಂಜನೇಯ ಸ್ವಾಮಿ ನೂತನ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಅವರು ಭಾಗಿಯಾಗಲಿದ್ದಾರೆ.

ಅಯೋಧ್ಯಾ ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದಿಂದ ಕಾಂಗ್ರೆಸ್ ಪಕ್ಷ ದೂರ ಉಳಿದುಕೊಂಡಿದೆ. ಸಿಎಂ ಸಿದ್ದರಾಮಯ್ಯ ಅವರು ಕೂಡ ತಮಗೆ ಆಹ್ವಾನ ಬಂದಿಲ್ಲ, ಕಾರ್ಯಕ್ರಮದಲ್ಲಿ ಭಾಗಿಯಾಗೋದಿಲ್ಲ. ಮುಂದಿನ ದಿನಗಳಲ್ಲಿ ಅಯೋಧ್ಯೆಗೆ ಭೇಟಿ ನೀಡಿ ದರ್ಶನ ಪಡೆದುಕೊಳ್ಳುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ.

ಕಳೆದ ಎರಡು ವರ್ಷಗಳಿಂದ ಮಂದಿರದ ಕಾಮಗಾರಿ ನಡೆಯುತ್ತಿದ್ದು, ಶೇ.80 ರಷ್ಟು ಕಾಮಗಾರಿ ಸಂಪೂರ್ಣಗೊಂಡಿದೆ. ಸುಮಾರು 120 ಅಡಿ ಉದ್ದದ ಹಾಗೂ 45 ಅಡಿ ಎತ್ತರದ ರಾಮ ಮಂದಿರ ಇದಾಗಿದ್ದು, ಗರ್ಭಗುಡಿ 40X60 ಅಡಿ ವಿಶಾಲವಾಗಿದೆ. ಗರ್ಭಗುಡಿ ಸುತ್ತ 10 ದೇವರ ಸ್ಥಾಪನೆಗೆ ಪ್ರಭಾವಳಿಗಳನ್ನು ನಿರ್ಮಾಣ ಮಾಡಲಾಗಿದೆ.

ಇದನ್ನೂ ಓದಿ : ಮಂತ್ರಾಲಯದಲ್ಲಿ ಕಮಲ ಪೀಠದ ಮೇಲೆ 36 ಅಡಿ ಅಭಯರಾಮನ ಪ್ರತಿಷ್ಠಾಪನೆ..!

Leave a Comment

DG Ad

RELATED LATEST NEWS

Top Headlines

ವಾಹನ ಸವಾರರೇ ಹುಷಾರ್… ಇನ್ಮುಂದೆ 130km ವೇಗಕ್ಕಿಂತ ಹೆಚ್ಚಿನ ವೇಗದಲ್ಲಿ ಸಂಚರಿಸಿದರೆ ಬೀಳುತ್ತೆ ಎಫ್‌ಐಆರ್‌..!

ಬೆಂಗಳೂರು : ಇನ್ಮುಂದೆ ರಾಜ್ಯಾದ್ಯಂತ ಗಂಟೆಗೆ 130 ಕಿಮೀ ವೇಗಕ್ಕಿಂತ ಹೆಚ್ಚು ವೇಗದಲ್ಲಿ ವಾಹನ ಚಲಾಯಿಸಿದರೆ ಅಂತವರ ವಿರುದ್ಧ FIR ದಾಖಲಿಸಲಾಗುವುದು ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ

Live Cricket

Add Your Heading Text Here