Download Our App

Follow us

Home » ರಾಜಕೀಯ » ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ..!

ಈದ್ಗಾ ಮೈದಾನದಲ್ಲಿ ನಡೆದ ಬಕ್ರೀದ್ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾದ ಸಿಎಂ ಸಿದ್ದರಾಮಯ್ಯ..!

ಬೆಂಗಳೂರು : ರಾಜ್ಯಾದ್ಯಂತ ಇಂದು ಬಕ್ರೀದ್ ಹಬ್ಬದ ಸಂಭ್ರಮ ಮನೆ ಮಾಡಿದೆ. ಮುಸಲ್ಮಾನ ಸಮುದಾಯದ ಪವಿತ್ರ ಹಬ್ಬಗಳಲ್ಲೊಂದಾದ ಬಕ್ರೀದ್ ಹಬ್ಬವನ್ನು ಇಂದು ಸಂಭ್ರಮ ಸಡಗರದಿಂದ ಆಚರಣೆ ಮಾಡಲಾಗ್ತಿದ್ದು, ಬೆಳಗ್ಗಿನಿಂದಲೇ ಮಸೀದಿಗಳಲ್ಲಿ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.

ಬಕ್ರೀದ್ ಹಬ್ಬ ಹಿನ್ನೆಲೆ ಇಂದು ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ನಡೆದ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದಾರೆ. ಬೆಳಗ್ಗೆ 9 ಗಂಟೆಗೆ ಈದ್ಗಾ ಮೈದಾನದಲ್ಲಿ ನಡೆದ ಮುಸಲ್ಮಾನ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಪಾಲ್ಗೊಂಡು ಮುಸ್ಲಿಂ ಬಾಂಧವರಿಗೆ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದ್ದಾರೆ. 

ಇದೇ ವೇಳೆ ಸಿಎಂ ಸಿದ್ದರಾಮಯ್ಯ ಮಾತನಾಡಿ, ಇವತ್ತು ಇಡೀ ಭಾರತದಲ್ಲಿ ಬಕ್ರೀದ್ ಹಬ್ಬದ ಆಚರಣೆ ಮಾಡಲಾಗುತ್ತಿದೆ. ನೀವೆಲ್ಲರು ಮನುಕುಲಕ್ಕೆ ಒಳ್ಳೆಯದಾಗಲಿ ಅಂತ ಪ್ರಾರ್ಥನೆ ಮಾಡಿದ್ದೀರಿ. ಈ ಸಮಯದಲ್ಲಿ ನಾನು ಮುಸ್ಲಿಂ ಬಾಂಧವರಿಗೆ ಶುಭಾಶಯ ಕೋರುತ್ತೇನೆ ಎಂದು ಹೇಳಿದರು.

ಇನ್ನು, ಈದ್ ಉಲ್ ಅಝಾ ಇದನ್ನು ತಿಳಿಸಿ, ಇದು ಬಹುತ್ವದ ದೇಶ. ಎಲ್ಲಾ ಭಾಷೆ, ಧರ್ಮಕ್ಕೆ ಸಮಾನತೆ ಕೊಡುವ ದೇಶ. ಎಲ್ಲರಲ್ಲೂ ಸಹಿಷ್ಣುತೆ ಬರಬೇಕು. ಇನ್ನೊಂದು ಧರ್ಮವನ್ನು ಪ್ರೀತಿಸುವ ಮನೋಭಾವ ಬೆಳಿಬೇಕು. ಆಗ ರಾಷ್ಟ್ರ, ಸಮಾಜ ಏಳಿಗೆ ಆಗುತ್ತೆ ಎಂದು ಮಾತನಾಡಿದರು. ನಾವು ಸಂವಿಧಾನದ ಮೇಲೆ ನಂಬಿಕೆ ಇಟ್ಟವರು. ರಾಜ್ಯದ 7 ಕೋಟಿ ಜನರನ್ನು ರಕ್ಷಣೆ ಮಾಡುವ ಜವಾಬ್ದಾರಿ ಸರ್ಕಾರದ್ದು, ಈ‌ ಕೆಲಸವನ್ನು ನಾವು ತಾರತಮ್ಯ ಇಲ್ಲದೇ ಮಾಡುತ್ತೇವೆ. ಅಲ್ಪಸಂಖ್ಯಾರನ್ನು ಸಮಾನರಾಗಿ ನೋಡುವ ಮನೋಭಾವ ನಮ್ಮದು ಎಂದು ಹೇಳಿ ಮತ್ತೊಮ್ಮೆ ಎಲ್ಲರಿಗೂ ಬಕ್ರೀದ್ ಹಬ್ಬದ ಶುಭಾಶಯ ತಿಳಿಸಿದರು.

ಸಿಎಂ ಸಿದ್ದರಾಮಯ್ಯ ಅವರು ಪ್ರತಿವರ್ಷ ಬಕ್ರೀದ್ ಆಚರಣೆ ವೇಳೆ ಮುಸ್ಲಿಂ ಬಾಂಧವರ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗಿಯಾಗುತ್ತಾ ಬಂದಿದ್ದಾರೆ. ಮುಸ್ಲಿಂ ಧರ್ಮ ಗುರುಗಳಿಂದ ಸಂಪ್ರದಾಯಿಕವಾಗಿ ಟೋಪಿ ಧರಿಸಿ, ನಾವೆಲ್ಲರೂ ಮನುಷ್ಯರು ಪರಸ್ಪರ ಪ್ರೀತಿಯಿಂದ ಇರಬೇಕು ಎಂಬ ಸಂದೇಶವನ್ನು ನೀಡುತ್ತಾ ಬಂದಿದ್ದಾರೆ.

ಇದನ್ನೂ ಓದಿ : ವಾಲ್ಮೀಕಿ ನಿಗಮದ ಬಹುಕೋಟಿ ಹಗರಣ ಕೇಸ್​ – ಬಂಧಿತ ಆರೋಪಿ ನಾಗೇಶ್ವರ್ ರಾವ್​ ಮನೆಯಲ್ಲಿ 1.49 ಕೋಟಿ ಹಣ ಜಪ್ತಿ..!

 

 

 

 

Leave a Comment

DG Ad

RELATED LATEST NEWS

Top Headlines

ವಿದ್ಯುತ್ ಸಂಪರ್ಕ ನೀಡಲು 16.5 ಲಕ್ಷ ರೂ. ಲಂಚಕ್ಕೆ ಬೇಡಿಕೆ – ರೆಡ್​ ಹ್ಯಾಂಡ್​ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ಬೆಸ್ಕಾಂ AEE-JE ಅಧಿಕಾರಿಗಳು..!

ಬೆಂಗಳೂರು : ಲಂಚ ಸ್ಚೀಕರಿಸುವಾಗ AEE, JE ರೆಡ್ ಹ್ಯಾಂಡಾಗಿ ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ನಡೆದಿದೆ. ಅವಲಹಳ್ಳಿ ಬೆಸ್ಕಾಂ AEE ರಮೇಶ್ ಬಾಬು, JE ನಾಗೇಶ್

Live Cricket

Add Your Heading Text Here