Download Our App

Follow us

Home » ರಾಜಕೀಯ » ಮಂಡ್ಯದ ಮಳವಳ್ಳಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ..!

ಮಂಡ್ಯದ ಮಳವಳ್ಳಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಶಕ್ತಿ ಪ್ರದರ್ಶನ..!

ಮಂಡ್ಯ : ಸಿಎಂ ಸಿದ್ದರಾಮಯ್ಯ ಇಂದು ಮಂಡ್ಯ ಜಿಲ್ಲೆ ಮಳವಳ್ಳಿಯಲ್ಲಿ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಬೃಹತ್ ಸಮಾವೇಶ ನಡೆಯಲಿದ್ದು, ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆಯನ್ನು ಸಿಎಂ ಸಿದ್ದರಾಮಯ್ಯ ನೆರವೇರಿಸಲಿದ್ದಾರೆ.

ಮಳವಳ್ಳಿಯ ಶಾಂತಿಕಾಲೇಜು ಮುಂಭಾಗ ಇಂದು ಆಯೋಜಿಸಿರುವ ಗ್ಯಾರಂಟಿ ಯೋಜನೆ ಫಲಾನುಭವಿಗಳಿಗೆ ಸವಲತ್ತು ವಿತರಣೆ ಮಾಡಲಿದ್ದಾರೆ. ಇಂದು ಬೆಳಗ್ಗೆ 11.30ಕ್ಕೆ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಇದಕ್ಕೂ ಮುನ್ನ ತಾಲ್ಲೂಕಿನ ಮಂಚನಹಳ್ಳಿಯಲ್ಲಿ ನಿರ್ಮಿಸಿರುವ ಭಕ್ತ ಶ್ರೀ ಕನಕದಾಸರ ಪುತ್ಥಳಿ ಹಾಗೂ ಎರಡು ಸಹಕಾರ ಸಂಘಗಳನ್ನು ಸಿಎಂ ಉದ್ಘಾಟಿಸಲಿದ್ದಾರೆ.

ಪಟ್ಟಣದಲ್ಲಿ ಸಾರ್ವಜನಿಕ ಕನಕದಾಸ ಕುರುಬ ಸಮಾಜದ ವಿದ್ಯಾರ್ಥಿ ನಿಲಯ ಹಾಗೂ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ಸಚಿವರಾದ ಚೆಲುವರಾಯಸ್ವಾಮಿ, ಹೆಚ್ ಸಿ ಮಹದೇವಪ್ಪ, ಕೃಷ್ಣ ಭೈರೇಗೌಡ, ಸತೀಶ್ ಜಾರಕಿಹೊಳಿ, ಕೆ ಜೆ ಜಾರ್ಜ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ, ಲಕ್ಷ್ಮೀ ಹೆಬ್ಬಾಳ್ಕರ್, ಬಿ ಎಸ್ ಸುರೇಶ್, ರಹೀಂ ಖಾನ್ ಮೊದಲಾದವರು ಭಾಗವಹಿಸಲಿದ್ದಾರೆ. ಬೃಹತ್ ಸಮಾವೇಶ ಹಿನ್ನೆಲೆಯಲ್ಲಿ ದೊಡ್ಡ ವೇದಿಕೆ ಸಿದ್ದವಾಗಿದ್ದು ಸುಮಾರು 50 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆಯಿದೆ.

ಇದನ್ನೂ ಓದಿ : ಕಲಬುರಗಿ : ಸ್ಕೂಟರ್​ನಲ್ಲಿದ್ದ 2 ಲಕ್ಷ ರೂಪಾಯಿ ಕದ್ದ ಖದೀಮ.. ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆ..!

Btv Kannada1
Author: Btv Kannada1

Leave a Comment

RELATED LATEST NEWS

Top Headlines

ಉಡುಪಿ : ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆ ಸಾ*ವು..!

ಉಡುಪಿ : 80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶವಿದೆ. ಹಾಗಾಗಿ ಮನೆಯಲ್ಲಿ ಮತದಾನ ಮಾಡಿದ ಕೆಲವೇ ಕ್ಷಣಗಳಲ್ಲಿ ವೃದ್ಧೆಯೊಬ್ಬರು ಸಾವನ್ನಪ್ಪಿದ್ದಾರೆ. ಪಿ.ಯಶೋಧಾ ನಾರಾಯಣ ಉಪಾಧ್ಯ

Live Cricket

Add Your Heading Text Here